ವಿದೇಶ

ಜಪಾನ್‌: ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ದುರಂತ; ಹೊತ್ತಿ ಉರಿದ 367 ಜನರಿದ್ದ ವಿಮಾನ!

ಟೋಕಿಯೊದ ಹನೆಡಾ ವಿಮಾನ ನಿಲ್ದಾಣದಲ್ಲಿ ಜಪಾನ್ ಏರ್‌ಲೈನ್ಸ್ ವಿಮಾನವೊಂದು ಬೆಂಕಿಗೆ ಆಹುತಿಯಾಗಿದೆ. ರನ್‌ವೇಯಲ್ಲಿ ವಿಮಾನ ಚಲಿಸುತ್ತಿದ್ದಾಗ ಈ ಅವಘಡ ಸಂಭವಿಸಿದ್ದು ವಿಮಾನದಲ್ಲಿ 350ಕ್ಕೂ ಹೆಚ್ಚು ಪ್ರಯಾಣಿಕರಿದ್ದರು.

ಜಪಾನ್‌: ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ದುರಂತ; ಹೊತ್ತಿ ಉರಿದ 367 ಜನರಿದ್ದ ವಿಮಾನ!
ಜಪಾನ್ ಏರ್‌ಲೈನ್ಸ್ ವಿಮಾನಕ್ಕೆ ಬೆಂಕಿ
Published On :

ಟೋಕಿಯೊದ ಹನೆಡಾ ವಿಮಾನ ನಿಲ್ದಾಣದಲ್ಲಿ ಜಪಾನ್ ಏರ್‌ಲೈನ್ಸ್ ವಿಮಾನವೊಂದು ಬೆಂಕಿಗೆ ಆಹುತಿಯಾಗಿದೆ. ರನ್‌ವೇಯಲ್ಲಿ ವಿಮಾನ ಚಲಿಸುತ್ತಿದ್ದಾಗ ಈ ಅವಘಡ ಸಂಭವಿಸಿದ್ದು ವಿಮಾನದಲ್ಲಿ 350ಕ್ಕೂ ಹೆಚ್ಚು ಪ್ರಯಾಣಿಕರಿದ್ದರು.

ಮಾಧ್ಯಮ ವರದಿಗಳ ಪ್ರಕಾರ, ಮತ್ತೊಂದು ವಿಮಾನಕ್ಕೆ ಡಿಕ್ಕಿ ಹೊಡೆದ ನಂತರ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ವಿಮಾನದ ಕಿಟಕಿಗಳಿಂದ ಜ್ವಾಲೆಗಳು ಹೊರಬರುವುದನ್ನು ಕಾಣಬಹುದು.

ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿಯಾದ ನಂತರ ಜಪಾನ್ ಏರ್‌ಲೈನ್ಸ್ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಾಗ ಅದರಲ್ಲಿ 350 ಮಂದಿ ಇದ್ದರು. 

ಸ್ಥಳೀಯ ಮಾಧ್ಯಮಗಳ ಪ್ರಕಾರ, ವಿಮಾನದಲ್ಲಿದ್ದ ಎಲ್ಲ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಇಂತಹ ಸಂದರ್ಭದಲ್ಲಿ ಭಾರೀ ಅನಾಹುತ ತಪ್ಪಿದೆ. ಸದ್ಯ ವಿಮಾನದ ಬೆಂಕಿಯನ್ನು ನಂದಿಸುವ ಪ್ರಯತ್ನ ನಡೆಯುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.