ಉಕ್ರೇನ್ ಗೆ ಸೇನಾಪಡೆ ಕಳುಹಿಸಿದರೆ ಪರಮಾಣು ಯುದ್ಧ: ರಷ್ಯಾ ಅಧ್ಯಕ್ಷ ಪುಟಿನ್ ಎಚ್ಚರಿಕೆ
ಉಕ್ರೇನ್‌ನಲ್ಲಿ ಹೋರಾಡಲು ತನ್ನ ಸೈನ್ಯವನ್ನು ಕಳುಹಿಸುವ ಧೈರ್ಯಮಾಡುವ ಯಾವುದೇ ಪಾಶ್ಚಿಮಾತ್ಯ ರಾಷ್ಟ್ರಗಳು "ಅಣ್ವಸ್ತ್ರ ಬಳಕೆಯ ಪರಿಣಾಮ" ಎದುರಿಸಬೇಕಾಗುತ್ತದೆ.

ಮಾಸ್ಕೋ: ಉಕ್ರೇನ್‌ನಲ್ಲಿ ಹೋರಾಡಲು ತನ್ನ ಸೈನ್ಯವನ್ನು ಕಳುಹಿಸುವ ಧೈರ್ಯಮಾಡುವ ಯಾವುದೇ ಪಾಶ್ಚಿಮಾತ್ಯ ರಾಷ್ಟ್ರಗಳು "ಅಣ್ವಸ್ತ್ರ ಬಳಕೆಯ ಪರಿಣಾಮ" ಎದುರಿಸಬೇಕಾಗುತ್ತದೆ ಎಂದು ಗುರುವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎಚ್ಚರಿಕೆ ನೀಡಿದ್ದಾರೆ.
ಇಂದು ರಷ್ಯಾ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ಪುಟಿನ್, "ಪಾಶ್ಚಿಮಾತ್ಯ ದೇಶಗಳು ರಷ್ಯಾದ ಸಾಮರ್ಥ್ಯ ಕುಗ್ಗಿಸಲು ಪ್ರಯತ್ನಿಸುತ್ತಿವೆ. ಆದರೆ ರಷ್ಯಾ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದು ಎಷ್ಟು ಅಪಾಯಕಾರಿ ಎಂಬುದನ್ನು ಆ ದೇಶಗಳು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.
ಈ ವಾರದ ಆರಂಭದಲ್ಲಿ ನ್ಯಾಟೊ ಸದಸ್ಯ ರಾಷ್ಟ್ರಗಳು ಉಕ್ರೇನ್‌ಗೆ ಸೇನಾಪಡೆಗಳನ್ನುಕಳುಹಿಸಬೇಕು ಎಂದು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಸಲಹೆ ನೀಡಿದ್ದರು. ಮ್ಯಾಕ್ರನ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಪುಟಿನ್ ಅವರು ಈ ಎಚ್ಚರಿಕೆ ನೀಡಿದ್ದಾರೆ ಎಂದು ದಿನಪತ್ರಿಕೆ ವರದಿ ಮಾಡಿದೆ.
ಅಮೆರಿಕ, ಜರ್ಮನಿ, ಬ್ರಿಟನ್ ಮತ್ತು ಇತರ ರಾಷ್ಟ್ರಗಳು, ಸೇನೆ ಕಳುಹಿಸುವ ಮ್ಯಾಕ್ರನ್ ಅವರ ಸಲಹೆಯನ್ನು ತಿರಸ್ಕರಿಸಿದ್ದರು.
"ಅವರ ಭೂಪ್ರದೇಶದ ಮೇಲೆ ದಾಳಿ ಮಾಡುವ ಶಸ್ತ್ರಾಸ್ತ್ರಗಳು ನಮ್ಮ ಬಳಿ ಇವೆ ಎಂದು ಅವರು ಅಂತಿಮವಾಗಿ ಅರಿತುಕೊಳ್ಳಬೇಕು. ಪಾಶ್ಚಿಮಾತ್ಯ ರಾಷ್ಟ್ರಗಳ ನಡೆಯು ಪರಮಾಣು ಶಸ್ತ್ರಾಸ್ತ್ರಗಳ ಬಳಕೆಯೊಂದಿಗೆ ಸಂಘರ್ಷದ ನಿಜವಾದ ಬೆದರಿಕೆಯನ್ನು ಸೃಷ್ಟಿಸುತ್ತಿದೆ ಮತ್ತು ಇದರಿಂದಾಗಿ ನಾಗರಿಕತೆ ನಾಶವಾಗುತ್ತದೆ" ಎಂದು ಪುಟಿನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



