'ಭಾರತ-ಪಾಕಿಸ್ತಾನ ನಡುವೆ ಕಾಶ್ಮೀರಕ್ಕಾಗಿ ಸಾವಿರ ವರ್ಷಗಳಿಂದ ಹೋರಾಟ, ಅವರು ಸಮಸ್ಯೆ ಬಗೆಹರಿಸಿಕೊಳ್ಳುತ್ತಾರೆ': ಡೊನಾಲ್ಡ್ ಟ್ರಂಪ್ ಹೇಳಿಕೆ
ನಾನು ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳಿಗೆ ತುಂಬಾ ಹತ್ತಿರವಾಗಿದ್ದೇನೆ, ಕಳೆದ ಹಲವಾರು ದಶಕಗಳಿಂದ ಎರಡೂ ದೇಶಗಳು ಹೋರಾಟ ಮಾಡುತ್ತಿವೆ. ಇತ್ತೀಚಿನ ಭಯೋತ್ಪಾದಕ ದಾಳಿಯಿಂದ ಪರಿಸ್ಥಿತಿ ಇನ್ನೂ ಕೆಟ್ಟದಾಗಿದೆ.

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವಾಗಲೂ ಉದ್ವಿಗ್ನತೆ ಇದೆ. ಎರಡೂ ದೇಶಗಳು ಒಂದಲ್ಲ ಒಂದು ರೀತಿಯಲ್ಲಿ ಅದನ್ನು ಬಗೆಹರಿಸಿಕೊಳ್ಳುತ್ತವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ನಾನು ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳಿಗೆ ತುಂಬಾ ಹತ್ತಿರವಾಗಿದ್ದೇನೆ, ಸಾವಿರ ವರ್ಷಗಳಿಂದ ಎರಡೂ ದೇಶಗಳು ಹೋರಾಟ ಮಾಡುತ್ತಿವೆ. ಇತ್ತೀಚಿನ ಭಯೋತ್ಪಾದಕ ದಾಳಿಯಿಂದ ಪರಿಸ್ಥಿತಿ ಇನ್ನೂ ಕೆಟ್ಟದಾಗಿದೆ ಎಂದು ಟ್ರಂಪ್ ರೋಮ್‌ಗೆ ಹೋಗುವ ದಾರಿಯಲ್ಲಿ ಏರ್ ಫೋರ್ಸ್ ಒನ್‌ನಲ್ಲಿ ವರದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಮೃತಪಟ್ಟ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಬಗ್ಗೆ ಎರಡು ರಾಷ್ಟ್ರಗಳ ನಾಯಕರೊಂದಿಗೆ ಮಾತನಾಡುತ್ತೀರಾ ಎಂದು ಸುದ್ದಿಗಾರರು ಪ್ರಶ್ನೆ ಕೇಳಿದಾಗ, ಗಡಿಯಲ್ಲಿ 1,500 ವರ್ಷಗಳಿಂದ ಉದ್ವಿಗ್ನತೆ ಇದೆ. ಅದು ಹಾಗೆಯೇ ಇದೆ, ಅದನ್ನು ಒಂದಲ್ಲ ಒಂದು ರೀತಿಯಲ್ಲಿ ಬಗೆಹರಿಸುತ್ತಾರೆ ಎಂಬುದು ನನಗೆ ಗೊತ್ತಿದೆ. ನನಗೆ ಎರಡೂ ದೇಶಗಳ ನಾಯಕರು ಬಹಳ ಆತ್ಮೀಯರು. ಪಾಕಿಸ್ತಾನ ಮತ್ತು ಭಾರತದ ನಡುವೆ ದೊಡ್ಡ ಉದ್ವಿಗ್ನತೆ ಇದೆ ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ಭಯೋತ್ಪಾದಕ ದಾಳಿಯ ಹೊಣೆಯನ್ನು ನಿಷೇಧಿತ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (LeT) ನ ಪ್ರತಿನಿಧಿಯಾದ ರೆಸಿಸ್ಟೆನ್ಸ್ ಫ್ರಂಟ್ (TRF) ಹೊತ್ತುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



