Pahalgam attack: ಭಾರತದ ಸಂಭಾವ್ಯ ದಾಳಿಗೆ ಸಿದ್ಧತೆ? ಪಾಕ್ ನಿಂದ ಕ್ಷಿಪಣಿ ಪರೀಕ್ಷೆ!
ಕರಾಚಿ ಕರಾವಳಿಯಲ್ಲಿ ಪಾಕಿಸ್ತಾನ ಮೇಲ್ಮೈಯಿಂದ ಮೇಲ್ಮೈ ಗುರಿಗಳನ್ನು ಹೊಡೆದುರುಳಿಸುವ ಕ್ಷಿಪಣಿಯ ಪರೀಕ್ಷೆ ನಡೆಸಲು ಪಾಕಿಸ್ತಾನ ಸಿದ್ಧತೆ ನಡೆಸಿದೆ.

ಇಸ್ಲಾಮಾಬಾದ್: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದೊಂದಿಗೆ ಉದ್ವಿಗ್ನತೆ ಉಂಟಾಗಿರುವ ನಡುವೆಯೇ ಪಾಕಿಸ್ತಾನ ಕ್ಷಿಪಣಿ ಪರೀಕ್ಷೆಗೆ ಮುಂದಾಗಿದೆ.
ಕರಾಚಿ ಕರಾವಳಿಯಲ್ಲಿ ಪಾಕಿಸ್ತಾನ ಮೇಲ್ಮೈಯಿಂದ ಮೇಲ್ಮೈ ಗುರಿಗಳನ್ನು ಹೊಡೆದುರುಳಿಸುವ ಕ್ಷಿಪಣಿಯ ಪರೀಕ್ಷೆ ನಡೆಸಲು ಪಾಕಿಸ್ತಾನ ಸಿದ್ಧತೆ ನಡೆಸಿದೆ. ಈ ಕುರಿತು ಪಾಕಿಸ್ತಾನ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದೆ ಎಂದು ಮೂಲಗಳು ತಿಳಿಸಿವೆ.
ಪಾಕಿಸ್ತಾನದ ಏಜೆನ್ಸಿಗಳು ಭಾರತೀಯ ಸಮಯ ಸುಮಾರು 2130 ಗಂಟೆಗೆ (ರಾತ್ರಿ 9:30) ಈ ಅಧಿಸೂಚನೆಯನ್ನು ಹೊರಡಿಸಿವೆ. ಮೂಲಗಳ ಪ್ರಕಾರ, ಕ್ಷಿಪಣಿ ಪರೀಕ್ಷೆಯು ಗುರುವಾರ (ಏಪ್ರಿಲ್ 24, 2025) ರಿಂದ ಶುಕ್ರವಾರ (ಏಪ್ರಿಲ್ 25, 2025) ರ ನಡುವೆ ನಡೆಯಲಿದೆ ಎಂದು ಹೇಳಲಾಗಿದೆ.
ಭಾರತ ದಾಳಿ ಭೀತಿ: ಎಚ್ಚರಿಕೆ ಕೊಟ್ಟ ಪಾಕಿಸ್ತಾನ
ಇನ್ನು ಕಾಶ್ಮೀರದ ಪಹಲ್ಗಾಮ್ ದಾಳಿಯಲ್ಲಿ ಪಾಕಿಸ್ತಾನದ ಕೈವಾಡದ ಕುರಿತು ಶಂಕೆ ವ್ಯಕ್ತಪಡಿಸುತ್ತಿರುವ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಈಗಾಗಲೇ ಭಾರತ ಸರ್ಕಾರ ಭದ್ರತಾ ಕುರಿತ ಪ್ರಮುಖ ಸಂಪುಟ ಸಮಿತಿ ಸಭೆಯನ್ನು ನಡೆಸುತ್ತಿದೆ. ಅಲ್ಲದೆ ಸರ್ವಪಕ್ಷ ಸಭೆ ಕರೆದಿದ್ದು, ಸರ್ಕಾರ ಕೈಗೊಳ್ಳಬಹುದಾದ ಮುಂದಿನ ಕ್ರಮಗಳು ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.
ಈ ಪೈಕಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸುವ ಭೀತಿ ಕೂಡ ಪಾಕಿಸ್ತಾನಕ್ಕೆ ಇದೆ. ಇದೇ ಕಾರಣಕ್ಕೆ ಪಾಕಿಸ್ತಾನ ಇದೀಗ ಕ್ಷಿಪಣಿ ಪರೀಕ್ಷೆ ನಡೆಸಿದ್ದು, ಆ ಮೂಲಕ ಪಾಕಿಸ್ತಾನದ ಮೇಲೆ ಭಾರತ ಯಾವುದೇ ಕಠಿಣ ಕ್ರಮ ಕೈಗೊಂಡರೂ ಪಾಕಿಸ್ತಾನ ಕೈಕಟ್ಟಿ ಕೂರುವುದಿಲ್ಲ ಎಂಬ ಸಂದೇಶ ರವಾನೆ ಮಾಡಲು ಈ ಪರೀಕ್ಷೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಈ ಬೆಳವಣಿಗೆಯನ್ನು ಸಂಬಂಧಪಟ್ಟ ಭಾರತೀಯ ಏಜೆನ್ಸಿಗಳು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಜಮ್ಮು ಮತ್ತು ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್‌ನಲ್ಲಿ ಏಪ್ರಿಲ್ 22, 2025 ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಉಗ್ರರ ಗುಂಡೇಟಿಗೆ ಬಲಿಯಾಗಿದ್ದರು. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಪ್ರಾತಿನಿಧಿಕ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ (TRF) ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




