ವಿದೇಶ

ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಕೆ: ಕನ್ನಡದಲ್ಲಿಯೇ ಮಾತನಾಡಿದ ಚಂದ್ರ ಆರ್ಯ

ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು.

ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಕೆ: ಕನ್ನಡದಲ್ಲಿಯೇ ಮಾತನಾಡಿದ ಚಂದ್ರ ಆರ್ಯ
ಚಂದ್ರ ಆರ್ಯ
Published On :

ಒಟ್ಟಾವಾ: ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಅವರ ಹಠಾತ್ ರಾಜೀನಾಮೆಯಿಂದ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂಬ ಕುತೂಹಲ ಸಾಕಷ್ಟು ಮೂಡಿದೆ. ಭಾರತ ಮೂಲದ ಚಂದ್ರ ಆರ್ಯ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದು, ಬಳಿಕ ಅವರು ಕನ್ನಡದಲ್ಲಿಯೇ ಮಾತನಾಡಿದ್ದು ಸುದ್ದಿಯಾಗಿದೆ.

ನಾಮಪತ್ರ ಸಲ್ಲಿಕೆ ಬಳಿಕ ಚಂದ್ರ ಆರ್ಯ ಕನ್ನಡದಲ್ಲಿ ಮಾತು

ಕರ್ನಾಟಕದ ತುಮಕೂರು ಜಿಲ್ಲೆ ಸಿರಾ ತಾಲೂಕಿನ ದ್ವಾರಾಳು ಗ್ರಾಮದ ಮೂಲದವರಾಗಿರುವ ಚಂದ್ರ ಆರ್ಯ ಪ್ರಧಾನಿ ಹುದ್ದೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ಸಂತೋಷವಾಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ, ಸಿರಾ ತಾಲೂಕಿನ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಕನ್ನಡದಲ್ಲಿ ಮಾತನಾಡುವುದು, ಸುಮಾರು ಐದು ಕೋಟಿ ಕನ್ನಡಿಗರಿಗೆ ಹಮ್ಮೆಯ ವಿಚಾರ ಎಂದಿದ್ದಾರೆ.

ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು. ರಾಷ್ಟ್ರಕವಿ ಕುವೆಂಪು ಬರೆದಿರುವ ಹಾಗೂ ನಟಸಾರ್ವಭೌಮ ಡಾ. ರಾಜ್​ಕುಮಾರ್ ಹಾಡಿರುವ ಭಾವಗೀತೆ ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎಂದು ಹೇಳುವ ಮೂಲಕ ಮಾತು ಮುಗಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.