ಅಲ್ಲಿಯವರೆಗೆ...ಗಾಜಾದಲ್ಲಿ ಯುದ್ಧ ಕೊನೆಗೊಳಿಸಲ್ಲ: ನೆತನ್ಯಾಹು
ಇಸ್ರೇಲ್- ಹಮಾಸ್ ಬಂಡುಕೋರರ ನಡುವಿನ ಯುದ್ಧ ಸದ್ಯಕ್ಕೆ ಕೊನೆಗೊಳ್ಳುವ ಯಾವ ಲಕ್ಷಣಗಳು ಗೋಚರಿಸುತ್ತಿಲ್ಲ. ಇಸ್ರೇಲ್ ತನ್ನ ಎಲ್ಲಾ ಗುರಿಗಳನ್ನು ಸಾಧಿಸುವವರೆಗೆ, ನಿರ್ದಿಷ್ಟವಾಗಿ ಹಮಾಸ್ ನಾಶದವರೆಗೆ ಗಾಜಾದಲ್ಲಿನ ಯುದ್ಧವು ಕೊನೆಗೊಳ್ಳುವುದಿಲ್ಲ ಎಂದು ಇಸ್ರೇಲ್‌ನ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ.

ಗಾಜಾ: ಇಸ್ರೇಲ್- ಹಮಾಸ್ ಬಂಡುಕೋರರ ನಡುವಿನ ಯುದ್ಧ ಸದ್ಯಕ್ಕೆ ಕೊನೆಗೊಳ್ಳುವ ಯಾವ ಲಕ್ಷಣಗಳು ಗೋಚರಿಸುತ್ತಿಲ್ಲ. ಇಸ್ರೇಲ್ ತನ್ನ ಎಲ್ಲಾ ಗುರಿಗಳನ್ನು ಸಾಧಿಸುವವರೆಗೆ, ನಿರ್ದಿಷ್ಟವಾಗಿ ಹಮಾಸ್ ನಾಶದವರೆಗೆ ಗಾಜಾದಲ್ಲಿನ ಯುದ್ಧವು ಕೊನೆಗೊಳ್ಳುವುದಿಲ್ಲ ಎಂದು ಇಸ್ರೇಲ್‌ನ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ.
ಮೂರು ತಿಂಗಳ ಹಿಂದೆ ಹಮಾಸ್ ನಮ್ಮ ವಿರುದ್ಧ ಭೀಕರ ಹತ್ಯಾಕಾಂಡ ನಡೆಸಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಮಾಸ್ ನಾಶಗೊಳಿಸಿ, ಒತ್ತೆಯಾಳುಗಳನ್ನು ಮರಳಿ ಕರೆತರಲು ಹಾಗೂ ಗಾಜಾ ಎಂದಿಗೂ ಇಸ್ರೇಲ್‌ಗೆ ಬೆದರಿಕೆಯಾಗದಂತೆ ನೋಡಿಕೊಳ್ಳಲು ಇಸ್ರೇಲ್ ರಕ್ಷಣಾ ಪಡೆಗೆ ಸರ್ಕಾರ ನಿರ್ದೇಶಿಸಿದೆ. ನಮ್ಮ ಗುರಿ ಸಾಧಿಸುವವರೆಗೂ ಯುದ್ಧ ನಿಲ್ಲಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಹಮಾಸ್‌ಗೆ ಯಾವುದೇ ವಿನಾಯಿತಿ ನೀಡುವುದಿಲ್ಲ. ದಕ್ಷಿಣ ಮತ್ತು ಉತ್ತರ ಎರಡರಲ್ಲೂ ಭದ್ರತೆಯನ್ನು ಪುನಃಸ್ಥಾಪಿಸುವವರೆಗೆ ಹೋರಾಡುತ್ತೇವೆ. ಅಲ್ಲಿಯವರೆಗೆ, ಎಲ್ಲವನ್ನೂ ಬದಿಗಿಡಬೇಕು ಮತ್ತು ಸಂಪೂರ್ಣ ವಿಜಯ ಸಾಧಿಸುವವರೆಗೂ ಸೇನೆಯೊಂದಿಗೆ ನಾವು ಮುಂದುವರೆಯಬೇಕು ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


