ವಿದೇಶ

ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಆಘಾತ: 7.4 ತೀವ್ರತೆಯ ಪ್ರಬಲ ಭೂಕಂಪನ, ಸುನಾಮಿ ಎಚ್ಚರಿಕೆ

ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.

ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಆಘಾತ: 7.4 ತೀವ್ರತೆಯ ಪ್ರಬಲ ಭೂಕಂಪನ, ಸುನಾಮಿ ಎಚ್ಚರಿಕೆ
ಜಪಾನ್ ಭೂಕಂಪ
Published On :

ಟೋಕಿಯೋ: ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.

ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನ ಸಂಭವಿಸಿದ್ದು, ಜಪಾನ್ ನ ಈಶಾನ್ಯ ಭಾಗದ ನನಾವೋ ನಲ್ಲಿ ಭೂ ಕಂಪನದ ಕೇಂದ್ರ ಬಿಂದು ವರದಿಯಾಗಿದೆ. 

ಜಪಾನ್ ನ ಇಶಿಕಾವಾ, ನಿಗಾಟಾ ಮತ್ತು ಟೊಯಾಮಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳಲ್ಲಿ ಜಪಾನ್ ಹವಾಮಾನ ಸಂಸ್ಥೆ ಸುನಾಮಿ ಎಚ್ಚರಿಕೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. 

ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಎತ್ತರದ ಪ್ರದೇಶಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. 5 ಮೀಟರ್ (16 ಅಡಿ) ಎತ್ತರದವರೆಗೆ ಅಲೆಗಳು ಬರುವ ಸಾಧ್ಯತೆಯಿದ್ದು, ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಟೋಕಿಯೊ ಮತ್ತು ಇಡೀ ಕಾಂಟೊ ಪ್ರದೇಶದಲ್ಲಿ ಕಂಪನಗಳು ಸಂಭವಿಸಿವೆ. 2011 ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿದೆ. ಆಗ ಎದ್ದ ಸುನಾಮಿ ಅಲೆಗಳು ಫುಕುಶಿಮಾ ಪರಮಾಣು ಸ್ಥಾವರವನ್ನು ನಾಶಪಡಿಸಿದ್ದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.