ಲೆಬನಾನ್ ಮೇಲೆ ದಾಳಿ: ಸೈನಿಕನ ಸಾವು ಖಚಿತಪಡಿಸಿದ ಇಸ್ರೇಲ್ ಸೇನೆ
"22 ವರ್ಷದ ಕ್ಯಾಪ್ಟನ್ ಈಟಾನ್ ಇಟ್ಜಾಕ್ ಓಸ್ಟರ್ ಅವರು ಲೆಬನಾನ್ನಲ್ಲಿ ಯುದ್ಧದ ಸಮಯದಲ್ಲಿ ಹುತಾತ್ಮರಾಗಿದ್ದಾರೆ" ಎಂದು ಇಸ್ರೇಲ್ ಮಿಲಿಟರಿ ಪ್ರಕಟಣೆಯಲ್ಲಿ ತಿಳಿಸಿದೆ.

ಟೆಲ್ ಅವೀವ್: ಲೆಬನಾನ್ನ ಉಗ್ರ ಸಂಘಟನೆ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸರುಲ್ಲಾಹ್ ಹತ್ಯೆ ಮಾಡಿದ ಬೆನ್ನಲ್ಲೇ ಲೆಬನಾನ್ ಮೇಲೆ ಭೂ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಇಸ್ರೇಲ್, ತನ್ನ ಸೈನಿಕ ಹುತಾತ್ಮರಾಗಿರುವುದಾಗಿ ಬುಧವಾರ ಪ್ರಕಟಿಸಿದೆ.
ಇದರೊಂದಿಗೆ ಭೂ ಸೇನಾ ಕಾರ್ಯಾಚರಣೆಯಲ್ಲಿ ತನ್ನ ಸೈನಿಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. ಇದು ಹೆಜ್ಬುಲ್ಲಾವನ್ನು ಗುರಿಯಾಗಿಸಿ ಗಡಿ ದಾಟಿ ಅದರ ಪಡೆಗಳ ಮೇಲೆ ನಡೆಸುತ್ತಿರುವ ದಾಳಿಯಲ್ಲಿ ಸಂಭವಿಸಿದ ಇಸ್ರೇಲ್ ಪಡೆಯ ಮೊದಲ ಸಾವು ಎಂದು ವರದಿಯಾಗಿದೆ.
"22 ವರ್ಷದ ಕ್ಯಾಪ್ಟನ್ ಈಟಾನ್ ಇಟ್ಜಾಕ್ ಓಸ್ಟರ್ ಅವರು ಲೆಬನಾನ್ನಲ್ಲಿ ಯುದ್ಧದ ಸಮಯದಲ್ಲಿ ಹುತಾತ್ಮರಾಗಿದ್ದಾರೆ" ಎಂದು ಇಸ್ರೇಲ್ ಮಿಲಿಟರಿ ಪ್ರಕಟಣೆಯಲ್ಲಿ ತಿಳಿಸಿದೆ.
ಲೆಬನಾನ್ ರಾಜಧಾನಿಯಲ್ಲಿ ಸೀಮಿತ ಮತ್ತು ಸ್ಥಳೀಯ ಭೂ ಆಕ್ರಮಣ ಕಾರ್ಯಾಚರಣೆಗಳನ್ನು ಪ್ರಾರಂಭಿಸಿದ ಬೆನ್ನಲ್ಲೇ ಮಂಗಳವಾರ ಬೆಳಗ್ಗೆ ಬೈರುತ್ನ ದಕ್ಷಿಣ ಉಪನಗರ ವ್ಯಾಪ್ತಿಯಲ್ಲಿ ಇಸ್ರೇಲ್ ಬೃಹತ್ ಪ್ರಮಾಣದ ದಾಳಿಗಳನ್ನು ಆರಂಭಿಸಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.
ಉತ್ತರ ಇಸ್ರೇಲ್ ಗಡಿಯಲ್ಲಿ ವಾಸಿಸುವ ಜನರಿಗೆ ನೇರವಾಗಿ ಅಪಾಯವನ್ನುಂಟು ಮಾಡುವಂತಹ ಗಡಿಯ ಹತ್ತಿರದ ಹಳ್ಳಿಗಳಲ್ಲಿರುವ ನೆಲೆಗಳನ್ನು ಗುರಿಯಾಗಿಸಿ ಭೂ ಆಕ್ರಮಣ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ ಎಂದು ಇಸ್ರೇಲಿ ರಕ್ಷಣಾ ಪಡೆ(ಐಡಿಎಫ್) ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



