ವಿದೇಶ

ಕಮಲಾ ಹ್ಯಾರಿಸ್ ಅಮೆರಿಕ ಅಧ್ಯಕ್ಷರಾಗಲು ಅರ್ಹರು: ಜೋ ಬೈಡನ್

81 ವರ್ಷ ವರ್ಷದ ಜೋ ಬೈಡನ್ ಅವರ ದೈಹಿಕ ಹಾಗೂ ಮಾನಸಿಕ ಸ್ಥಿರತೆ ಕುರಿತಾಗಿ ಹಲವು ಪ್ರಶ್ನೆಗಳು ಎದ್ದಿರುವ ಹೊತ್ತಲ್ಲೇ ಅಮೆರಿಕ ಅಧ್ಯಕ್ಷರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಕಮಲಾ ಹ್ಯಾರಿಸ್ ಅಮೆರಿಕ ಅಧ್ಯಕ್ಷರಾಗಲು ಅರ್ಹರು: ಜೋ ಬೈಡನ್
ಜೋ ಬೈಡನ್ ಮತ್ತು ಕಮಲಾ ಹ್ಯಾರಿಸ್
Published On :

ವಾಷಿಂಗ್ಟನ್: ಅಮೆರಿಕ ಉಪಾಧ್ಯಕ್ಷೆ, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅವರು ದೇಶವನ್ನು ಮುನ್ನಡೆಸಲು "ಅರ್ಹರಾಗಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಗುರುವಾರ ಹೇಳಿದ್ದಾರೆ.

81 ವರ್ಷ ವರ್ಷದ ಜೋ ಬೈಡನ್ ಅವರ ದೈಹಿಕ ಹಾಗೂ ಮಾನಸಿಕ ಸ್ಥಿರತೆ ಕುರಿತಾಗಿ ಹಲವು ಪ್ರಶ್ನೆಗಳು ಎದ್ದಿರುವ ಹೊತ್ತಲ್ಲೇ ಅಮೆರಿಕ ಅಧ್ಯಕ್ಷರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ವಾಷಿಂಗ್ಟನ್, ಡಿಸಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೈಡನ್, "ಆರಂಭದಿಂದಲೂ, ನನಗೆ ಅದರ ಬಗ್ಗೆ ಯಾವುದೇ ಗೊಂದಲ ಇಲ್ಲ. ಅವರು ಅಧ್ಯಕ್ಷರಾಗಲು ಅರ್ಹರು. ಅದಕ್ಕಾಗಿಯೇ ನಾನು ಅವರನ್ನು ಆಯ್ಕೆ ಮಾಡಿದೆ" ಎಂದು ಹೇಳಿದರು.

ಇದಕ್ಕೆ ಕಾರಣಗಳ ಬಗ್ಗೆ ಕೇಳಿದಾಗ, "ಮೊದಲನೆಯದಾಗಿ ಅವರು ಮಹಿಳೆಯರ ಸ್ವಾತಂತ್ರ್ಯದ ಸಮಸ್ಯೆಯನ್ನು ನಿಭಾಯಿಸಿದ ರೀತಿ ಮತ್ತು ಎರಡನೆಯದಾಗಿ, ಅವರಿಗೆ ಯಾವುದೇ ಸಮಸ್ಯೆಯನ್ನು ನಿಭಾಯಿಸುವ ಸಾಮರ್ಥ್ಯ ಇದೆ. ನೋಡಿ, ಒಂದು ವೇಳೆ ಅವರಿಗೆ ಅಧ್ಯಕ್ಷರಾಗಲು ಅರ್ಹತೆ ಇಲ್ಲ ಎಂದಾಗಿದ್ದರೆ ನಾನು ಉಪಾಧ್ಯಕ್ಷ ಸ್ಥಾನಕ್ಕೆ ಅವರನ್ನು ಆಯ್ಕೆ ಮಾಡಿಕೊಳ್ಳುತ್ತಿರಲಿಲ್ಲ’ ಎಂದು ಹೇಳಿದ್ದಾರೆ.

59 ವರ್ಷದ ಕಮಲಾ ಹ್ಯಾರಿಸ್ ಅವರು 2020 ರಲ್ಲಿ ಯುಎಸ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮಹಿಳೆಯಾಗಿದ್ದಾರೆ.

ಕಳೆದ ತಿಂಗಳು ರಿಪಬ್ಲಿಕನ್ ಪ್ರತಿಸ್ಪರ್ಧಿ ಡೊನಾಲ್ಡ್ ಟ್ರಂಪ್ ಅವರೊಂದಿಗೆ ನಡೆದ ಟಿವಿ ಚರ್ಚೆಯಲ್ಲಿ ಎಡವಟ್ಟು ಮಾಡಿಕೊಂಡ ನಂತರ 81 ವರ್ಷ ಬೈಡನ್ ನವೆಂಬರ್‌ನಲ್ಲಿ ನಡೆಯುವ ಅಮೆರಿಕ ಅಧ್ಯಕ್ಷರ ಚುನಾವಣೆಯಿಂದ ದೂರವಿರುವಂತೆ ಒತ್ತಾಯಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.