ನ್ಯೂಯಾರ್ಕ್: ಪ್ರವಾಸಿಗರಿದ್ದ ಹೆಲಿಕಾಪ್ಟರ್ ಹಡ್ಸನ್ ನದಿಯಲ್ಲಿ ಪತನ; ಮೂವರು ಮಕ್ಕಳು ಸೇರಿ 6 ಮಂದಿ ಸಾವು; Video
ಲೋವರ್ ಮ್ಯಾನ್‌ಹ್ಯಾಟನ್‌ನಿಂದ ಹೊರಟ ಹೆಲಿಕಾಪ್ಟರ್, ಲಿಬರ್ಟಿ ಪ್ರತಿಮೆಯನ್ನು ಸುತ್ತು ಹಾಕಿದ ಬಳಿಕ, ಉತ್ತರಕ್ಕೆ ಹಡ್ಸನ್ ನದಿಯ ಮೇಲಿಂದ ಜಾರ್ಜ್ ವಾಷಿಂಗ್ಟನ್ ಬ್ರಿಡ್ಜ್ನತ್ತ ಹೊರಟಿತ್ತು.

ನ್ಯೂಯಾರ್ಕ್: ಹೆಲಿಕಾಪ್ಟರ್ ಪತನಗೊಂಡು ನದಿಗೆ ಬಿದ್ದ ಪರಿಣಾಮ ಪೈಲಟ್ ಸೇರಿದಂತೆ ಆರು ಮಂದಿ ಸಾವಿಗೀಡಾದ ಘಟನೆ ನ್ಯೂಯಾರ್ಕ್‌ನಲ್ಲಿ ನಡೆದಿದೆ. ಮೃತರಲ್ಲಿ ನಾಲ್ವರು ಸ್ಪ್ಯಾನಿಷ್ ಮೂಲದ ಒಂದೇ ಕುಟುಂಬದವರಾಗಿದ್ದು, ಪ್ರವಾಸಕ್ಕಾಗಿ ನ್ಯೂಯಾರ್ಕ್‌ಗೆ ಬಂದಿದ್ದರು. ಮೃತಪಟ್ಟವರಲ್ಲಿ ಮೂವರು ಮಕ್ಕಳು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಮಧ್ಯಾಹ್ನ ಪಿಯರ್ 40ರಲ್ಲಿ ಸಂಭವಿಸಿದ ಘಟನೆಯಲ್ಲಿ ಬೆಲ್ 206L-4 ಲಾಂಗ್‌ರೇಂಜರ್ IV ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ.
ಲೋವರ್ ಮ್ಯಾನ್‌ಹ್ಯಾಟನ್‌ನಿಂದ ಹೊರಟ ಹೆಲಿಕಾಪ್ಟರ್, ಲಿಬರ್ಟಿ ಪ್ರತಿಮೆಯನ್ನು ಸುತ್ತು ಹಾಕಿದ ಬಳಿಕ, ಉತ್ತರಕ್ಕೆ ಹಡ್ಸನ್ ನದಿಯ ಮೇಲಿಂದ ಜಾರ್ಜ್ ವಾಷಿಂಗ್ಟನ್ ಬ್ರಿಡ್ಜ್ನತ್ತ ಹೊರಟಿತ್ತು. ಈ ಸಂದರ್ಭದಲ್ಲಿ ಏಕಾಏಕಿ ದಕ್ಷಿಣಕ್ಕೆ ತಿರುಗಿದ ಹೆಲಿಕಾಪ್ಟರ್ ನ್ಯೂಜೆರ್ಸಿ ಬಳಿ ನದಿಗೆ ಅಪ್ಪಳಿಸಿದೆ.
ಹೆಲಿಕಾಪ್ಟರ್ ಪತನದ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಬೆಲ್ 206 ಹೆಲಿಕಾಪ್ಟರ್‌ನ ಪತನಗೊಂಡ ಭಾಗಗಳು ಹಡ್ಸನ್ ನದಿಗೆ ಬೀಳುವುದನ್ನು ನೋಡಬಹುದಾಗಿದೆ. ಅಲ್ಲದೇ ಹೆಲಿಕಾಪ್ಟರ್‌ನ ರೋಟರ್ ಬ್ಲೇಡ್ ತುಂಡಾಗಿ ನದಿಗೆ ಮೊದಲು ಬಿದ್ದಿದೆ. ಬಳಿಕ ಪಕ್ಕದಲ್ಲಿ ಹೆಲಿಕಾಪ್ಟರ್ ನದಿಗೆ ಅಪ್ಪಳಿಸಿದೆ.
ಡೈಲಿ ಬೀಸ್ಟ್ ವರದಿ ಪ್ರಕಾರ, ಅಗಸ್ಟಿನ್ ಎಸ್ಕೋಬಾರ್, ಅವರ ಪತ್ನಿ ಮರ್ಸ್ ಕ್ಯಾಂಪ್ರುಬಿ ಮಾಂಟಲ್ ಮತ್ತು ಅವರ 4, 5 ಮತ್ತು 11 ವರ್ಷ ವಯಸ್ಸಿನ ಮಕ್ಕಳು ಸಾವನ್ನಪ್ಪಿದ್ದರೆ. ಎಸ್ಕೋಬಾರ್ ಸ್ಪೇನ್‌ನಲ್ಲಿ ಯುರೋಪಿಯನ್ ಟೆಕ್ ದೈತ್ಯ ಸೀಮೆನ್ಸ್ ಕಾರ್ಯಾಚರಣೆಗಳ ಸಿಇಒ ಆಗಿದ್ದರು.
ಹೆಲಿಕಾಪ್ಟರ್ ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸ್ಕೈಪೋರ್ಟ್‌ನಿಂದ ಹೊರಟು, ಹಾರಿ ಮ್ಯಾನ್‌ಹ್ಯಾಟನ್ ತೀರದ ಜಾರ್ಜ್ ವಾಷಿಂಗ್ಟನ್ ಸೇತುವೆ ಬಳಿ ಬಂದು ತಲುಪಿತ್ತು. ನಂತರ ಅದು ಡೌನ್‌ಟೌನ್ ಮ್ಯಾನ್‌ಹ್ಯಾಟನ್ ಹೆಲಿಪೋರ್ಟ್ ಕಡೆಗೆ ಹಿಂತಿರುಗುವಾಗ ನಿಯಂತ್ರಣ ಕಳೆದುಕೊಂಡು ನದಿಗೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. ಇನ್ನೂ ಯಾಂತ್ರಿಕ ವೈಫಲ್ಯದಿಂದ ಅಪಘಾತ ಸಂಭವಿಸಿದ್ದು, ಪೈಲಟ್‌ಗೆ ವಿಮಾನವನ್ನು ಉಳಿಸಲು ಯಾವುದೇ ಅವಕಾಶವಿರಲಿಲ್ಲ ಎಂದು ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


