ವಿದೇಶ

ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡಿನ ದಾಳಿ; ಶಂಕಿತನ ಬಂಧನ

ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೋ ಮೇಲೆ ಗುಂಡಿನ ದಾಳಿ ನಡೆದಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡಿನ ದಾಳಿ; ಶಂಕಿತನ ಬಂಧನ
ರಾಬರ್ಟ್ ಫಿಕೋ
Published On :

ನವದೆಹಲಿ: ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೋ ಮೇಲೆ ಗುಂಡಿನ ದಾಳಿ ನಡೆದಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಧಾನಿ ಬ್ರಾಟಿಸ್ಲಾವಾದ ಈಶಾನ್ಯಕ್ಕೆ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಹ್ಯಾಂಡ್ಲೋವಾ ನಗರದಲ್ಲಿ ಈ ಘಟನೆ ನಡೆದಿದೆ. ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಮಾಧ್ಯಮ ವರದಿಗಳ ಪ್ರಕಾರ, ರಷ್ಯಾದ ಪರ ಪ್ರಧಾನಿ ಅವರು ಕ್ಯಾಬಿನೆಟ್ ಸಭೆ ನಡೆಸುತ್ತಿದ್ದ ಹೌಸ್ ಆಫ್ ಕಲ್ಚರ್ ಹೊರಗೆ ಗುಂಡಿನ ದಾಳಿ ನಡೆದಿದೆ. ಪಿಎಂ ಫಿಕೋ ಹೌಸ್‌ನ ಹೊರಗೆ ಜನರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಗುಂಡಿನ ದಾಳಿ ನಡೆದಿದ್ದು ಇದರ ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಗುಂಡು ತಗುಲಿ ಗಾಯಗೊಂಡಿರುವ ಪ್ರಧಾನಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿದ್ದ ಪತ್ರಕರ್ತರ ಪ್ರಕಾರ, ಹಲವಾರು ಗುಂಡಿನ ಶಬ್ದಗಳು ಕೇಳಿಬಂದವು. ಗುಂಡು ಹಾರಿಸಿದ ಆರೋಪಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕ್ರೂರ ದಾಳಿಯಿಂದ ಆಘಾತಕ್ಕೊಳಗಾಗಿದ್ದೇನೆ ಎಂದು ಸ್ಲೋವಾಕಿಯಾದ ಅಧ್ಯಕ್ಷ ಜುಝಾನಾ ಸಪುಟೋವಾ ಹೇಳಿದ್ದಾರೆ.

ಗುಂಡು ತಗುಲಿದ ಬಳಿಕ ಭದ್ರತಾ ಸಿಬ್ಬಂದಿ ಪ್ರಧಾನಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಸುದ್ದಿ ಸಂಸ್ಥೆ NEXTA ಈ ವೀಡಿಯೊವನ್ನು ಹಂಚಿಕೊಂಡಿದೆ. ರಾಬರ್ಟ್ ಫಿಕೊ ಮೇಲಿನ ದಾಳಿಯ ನಂತರ, ಪ್ರಧಾನ ಮಂತ್ರಿಯ ಭದ್ರತಾ ಸಿಬ್ಬಂದಿ ಅವರನ್ನು ತಮ್ಮ ಬೆಂಗಾವಲು ಪಡೆ ಆಸ್ಪತ್ರೆಗೆ ಕರೆದೊಯ್ದರು.

ಸ್ಲೋವಾಕ್ ಮಾಧ್ಯಮದಿಂದ ಪಡೆದ ಆರಂಭಿಕ ಮಾಹಿತಿಯ ಪ್ರಕಾರ, ಫಿಕೊಗೆ ಹಲವಾರು ಬಾರಿ ಗುಂಡು ಹಾರಿಸಲಾಯಿತು. ಹೊಟ್ಟೆಗೆ ಒಂದು ಗುಂಡು ಹೊಕ್ಕಿದ್ದರೆ ತಲೆಗೆ ಒಂದು ಗುಂಡು ಹೊಕ್ಕಿದ್ದು ಅವರ ಸ್ಥಿತಿ ಗಂಭೀರವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.