ಅಮೆರಿಕದಲ್ಲಿ ಭಾರತ ಇನ್ನೂ ಎರಡು ರಾಯಭಾರ ಕಚೇರಿ ತೆರೆಯಲಿದೆ: ಪ್ರಧಾನಿ ಮೋದಿ ಘೋಷಣೆ
ಭಾರತ, ಬೋಸ್ಟನ್ ಮತ್ತು ಲಾಸ್ ಏಂಜಲೀಸ್‌ನಲ್ಲಿ ಎರಡು ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲು ನಿರ್ಧರಿಸಿದೆ" ಎಂದು ಪ್ರಧಾನಿ ಮೋದಿ ಹೇಳಿದರು.

ನ್ಯೂಯಾರ್ಕ್: ಭಾರತ, ಅಮೆರಿಕದಲ್ಲಿ ಇನ್ನೂ ಎರಡು ರಾಯಭಾರ ಕಚೇರಿ ತೆರೆಯಲು ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಘೋಷಿಸಿದ್ದಾರೆ.
ಇಂದು ನ್ಯೂಯಾರ್ಕ್ ನ ನಸ್ಸೌ ವೆಟರನ್ಸ್ ಮೆಮೋರಿಯಲ್ ಕೊಲಿಜಿಯಂನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಕಳೆದ ವರ್ಷ, ಸಿಯಾಟಲ್‌ನಲ್ಲಿ ನಮ್ಮ ಸರ್ಕಾರ ಹೊಸ ಕಾನ್ಸುಲೇಟ್ ತೆರೆಯಲಿದೆ ಎಂದು ನಾನು ಘೋಷಿಸಿದ್ದೆ. ಅದರಂತೆ ಈಗ ಅದನ್ನು ಪ್ರಾರಂಭಿಸಲಾಗಿದೆ ಎಂದರು.
"ನಾವು ಇನ್ನೂ ಎರಡು ಹೊಸ ರಾಯಭಾರ ಕಚೇರಿಗಳನ್ನು ತೆರೆಯುವ ಬಗ್ಗೆ ಸಲಹೆಗಳನ್ನು ಸಹ ಕೋರಿದ್ದೇವೆ. ನಿಮ್ಮ ಸಲಹೆಯ ನಂತರ ಭಾರತ, ಬೋಸ್ಟನ್ ಮತ್ತು ಲಾಸ್ ಏಂಜಲೀಸ್‌ನಲ್ಲಿ ಎರಡು ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲು ನಿರ್ಧರಿಸಿದೆ" ಎಂದು ಪ್ರಧಾನಿ ಮೋದಿ ಹೇಳಿದರು.
ಜಗತ್ತಿಗೆ AI ಅಂದ್ರೆ ಕೃತಕ ಬುದ್ಧಿಮತ್ತೆ. ಆದರೆ, ನನಗೆ AI ಎಂದರೆ ಅಮೆರಿಕನ್-ಇಂಡಿಯನ್ ಸ್ಪಿರಿಟ್. ಇದು ವಿಶ್ವದ ಹೊಸ 'AI' ಶಕ್ತಿ...." ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



