ವಿದೇಶ

Scotland: ನಾಪತ್ತೆಯಾಗಿದ್ದ ಕೇರಳದ ವಿದ್ಯಾರ್ಥಿನಿಯ ಶವ ನದಿಯಲ್ಲಿ ಪತ್ತೆ

ಡಿಸೆಂಬರ್ 27 ರಂದು ಬೆಳಗ್ಗೆ 11-55ರ ಸುಮಾರಿಗೆ ಎಡಿನ್‌ಬರ್ಗ್ ಬಳಿಯ ನ್ಯೂಬ್ರಿಡ್ಜ್ ನದಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಗುರುತನ್ನು ಇನ್ನೂ ಅಧಿಕೃತವಾಗಿ ಪತ್ತೆ ಹಚ್ಚಿಲ್ಲ. ಆದಾಗ್ಯೂ, ಸಂತ್ರಾ ಸಾಜು ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ.

Scotland: ನಾಪತ್ತೆಯಾಗಿದ್ದ ಕೇರಳದ ವಿದ್ಯಾರ್ಥಿನಿಯ ಶವ ನದಿಯಲ್ಲಿ ಪತ್ತೆ
ನಾಪತ್ತೆಯಾಗಿದ್ದ ಕೇರಳದ ವಿದ್ಯಾರ್ಥಿನಿ
Published On :

ಲಂಡನ್: ಈ ತಿಂಗಳ ಆರಂಭದಿಂದ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿನಿಯ ಶವ ಸ್ಕಾಟ್ಲೆಂಡ್‌ನ ನದಿಯೊಂದರಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಇನ್ನೂ ಅಧಿಕೃತವಾಗಿ ಗುರುತಿಸದಿದ್ದರೂ ಆಕೆಯ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಕೇರಳದ ಸಂತ್ರಾ ಸಾಜು ಸ್ಕಾಟಿಷ್ ರಾಜಧಾನಿ ಎಡಿನ್‌ಬರ್ಗ್‌ನಲ್ಲಿರುವ ಹೆರಿಯಟ್-ವ್ಯಾಟ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಡಿಸೆಂಬರ್ 27 ರಂದು ಬೆಳಗ್ಗೆ 11-55ರ ಸುಮಾರಿಗೆ ಎಡಿನ್‌ಬರ್ಗ್ ಬಳಿಯ ನ್ಯೂಬ್ರಿಡ್ಜ್ ನದಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಗುರುತನ್ನು ಇನ್ನೂ ಅಧಿಕೃತವಾಗಿ ಪತ್ತೆ ಹಚ್ಚಿಲ್ಲ. ಆದಾಗ್ಯೂ, ಸಂತ್ರಾ ಸಾಜು ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ.

ಸಾವಿನ ಕುರಿತು ಯಾವುದೇ ಅನುಮಾನ ಉಂಟಾಗಿಲ್ಲ. ವರದಿಯನ್ನು ಸ್ಕಾಟ್ಲೆಂಡ್‌ನ ಪ್ರಾಸಿಕ್ಯೂಷನ್ ಸೇವೆ ಮತ್ತು ತನಿಖಾ ಸಂಸ್ಥೆಗೆ ಕಳುಹಿಸಲಾಗುವುದು ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಡಿಸೆಂಬರ್ 6 ರಂದು ಸಂಜೆ ಲಿವಿಂಗ್‌ಸ್ಟನ್‌ನ ಆಲ್ಮಂಡ್‌ವೇಲ್‌ನಲ್ಲಿರುವ ಅಸ್ಡಾ ಸೂಪರ್‌ಮಾರ್ಕೆಟ್ ಅಂಗಡಿಯಲ್ಲಿ ಸಾಜು ಕೊನೆಯ ಬಾರಿಗೆ ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದ್ದರು.

ತುರ್ತಾಗಿ ಕಾಣೆಯಾದ ಸಾಜು ಕುರಿತು ಆಕೆಯ ಕುಟುಂಬಸ್ಥರು ಹಾಗೂ ಸ್ನೇಹಿತರಿಂದ ದೂರು ಸ್ವೀಕರಿಸಿದ ಪೊಲೀಸರು ಆಕೆ ಬಗ್ಗೆ ಸುಳಿವು ಸಿಕ್ಕಲ್ಲಿ ಮಾಹಿತಿ ನೀಡುವಂತೆ ತಿಳಿಸಿದ್ದರು.ಸೂಪರ್ ಮಾರ್ಕೆಟ್ ನಲ್ಲಿದ್ದ ಸಾಜು ಅವರ ಫೋಟೋವನ್ನು ಬಿಡುಗಡೆ ಮಾಡಿದ್ದ ಪೊಲೀಸರು, ಆಕೆಯ ಪತ್ತೆಗಾಗಿ ವ್ಯಾಪಕ ವಿಚಾರಣೆ ನಡೆಸುತ್ತಿದ್ದರು. ಈ ಮಧ್ಯೆ ಆಕೆಯದು ಎನ್ನಲಾದ ಮೃತದೇಹ ನದಿಯೊಂದರಲ್ಲಿ ಪತ್ತೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.