ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಆಕ್ರೋಶ: ರಾಷ್ಟ್ರಪತಿ ಭವನಕ್ಕೆ ನುಗ್ಗಿ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯ
ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಪ್ರತಿಭಟನೆಗಳು ಆರಂಭವಾಗಿವೆ. ತಡರಾತ್ರಿ ಪ್ರತಿಭಟನಾಕಾರರು ಬಂಗಾ ಭವನಕ್ಕೆ ಮುತ್ತಿಗೆ ಹಾಕಿದ್ದು ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಢಾಕಾ: ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಪ್ರತಿಭಟನೆಗಳು ಆರಂಭವಾಗಿವೆ. ತಡರಾತ್ರಿ ಪ್ರತಿಭಟನಾಕಾರರು ಬಂಗಾ ಭವನಕ್ಕೆ ಮುತ್ತಿಗೆ ಹಾಕಿದ್ದು ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನಾಕಾರರು ಅಧ್ಯಕ್ಷರ ರಾಜೀನಾಮೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತಾ ಮುಂದೆ ಸಾಗುತ್ತಿದ್ದು ಈ ವೇಳೆ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ಅವರನ್ನು ತಡೆದರು. ಕೆಲವು ಪ್ರತಿಭಟನಾಕಾರರು ಬ್ಯಾರಿಕೇಡ್ಗಳನ್ನು ತಳ್ಳಿ ಮುಂದೆ ಸಾಗಲು ಯತ್ನಿಸಿದ್ದು ಕೂಡಲೇ ಪೊಲೀಸರು ಅಶ್ರುವಾಯು ಶೆಲ್ಗಳನ್ನು ಸಿಡಿಸಿ ಅವರನ್ನು ತಡೆದಿದ್ದಾರೆ.
ಮಾಹಿತಿ ಪ್ರಕಾರ, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ನಂತರ ಪ್ರತಿಭಟನಾಕಾರರು ಹಿಂದೆ ಸರಿದಿದರು. ಲಾಠಿ ಚಾರ್ಜ್ ನಿಂದಾಗಿ ಕೆಲವು ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಢಾಕಾ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಮುಂದುವರಿದಿದೆ.
ವಾಸ್ತವವಾಗಿ, ಇತ್ತೀಚೆಗೆ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಹೇಳಿಕೆ ನೀಡಿದ್ದಾರೆ. ಶೇಖ್ ಹಸೀನಾ ಅವರು ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬುದಕ್ಕೆ ತಮ್ಮ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ಅವರು ಹೇಳಿದ್ದರು. ಸರಳವಾಗಿ ಹೇಳುವುದಾದರೆ, ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ಅವರ ರಾಜೀನಾಮೆ ಪತ್ರ ನನ್ನ ಬಳಿ ಇಲ್ಲ ಎಂದು ಅವರು ಹೇಳಿದರು.
ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರ ಈ ಹೇಳಿಕೆಯ ನಂತರ, ಬಾಂಗ್ಲಾದೇಶದ ಮೊಹಮ್ಮದ್ ಯೂನಸ್ ಅವರ ಮಧ್ಯಂತರ ಸರ್ಕಾರದ ಸಾಂವಿಧಾನಿಕತೆಯ ಬಗ್ಗೆ ಪ್ರಶ್ನೆಗಳು ಏಳಲಾರಂಭಿಸಿದವು. ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ನೀಡಿದ ಹೇಳಿಕೆಗೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕಾರಣಕ್ಕಾಗಿ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆಗೆ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



