'ಅಕ್ರಮ' ವಿವಾಹ ಪ್ರಕರಣದಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಖುಲಾಸೆ
ಕಳೆದ ಫೆಬ್ರವರಿಯಲ್ಲಿ ಇಮ್ರಾನ್ ಖಾನ್ ದಂಪತಿಗೆ ನೀಡಲಾಗಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು ರಾವಲ್ಪಿಂಡಿಯ ಗ್ಯಾರಿಸನ್ ಸಿಟಿಯ ನ್ಯಾಯಾಲಯ ರದ್ದುಗೊಳಿಸಿದೆ.

ಇಸ್ಲಾಮಾಬಾದ್: 2018 ರಲ್ಲಿ ಕಾನೂನುಬಾಹಿರವಾಗಿ ವಿವಾಹವಾದ ಪ್ರಕರಣದಲ್ಲಿ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರನ್ನು ಪಾಕಿಸ್ತಾನದ ನ್ಯಾಯಾಲಯ ಶನಿವಾರ ಖುಲಾಸೆಗೊಳಿಸಿದೆ.
ಕಳೆದ ಫೆಬ್ರವರಿಯಲ್ಲಿ ಇಮ್ರಾನ್ ಖಾನ್ ದಂಪತಿಗೆ ನೀಡಲಾಗಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು ರಾವಲ್ಪಿಂಡಿಯ ಗ್ಯಾರಿಸನ್ ಸಿಟಿಯ ನ್ಯಾಯಾಲಯ ರದ್ದುಗೊಳಿಸಿದೆ ಎಂದು ಪಾಕಿಸ್ತಾನ ಮಾಜಿ ಪ್ರಧಾನಿ ಪರ ವಕೀಲರಲ್ಲಿ ಒಬ್ಬರಾದ ನಯೀಮ್ ಪಂಜುತಾ ಅವರು ಹೇಳಿದ್ದಾರೆ.
ದಂಪತಿಗಳ ವಿರುದ್ಧ ಇತರೆ ಯಾವುದೇ ಪ್ರಕರಣಗಳು ಇಲ್ಲದಿದ್ದರೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ನ್ಯಾಯಾಲಯ ತನ್ನ ಸಂಕ್ಷಿಪ್ತ ಆದೇಶದಲ್ಲಿ ಹೇಳಿದೆ.
71 ವರ್ಷದ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಎಂದೂ ಕರೆಯಲ್ಪಡುವ ಬುಶ್ರಾ ಖಾನ್ ಅವರಿಗೆ ಕಳೆದ ಫೆಬ್ರವರಿಯಲ್ಲಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಅವರು ಹಿಂದಿನ ವಿವಾಹದಿಂದ ಬೀಬಿಯ ವಿಚ್ಛೇದನ ಮತ್ತು ವಿವಾಹದ ನಡುವಿನ ಅಗತ್ಯ ಮಧ್ಯಂತರವನ್ನು ಅನುಸರಿಸಲು ವಿಫಲವಾಗುವ ಮೂಲಕ ಇಸ್ಲಾಮಿಕ್ ಕಾನೂನನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ನ್ಯಾಯಾಲಯವು ಅವರಿಗೆ ಶಿಕ್ಷೆ ವಿಧಿಸಿತ್ತು.
2017ರ ಆಗಸ್ಟ್‌ನಲ್ಲಿ ವಿಚ್ಛೇದನ ಪಡೆದಿದ್ದೇವೆ ಎಂದು ಬೀಬಿ ಹೇಳಿದ್ದಾರೆ ಮತ್ತು ವಿಚಾರಣೆಯ ಸಮಯದಲ್ಲಿ ದಂಪತಿಗಳು ಕಾಯುವ ಅವಧಿಯನ್ನು ಉಲ್ಲಂಘಿಸಿಲ್ಲ ಎಂದು ಕೋರ್ಟ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



