ಬಾಂಗ್ಲಾದೇಶ: ಢಾಕಾದ ರೆಸ್ಟೋರೆಂಟ್‌ನಲ್ಲಿ ಭಾರಿ ಅಗ್ನಿ ಅವಘಡ, 44 ಮಂದಿ ಸಾವು
ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 6 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 44 ಮಂದಿ ಮೃತಪಟ್ಟು ಹಲವರಿಗೆ ಗಾಯವಾಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 6 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 44 ಮಂದಿ ಮೃತಪಟ್ಟು ಹಲವರಿಗೆ ಗಾಯವಾಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಢಾಕಾ ಬೈಲಿ ರಸ್ತೆಯಲ್ಲಿರುವ ಬಿರಿಯಾನಿ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿಯ ಕೆನ್ನಾಲಿಗೆ ಇತರ ಮಹಡಿಗಳಿಗೂ ವ್ಯಾಪಿಸಿದೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.
ಘಟನೆ ನಡೆದ ಪ್ರದೇಶದಲ್ಲಿ ಅನೇಕ ಹೋಟೆಲ್ಗಳು, ಬಟ್ಟೆ ಅಂಗಡಿಗಳು ಮತ್ತು ಮೊಬೈಲ್ ಫೋನ್ ಮಾರಾಟ ಅಂಗಡಿಗಳಿವೆ.
ಸ್ಥಳದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ 42 ಮಂದಿ ಸೇರಿದಂತೆ 75 ಮಂದಿಯನ್ನು 7 ಅಂತಸ್ತಿನ ಕಟ್ಟಡದಿಂದ ಹೊರ ತೆಗೆಯಲಾಗಿದ್ದು, ಕೆಲವ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವು ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ರೆಸ್ಟೋರೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಅವಘಟ ಸಂಭವಿಸಿದೆ ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.
ಮೆಟ್ಟಿಲುಗಳ ಮೇಲೆ ಹೊಗೆ ಬರುತ್ತಿತ್ತು. ಸಾಕಷ್ಟು ಜನರು ಮೇಲೆ ಓಡಿ ಬರುತ್ತಿದ್ದರು, ಕೆಲವರು ಕಟ್ಟಡಿಂದ ಇಳಿಯರು ನೀರಿನ ಪೈಪ್ ಗಳನ್ನು ಬಳಸುತ್ತಿದ್ದರು. ಕೆಲವರು ಮಹಡಿಯಿಂದ ಕೆಳಗೆ ಜಿಗಿದು ಗಾಯಗೊಂಡಿದ್ದರು ಎಂದು ರೆಸ್ಟೋರೆಂಟ್ ಮ್ಯಾನೇಜರ್ ಹೇಳಿದ್ದಾರೆ.
ಜುಲೈ 2021 ರಲ್ಲಿ, ಆಹಾರ ಸಂಸ್ಕರಣಾ ಕಾರ್ಖಾನೆಯಲ್ಲಿ ಬೆಂಕಿ ಆವರಿಸಿದಾಗ ಅನೇಕ ಮಕ್ಕಳು ಸೇರಿದಂತೆ ಕನಿಷ್ಠ 52 ಜನರು ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



