Pakistan: ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರ ಇಳಿಸಿ ಗುಂಡಿನ ದಾಳಿ, 31 ಮಂದಿ ಸಾವು
ಪಾಕಿಸ್ತಾನದ ಬಲೂಚಿಸ್ತಾನದ ರಾರಶಮ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಬಸ್ ನಿಲ್ಲಿಸಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ ಬಂದೂಕುಧಾರಿಗಳು 31 ಪ್ರಯಾಣಿಕರನ್ನು ಕೊಲೆ ಮಾಡಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರ ಇಳಿಸಿ ಗುಂಡಿನ ದಾಳಿ ನಡೆಸಿ 31 ಮಂದಿಯನ್ನು ಕೊಂದು ಹಾಕಿದ್ದಾರೆ.
ಪಾಕಿಸ್ತಾನದ ಬಲೂಚಿಸ್ತಾನದ ರಾರಶಮ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಬಸ್ ನಿಲ್ಲಿಸಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ ಬಂದೂಕುಧಾರಿಗಳು 31 ಪ್ರಯಾಣಿಕರನ್ನು ಕೊಲೆ ಮಾಡಿದ್ದಾರೆ.
ಆಕ್ರಮಣಕಾರರು ಅಂತರ-ಪ್ರಾಂತೀಯ ಬಸ್‌ಗಳು ಮತ್ತು ಟ್ರಕ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಶಸ್ತ್ರಸಜ್ಜಿತ ಪುರುಷರು ಹೆದ್ದಾರಿಯನ್ನು ತಡೆದು, ವಾಹನಗಳನ್ನು ಅಡ್ಡಿಪಡಿಸಿ ಪ್ರಯಾಣಿಕರನ್ನು ಕೆಳಗಿಳಿಸಿ ಗುರುತಿನ ಚೀಟಿ ತಪಾಸಣೆ ಮಾಡಿ ಗುಂಡಿಟ್ಟು ಪ್ರಯಾಣಿಕರನ್ನು ಕೊಂದು ಹಾಕಿದ್ದಾರೆ.
ಅಲ್ಲದೆ ಹತ್ಯೆಯ ನಂತರ, ದಾಳಿಕೋರರು ಸ್ಥಳದಿಂದ ಪಲಾಯನ ಮಾಡುವ ಮೊದಲು ಹತ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ದಾಳಿಯನ್ನು ಭಯೋತ್ಪಾದಕ ಕೃತ್ಯ ಎಂದು ಬಲೂಚಿಸ್ತಾನ ಮುಖ್ಯಮಂತ್ರಿ ಸರ್ಫರಾಜ್ ಬುಗ್ತಿ ಕರೆದಿದ್ದು, ಸೂಕ್ತ ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಈ ಹಿಂದೆಯೂ ಕೂಡ ಬಲೂಚಿನಸ್ತಾನದಲ್ಲಿ ಪಂಜಾಬ್‌ನ ಜನರನ್ನು ಗುರಿಯಾಗಿಸಿಕೊಂಡು ಹಲವು ದಾಳಿಗಳು ನಡೆದಿದ್ದು, ಸುಮಾರು ನಾಲ್ಕು ತಿಂಗಳ ನಂತರ ಮುಸಾಖೆಲ್ ನಲ್ಲಿ ಇಂತಹುದೇ ದಾಳಿ ನಡೆದಿತ್ತು. ಏಪ್ರಿಲ್‌ನಲ್ಲಿ, ನೋಶ್ಕಿ ಬಳಿ ಒಂಬತ್ತು ಪ್ರಯಾಣಿಕರನ್ನು ಬಸ್‌ನಿಂದ ಇಳಿಸಿ ಅವರ ಗುರುತಿನ ಚೀಟಿಗಳನ್ನು ನೋಡಿದ ನಂತರ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದು ಹಾಕಿದ್ದರು.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಲೂಚಿಸ್ತಾನದ ಕೆಚ್ ಜಿಲ್ಲೆಯ ಟರ್ಬತ್‌ನಲ್ಲಿ ಪಂಜಾಬ್‌ನ ಆರು ಕಾರ್ಮಿಕರನ್ನು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದರು. ಎಲ್ಲರೂ ದಕ್ಷಿಣ ಪಂಜಾಬ್‌ನ ವಿವಿಧ ಪ್ರದೇಶಕ್ಕೆ ಸೇರಿದವರಾಗಿದ್ದರು. ಇದೇ ರೀತಿಯ ಘಟನೆ 2015 ರಲ್ಲಿ ನಡೆದಿತ್ತು, ಮುಂಜಾನೆ ಟರ್ಬತ್ ಬಳಿ ಕಾರ್ಮಿಕರ ಶಿಬಿರದ ಮೇಲೆ ಬಂದೂಕುಧಾರಿಗಳು ದಾಳಿ ಮಾಡಿದ್ದರಿಂದ 20 ಕಟ್ಟಡ ಕಾರ್ಮಿಕರು ಸಾವನ್ನಪ್ಪಿದರು. ಎಲ್ಲರೂ ಸಿಂಧ್, ಪಂಜಾಬ್ ಪ್ರಾಂತ್ಯದವರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



