ಮೋದಿ ಅದ್ಭುತ ವ್ಯಕ್ತಿ, ಅವರನ್ನು ಮುಂದಿನ ವಾರ ಭೇಟಿ ಮಾಡುತ್ತೇನೆ: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 21 ರಿಂದ 23 ರವರೆಗೆ ಯುಎಸ್‌ಗೆ ಭೇಟಿ ನೀಡಲಿದ್ದಾರೆ, ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ಅಧ್ಯಕ್ಷ ಜೋ ಬೈಡನ್ ಅವರು ಆಯೋಜಿಸಿರುವ ಕ್ವಾಡ್ ಲೀಡರ್ಸ್ ಶೃಂಗಸಭೆಯೊಂದಿಗೆ ತಮ್ಮ ಅಮೆರಿಕ ಪ್ರವಾಸ ಪ್ರಾರಂಭಿಸಲಿದ್ದಾರೆ.

ವಾಷಿಂಗ್ಟನ್/ನ್ಯೂಯಾರ್ಕ್: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮುಂದಿನ ವಾರ ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ಈ ಸಂದರ್ಭದಲ್ಲಿ ಅವರನ್ನು ಭೇಟಿಯಾಗಲಿದ್ದೇನೆ ಎಂದು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 21 ರಿಂದ 23 ರವರೆಗೆ ಯುಎಸ್‌ಗೆ ಭೇಟಿ ನೀಡಲಿದ್ದಾರೆ, ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ಅಧ್ಯಕ್ಷ ಜೋ ಬೈಡನ್ ಅವರು ಆಯೋಜಿಸಿರುವ ಕ್ವಾಡ್ ಲೀಡರ್ಸ್ ಶೃಂಗಸಭೆಯೊಂದಿಗೆ ತಮ್ಮ ಅಮೆರಿಕ ಪ್ರವಾಸ ಪ್ರಾರಂಭಿಸಲಿದ್ದಾರೆ.
ಶೃಂಗಸಭೆಯಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಮತ್ತು ಜಪಾನ್‌ನ ಪ್ರಧಾನಿ ಕಿಶಿಡಾ ಫ್ಯೂಮಿಯೊ ಭಾಗವಹಿಸಲಿದ್ದಾರೆ.
ನಂತರ ಮೋದಿಯವರು ನ್ಯೂಯಾರ್ಕ್‌ಗೆ ಪ್ರಯಾಣಿಸಲಿದ್ದಾರೆ. ಸೆಪ್ಟೆಂಬರ್ 22 ರಂದು ಲಾಂಗ್ ಐಲ್ಯಾಂಡ್‌ನಲ್ಲಿ ಮೆಗಾ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮರುದಿನ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ನಡೆಯಲಿರುವ ಭವಿಷ್ಯದ ಶೃಂಗಸಭೆಯ ಮಹತ್ವದ ಸಮಾರಂಭದಲ್ಲಿ ಅವರು ವಿಶ್ವ ನಾಯಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ನಿನ್ನೆ ಮಿಚಿಗನ್‌ನ ಫ್ಲಿಂಟ್‌ನಲ್ಲಿ ನಡೆದ ಟೌನ್ ಹಾಲ್ ಸಭೆಯಲ್ಲಿ ಮಾತನಾಡಿದ ಟ್ರಂಪ್, ಮೋದಿ ಅವರು ಮುಂದಿನ ವಾರ ಅಮೆರಿಕ ಪ್ರವಾಸದಲ್ಲಿರುವಾಗ ಅವರನ್ನು ಭೇಟಿಯಾಗಲಿದ್ದೇನೆ, ಅವರೊಬ್ಬ ಅದ್ಭುತ ವ್ಯಕ್ತಿ ಎಂದು ಹೇಳಿದ್ದಾರೆ.
ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸುವಾಗ ವ್ಯಾಪಾರ ಮತ್ತು ಸುಂಕದ ಬಗ್ಗೆ ಮಾತನಾಡುತ್ತಿದ್ದ ವೇಳೆ ಈ ವಿಷಯ ತಿಳಿಸಿದ್ದಾರೆ.
ಇನ್ನೆರಡು ತಿಂಗಳಲ್ಲಿ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಡೊನಾಲ್ಡ್ ಟ್ರಂಪ್ ಮತ್ತು ಕಮಲಾ ಹ್ಯಾರಿಸ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



