ಪಿಒಕೆಯಲ್ಲಿ ಪ್ರತಿಭಟನೆ ವೇಳೆ ಘರ್ಷಣೆ: ಪೊಲೀಸ್ ಅಧಿಕಾರಿ ಸಾವು, ನೂರಾರು ಮಂದಿಗೆ ಗಾಯ
ವಿದ್ಯುತ್ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಪಾಕ್ ಆಕ್ರಮಿತ ಕಾಶ್ಮೀರದ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಭದ್ರತಾ ಪಡೆಗಳು ಹಾಗೂ ಪ್ರತಿಭಟನಾಕಾರರ ನಡುವೆ ಉಂಟಾದ ಘರ್ಷಣೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿರುವುದಾಗಿ ಮಾಧ್ಯಮ ವರದಿಗಳು ಭಾನುವಾರ ಹೇಳಿವೆ.

ಮುಜಫರಾಬಾದ್: ವಿದ್ಯುತ್ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಪಾಕ್ ಆಕ್ರಮಿತ ಕಾಶ್ಮೀರದ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಭದ್ರತಾ ಪಡೆಗಳು ಹಾಗೂ ಪ್ರತಿಭಟನಾಕಾರರ ನಡುವೆ ಉಂಟಾದ ಘರ್ಷಣೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿರುವುದಾಗಿ ಮಾಧ್ಯಮ ವರದಿಗಳು ಭಾನುವಾರ ಹೇಳಿವೆ.

ಪಿಒಕೆ ನಮ್ಮದು, ಅದನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ
ಪಿಒಕೆ ಮತ್ತು ನಿರ್ಧಿಷ್ಟವಾಗಿ ಮುಜಫರಾಬಾದ್ ನಲ್ಲಿ ಸಂಪೂರ್ಣ ಶಟರ್ ಡೌನ್ ಮತ್ತು ವೀಲ್ ಜಾಮ್ ಮುಷ್ಕರದ ನಡುವೆ ಪೊಲೀಸರು ಹಾಗೂ ಹೋರಾಟಗಾರರ ನಡುವೆ ಘರ್ಷಣೆ ನಡೆದಿರುವುದಾಗಿ ಡಾನ್ ಪತ್ರಿಕೆ ವರದಿ ಮಾಡಿದೆ.
ಜಮ್ಮು ಮತ್ತು ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಕೋಟ್ಲಿ ಮತ್ತು ಪೂಂಚ್ ಮೂಲಕ ಮುಜಫರಾಬಾದ್‌ವರೆಗೂ ಆಯೋಜಿಸಿದ್ದ ಪ್ರತಿಭಟನಾ ರ್‍ಯಾಲಿಯನ್ನು ತಡೆಯಲು ಇಸ್ಲಾಂಘರ್ ಪಟ್ಟಣದಲ್ಲಿ ನಿಯೋಜಿಸಲಾಗಿದ್ದ ಸಬ್ ಇನ್‌ಸ್ಪೆಕ್ಟರ್ ಅದ್ನಾನ್ ಖುರೇಷಿ ಅವರ ಎದೆಗೆ ಗುಂಡೇಟು ತಗುಲಿ ಸಾವನ್ನಪ್ಪಿದ್ದಾರೆ ಎಂದು ಮೀರ್ ಪುರದ ಹಿರಿಯ ಪೊಲೀಸ್ ಅಧೀಕ್ಷಕ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


