ವಿದೇಶ

ಪಕ್ಷಪಾತದ ಆರೋಪ: ವಿಶ್ವಸಂಸ್ಥೆ ಮುಖ್ಯಸ್ಥರ ಪ್ರವೇಶಕ್ಕೆ ಅನುಮತಿ ನಿರಾಕರಿಸಿದ ಇಸ್ರೇಲ್!

ಇಸ್ರೇಲ್ ನ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಈ ಬಗ್ಗೆ ಮಾತನಾಡಿದ್ದು, ಇಸ್ರೇಲ್‌ಗೆ ಪ್ರವೇಶಿಸದಂತೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಗೆ ನಿರ್ಬಂಧ ವಿಧಿಸಲಾಗಿದ್ದು, ದೇಶದ ವಿರುದ್ಧ ಪಕ್ಷಪಾತ ಹೊಂದಿದ್ದಾರೆಂದು ಆರೋಪಿಸಿದ್ದಾರೆ.

ಪಕ್ಷಪಾತದ ಆರೋಪ: ವಿಶ್ವಸಂಸ್ಥೆ ಮುಖ್ಯಸ್ಥರ ಪ್ರವೇಶಕ್ಕೆ ಅನುಮತಿ ನಿರಾಕರಿಸಿದ ಇಸ್ರೇಲ್!
ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ — online desk
Published On :

ಟೆಲ್ ಅವೀವ್: ವಿಶ್ವಸಂಸ್ಥೆಯ ಮುಖ್ಯಸ್ಥರು ಪಕ್ಷಪಾತದ ಧೋರಣೆ ಹೊಂದಿರುವುದರಿಂದ ಇಸ್ರೇಲ್ ಗೆ ಭೇಟಿ ನೀಡುವುದಕ್ಕೆ ಅವರಿಗೆ ನಿರ್ಬಂಧ ವಿಧಿಸಲಾಗಿದೆ.

ಇಸ್ರೇಲ್ ನ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಈ ಬಗ್ಗೆ ಮಾತನಾಡಿದ್ದು, ಇಸ್ರೇಲ್‌ಗೆ ಪ್ರವೇಶಿಸದಂತೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಗೆ ನಿರ್ಬಂಧ ವಿಧಿಸಲಾಗಿದ್ದು, ದೇಶದ ವಿರುದ್ಧ ಪಕ್ಷಪಾತ ಹೊಂದಿದ್ದಾರೆಂದು ಆರೋಪಿಸಿದ್ದಾರೆ.

ಕಾಟ್ಜ್ ಆಂಟೋನಿಯೊ ಗುಟೆರೆಸ್ ಅವರನ್ನು "ಪರ್ಸನಾ ನಾನ್ ಗ್ರಾಟಾ" (ಸ್ವೀಕಾರಾರ್ಹವಲ್ಲದ ವ್ಯಕ್ತಿ) ಎಂದು ಘೋಷಿಸಿದ್ದಾರೆ.

ಇಸ್ರೇಲ್‌ನ ಮೇಲೆ ಇರಾನ್‌ನ ಘೋರ ದಾಳಿಯನ್ನು ನಿಸ್ಸಂದಿಗ್ಧವಾಗಿ ಖಂಡಿಸಲು ಸಾಧ್ಯವಾಗದ ಯಾರಾದರೂ, ಇಸ್ರೇಲ್ ನೆಲದಲ್ಲಿ ಕಾಲಿಡಲು ಅರ್ಹರಲ್ಲ ಎಂದು ಇಸ್ರೇಲ್ ಕಾಟ್ಜ್ ತಿಳಿಸಿದ್ದಾರೆ.

"ಅಕ್ಟೋಬರ್ 7ರಂದು ಹಮಾಸ್ ಕೊಲೆಗಾರರು ನಡೆಸಿದ ಹತ್ಯಾಕಾಂಡ ಮತ್ತು ಲೈಂಗಿಕ ದೌರ್ಜನ್ಯಗಳನ್ನು ಸೆಕ್ರೆಟರಿ ಜನರಲ್ ಇನ್ನೂ ಖಂಡಿಸಿಲ್ಲ ಅಥವಾ ಅವರನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಯಾವುದೇ ಪ್ರಯತ್ನಗಳನ್ನು ನಡೆಸಿಲ್ಲ. ಆಂಟ್ನಿಯೊ ಗುಟೆರೆಸ್ ಇಲ್ಲದೆಯೂ ಇಸ್ರೇಲ್ ತನ್ನ ನಾಗರಿಕರನ್ನು ರಕ್ಷಿಸಲು ಮತ್ತು ಅದರ ರಾಷ್ಟ್ರೀಯ ಘನತೆಯನ್ನು ಎತ್ತಿಹಿಡಿಯಲು ಮುಂದುವರಿಯುತ್ತದೆ" ಇಸ್ರೇಲ್ ಕಾಟ್ಜ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.