ರಾಮಾಯಣ, ಮಹಾಭಾರತ ಅರೇಬಿಕ್ ಗೆ ಅನುವಾದ: ಭೇಟಿಯಾದ ಪ್ರಧಾನಿ ಮೋದಿ
ಇಂದು ಲೇಖಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ ಎರಡು ಮಹಾಕಾವ್ಯಗಳ ಅರೇಬಿಕ್ ಆವೃತ್ತಿಗಳಿಗೆ ಸಹಿ ಹಾಕಿದರು.

ಕುವೈತ್: ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ದಿನವಾದ ಶನಿವಾರ ಭಾರತದ ಎರಡು ಅಪ್ರತಿಮ ಮಹಾಕಾವ್ಯಗಳಾದ ಮಹಾಭಾರತ ಮತ್ತು ರಾಮಾಯಣವನ್ನು ಅರೇಬಿಕ್ ಭಾಷೆಗೆ ಅನುವಾದಿಸಿ ಪ್ರಕಟಿಸಿದ ಇಬ್ಬರು ಕುವೈತ್ ಪ್ರಜೆಗಳನ್ನು ಭೇಟಿಯಾದರು.
ಇಂದು ಲೇಖಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ ಎರಡು ಮಹಾಕಾವ್ಯಗಳ ಅರೇಬಿಕ್ ಆವೃತ್ತಿಗಳಿಗೆ ಸಹಿ ಹಾಕಿದರು.
"ರಾಮಾಯಣ ಮತ್ತು ಮಹಾಭಾರತದ ಅರೇಬಿಕ್ ಭಾಷಾಂತರಗಳನ್ನು ನೋಡಲು ನನಗೆ ಸಂತೋಷವಾಗುತ್ತಿದೆ. ನಾನು ಅಬ್ದುಲ್ಲಾ ಅಲ್-ಬರೂನ್ ಮತ್ತು ಅಬ್ದುಲ್ ಲತೀಫ್ ಅಲ್-ನೆಸೆಫ್ ಅವರ ಅನುವಾದ ಮತ್ತು ಪ್ರಕಟಣೆಯಲ್ಲಿ ಅವರ ಪ್ರಯತ್ನಗಳಿಗಾಗಿ ಅಭಿನಂದಿಸುತ್ತೇನೆ. ಅವರ ಈ ಕ್ರಮವು ಜಾಗತಿಕವಾಗಿ ಭಾರತೀಯ ಸಂಸ್ಕೃತಿಯ ಜನಪ್ರಿಯತೆಯನ್ನು ಎತ್ತಿ ತೋರಿಸುತ್ತದೆ ಎಂದು ಪ್ರಧಾನಿ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕೋಟ್ಯಂತರ ಹಿಂದೂಗಳ ನಂಬಿಕೆಯ ಪ್ರತೀಕವಾಗಿರುವ ‘ರಾಮಾಯಣ’ ಮತ್ತು ‘ಮಹಾಭಾರತ’ದ ಪುಸ್ತಕವನ್ನು ಕುವೈತ್‌ನಲ್ಲಿ ಪ್ರಧಾನಿ ಮೋದಿ ಹಿಡಿದುಕೊಂಡಿರುವ ಫೋಟೋ ಭಾರೀ ವೈರಲ್ ಆಗುತ್ತಿದೆ.
ಕುವೈತ್‌ನ ಅಮೀರ್, ಶೇಖ್ ಮಿಶಾಲ್ ಅಲ್ ಅಹ್ಮದ್ ಅಲ್ ಜಬೇರ್ ಅಲ್ ಸಬ್ಹಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಕುವೈತ್‌ಗೆ ತೆರಳಿದ್ದಾರೆ.
ಇದು 43 ವರ್ಷಗಳ ನಂತರ ಗಲ್ಫ್ ರಾಷ್ಟ್ರಕ್ಕೆ ಭಾರತದ ಪ್ರಧಾನಿಯೊಬ್ಬರು ಮೊದಲ ಬಾರಿ ಭೇಟಿ ನೀಡುತ್ತಿದ್ದಾರೆ.
ಭೇಟಿ ವೇಳೆ ಮೋದಿಯವರು ಅಲ್ಲಿನ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ ಜೊತೆಗೆ ಕುವೈತ್‌ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಭೇಟಿಯು ಭಾರತ ಮತ್ತು ಕುವೈತ್ ನಡುವಿನ ಬಹುಮುಖಿ ಸಂಬಂಧವನ್ನು ಬಲಪಡಿಸಲು ನೆರವಾಗಲಿದೆ ಎಂದು ಸಚಿವಾಲಯ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



