ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದಾಗಿ ಕಳೆದ 48 ಗಂಟೆಗಳಲ್ಲಿ 37 ಮಂದಿ ಸಾವು, ಕಂಗೆಟ್ಟ ಜನ!
ಹವಾಮಾನ ವೈಪರೀತ್ಯಕ್ಕೆ ಪಾಕಿಸ್ತಾನ ತತ್ತರಿಸಿದೆ. ಪಾಕಿಸ್ತಾನದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಇದುವರೆಗೆ 37 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಹವಾಮಾನ ವೈಪರೀತ್ಯಕ್ಕೆ ಪಾಕಿಸ್ತಾನ ತತ್ತರಿಸಿದೆ. ಪಾಕಿಸ್ತಾನದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಇದುವರೆಗೆ 37 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಅಧಿಕಾರಿಗಳ ಪ್ರಕಾರ, ಪಾಕಿಸ್ತಾನದಾದ್ಯಂತ ಮಳೆಯಿಂದಾಗಿ, ಮನೆಗಳು ಕುಸಿದ್ದಿದ್ದು ಹಲವೆಡೆ ಭೂಕುಸಿತದ ಘಟನೆಗಳು ಕಂಡುಬಂದಿವೆ. ವಾಯವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಹಲವು ರಸ್ತೆಗಳು ಬಂದ್ ಆಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಗುರುವಾರ ರಾತ್ರಿಯಿಂದ ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 25ಕ್ಕೂ ಹೆಚ್ಚು ಜನರು, ಹೆಚ್ಚಾಗಿ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಈ ನಿರ್ಣಾಯಕ ಸಮಯದಲ್ಲಿ ಮಳೆಯಿಂದ ಹಾನಿಗೊಳಗಾದ ಜನರಿಗೆ ನೆರವಾಗಲಿದ್ದು ಮತ್ತು ಅವರ ನಷ್ಟಕ್ಕೆ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಅಲಿ ಅಮೀನ್ ಗಂದಪುರ್ ಹೇಳಿದ್ದಾರೆ.
ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪ್ರವಾಹವು ಕರಾವಳಿ ನಗರವಾದ ಗ್ವಾದರ್ ಅನ್ನು ಮುಳುಗಿಸಿದ್ದು ಇದರಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಜನರನ್ನು ರಕ್ಷಿಸಲು ದೋಣಿಗಳನ್ನು ಬಳಸಲು ಅಧಿಕಾರಿಗಳು ಒತ್ತಾಯಿಸಿದರು. ಅಧಿಕಾರಿಗಳ ಪ್ರಕಾರ, ಕಳೆದ ಎರಡು ದಿನಗಳಿಂದ ಗ್ವಾದರ್‌ನಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ, ನೂರಾರು ಜನರು ನಿರಾಶ್ರಿತರಾಗಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸಾವುನೋವುಗಳು ಮತ್ತು ಹಾನಿಗಳು ವರದಿಯಾಗಿವೆ. ಈ ಪ್ರದೇಶದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದರು. ಹೆದ್ದಾರಿಗಳನ್ನು ತಡೆಯುವ ಅವಶೇಷಗಳನ್ನು ತೆರವುಗೊಳಿಸಲು ತುರ್ತು ಪರಿಹಾರ ಮತ್ತು ಭಾರೀ ಯಂತ್ರೋಪಕರಣಗಳನ್ನು ಪ್ರದೇಶಕ್ಕೆ ಧಾವಿಸಲಾಗಿದೆ ಎಂದು NDMA ವಕ್ತಾರರು ತಿಳಿಸಿದ್ದಾರೆ.
ಪಾಕಿಸ್ತಾನದಲ್ಲಿ ಪ್ರತಿ ವರ್ಷ ಮುಂಗಾರು ಹಾಗೂ ಚಳಿಗಾಲದ ಮಳೆಯಿಂದ ಹಾನಿಯಾಗುತ್ತಿದೆ. 2022 ರಲ್ಲಿ, ಮಳೆ ಮತ್ತು ಪ್ರವಾಹಗಳು ಪಾಕಿಸ್ತಾನದ ಹಲವು ಭಾಗಗಳನ್ನು ಧ್ವಂಸಗೊಳಿಸಿದವು, 1,800 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



