'ಕಳವಳಕಾರಿ': ಉಗ್ರರ ದಾಳಿಗೆ ಮೃತಪಟ್ಟ ಪ್ರವಾಸಿಗರಿಗೆ ಪಾಕಿಸ್ತಾನ ಸಂತಾಪ
ಮೃತರ ಕುಟುಂಬಸ್ಥರು ಮತ್ತು ಸಮೀಪ ಬಂಧುಗಳಿಗೆ ಸಂತಾಪ ಸೂಚಿಸುತ್ತೇವೆ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇವೆ ಎಂದು ದಾಳಿಯ ಕುರಿತು ಮಾಧ್ಯಮ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ಕಚೇರಿಯ ವಕ್ತಾರರು ತಿಳಿಸಿದ್ದಾರೆ.

ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಬಲಿತೆಗೆದುಕೊಂಡ ಪ್ರವಾಸಿಗರ ಸಾವಿಗೆ ಪಾಕಿಸ್ತಾನ ಸಂತಾಪ ಸೂಚಿಸಿದೆ.
ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ನಡೆದ ದಾಳಿಯಲ್ಲಿ ಪ್ರವಾಸಿಗರು ಉಗ್ರರ ಗುಂಡಿನ ದಾಳಿಗೆ ಮೃತಪಟ್ಟ ಬಗ್ಗೆ ನಾವು ಕಳವಳ ವ್ಯಕ್ತಪಡಿಸುತ್ತೇವೆ. ಮೃತರ ಕುಟುಂಬಸ್ಥರು ಮತ್ತು ಸಮೀಪ ಬಂಧುಗಳಿಗೆ ಸಂತಾಪ ಸೂಚಿಸುತ್ತೇವೆ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇವೆ ಎಂದು ದಾಳಿಯ ಕುರಿತು ಮಾಧ್ಯಮ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ಕಚೇರಿಯ ವಕ್ತಾರರು ತಿಳಿಸಿದ್ದಾರೆ.
ನಿನ್ನೆ ಮಂಗಳವಾರ ಮಧ್ಯಾಹ್ನ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಹಾರಿಸಿದ ಗುಂಡಿನ ದಾಳಿಗೆ ಜಮ್ಮು-ಕಾಶ್ಮೀರಕ್ಕೆ ಪ್ರವಾಸ ತೆರಳಿದ್ದ 26 ಜನರು ಮೃತಪಟ್ಟ 2019 ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



