ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ದಾಳಿ ಮಾಡಿದ್ದೇವೆ: ಇರಾನ್
ಪಾಕಿಸ್ತಾನದ ಉಗ್ರ ನೆಲೆಗಳನ್ನು ಗುರಿಯಾಗಿರಿಸಿಕೊಂಡು ದಾಳಿ ಮಾಡಿರುವುದಾಗಿ ಇರಾನ್ ಹೇಳಿದೆ.

ನವದೆಹಲಿ: ಪಾಕಿಸ್ತಾನದ ಉಗ್ರ ನೆಲೆಗಳನ್ನು ಗುರಿಯಾಗಿರಿಸಿಕೊಂಡು ದಾಳಿ ಮಾಡಿರುವುದಾಗಿ ಇರಾನ್ ಹೇಳಿದೆ.
ಪಾಕ್ ನಲ್ಲಿರುವ ಜೈಶ್ ಅಲ್ ಅದ್ಲ್ ಎಂಬ ಉಗ್ರ ಸಂಘಟನೆಯನ್ನು ಗುರಿಯಾಗಿರಿಸಿಕೊಂಡಿರುವುದಾಗಿ ಇರಾನ್ ತನ್ನ ಹೇಳಿಕೆಯಲ್ಲಿ ತಿಳಿಸಿರುವುದನ್ನು ಅಲ್ಲಿನ ಸರ್ಕಾರಿ ಸ್ವಾಮ್ಯದ ಮಾಧ್ಯಮ ವರದಿ ಮಾಡಿದೆ.
ಪಾಕ್ ಮೇಲಿನ ಇರಾನ್ ನ ಈ ದಾಳಿ ಗಾಜಾ ಪಟ್ಟಿಯಲ್ಲಿ ಇಸ್ರೇಲ್-ಹಮಾಸ್ ನಡುವಿನ ಯುದ್ಧದ ಪರಿಣಾಮ ಕದಡಿರುವ ಮಧ್ಯಪ್ರಾಚ್ಯದ ಪರಿಸ್ಥಿತಿಯನ್ನು ಇನ್ನಷ್ಟು ಪ್ರತಿಕೂಲಗೊಳಿಸಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಪಾಕ್ ಮತ್ತು ಇರಾನ್ ನ ನಡುವಿನ ರಾಜತಾಂತ್ರಿಕ ಸಂಬಂಧ ಪ್ರಸ್ತುತ ಉತ್ತಮವಾಗಿಲ್ಲ. ಉಭಯ ರಾಷ್ಟ್ರಗಳು ಪರಸ್ಪರ ಅಪನಂಬಿಕೆಯ ನಡುವೆಯೇ ರಾಜತಾಂತ್ರಿಕ ಸಂಬಂಧಗಳನ್ನು ಮುಂದುವರೆಸಿವೆ.
ಇರಾನ್ ನ ಸರ್ಕಾರಿ ಸ್ವಾಮ್ಯದ IRNA ಸುದ್ದಿ ಸಂಸ್ಥೆ ಹಾಗೂ ಟಿವಿ ವಾಹಿನಿಗಳ ವರದಿಯ ಪ್ರಕಾರ, ಪಾಕ್ ನಲ್ಲಿನ ಉಗ್ರ ನೆಲೆಗಳ ಮೇಲಿನ ದಾಳಿಯಲ್ಲಿ ಕ್ಷಿಪಣಿ ಹಾಗೂ ಡ್ರೋನ್ ಗಳನ್ನು ಬಳಕೆ ಮಾಡಲಾಗಿದೆ. ತಕ್ಷಣಕ್ಕೆ ಇರಾನ್ ನ ಹೇಳಿಕೆಗಳ ಬಗ್ಗೆ ಪಾಕಿಸ್ತಾನ ಪ್ರತಿಕ್ರಿಯೆ ನೀಡಿಲ್ಲ, ದಾಳಿಯನ್ನು ದೃಢಪಡಿಸಿಲ್ಲ.
ಜೈಶ್ ಅಲ್ ಅದ್ಲ್ ಅಥವಾ ನ್ಯಾಯದ ಸೇನೆ ಎಂಬ ಸಂಘಟನೆ ಸುನ್ನಿ ಉಗ್ರ ಸಂಘಟನೆಯಾಗಿದ್ದು 2012 ರಲ್ಲಿ ಅಸ್ತಿತ್ವಕ್ಕೆ ಬಂದಿದೆ. ಹೆಚ್ಚಾಗಿ ಪಾಕ್ ನ ಗಡಿಯಲ್ಲಿ ಇದು ಕಾರ್ಯನಿರ್ವಹಿಸುತ್ತಿದೆ. ಉಗ್ರರ ವಿರುದ್ಧ ಇರಾನ್ ಗಡಿ ಭಾಗಗಳಲ್ಲಿ ಹೋರಾಟ ನಡೆಸಿದೆ. ಆದರೆ ಪಾಕ್ ಮೇಲೆ ಹಿಂದೆಂದೂ ಇರಾನ್ ನಿಂದ ಡ್ರೋಣ್ ಅಥವಾ ಕ್ಷಿಪಣಿಗಳಿಂದ ದಾಳಿ ನಡೆಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


