Donald Trump ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಮಹತ್ವದ ಘೋಷಣೆ: ದಕ್ಷಿಣ ಗಡಿಯಲ್ಲಿ ತುರ್ತು ಪರಿಸ್ಥಿತಿ, ಅಕ್ರಮ ನುಸುಳುಕೋರರಿಗೆ ಬಾಗಿಲು ಬಂದ್!
ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್, ದಕ್ಷಿಣ ಗಡಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.

ವಾಷಿಂಗ್ ಟನ್ ಡಿಸಿ: ಅಮೇರಿಕಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೆ ಡೊನಾಲ್ಡ್ ಟ್ರಂಪ್ ನಿರೀಕ್ಷೆಯಂತೆಯೇ ಮಹತ್ವದ ಘೋಷಣೆಗಳನ್ನು ಪ್ರಕಟಿಸಿದ್ದಾರೆ.
ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್, ದಕ್ಷಿಣ ಗಡಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಮೆಕ್ಸಿಕೋ- ಅಮೇರಿಕಾ ಗಡಿ ಭಾಗದಲ್ಲಿ ಅಮೇರಿಕಾ ಸೇನೆಯನ್ನು ನಿಯೋಜಿಸಲಾಗುತ್ತದೆ, ಈ ಮೂಲಕ ಅಕ್ರಮ ನುಸುಳುಕೋರರಿಗೆ ಬಾಗಿಲು ಬಂದ್ ಆಗಲಿದೆ, ಈಗಾಗಲೇ ಅಮೇರಿಕಾ ಪ್ರವೇಶಿಸಿರುವ ಅಕ್ರಮ ನುಸುಳುಕೋರರನ್ನು ಹೊರಹಾಕುತ್ತೇವೆ, ಮೆಕ್ಸಿಕೋ ಗಡಿಯಲ್ಲಿ ಗೋಡೆ ನಿರ್ಮಿಸುವ ಕೆಲಸ ನಡೆಯಲಿದೆ ಎಂದು ಘೋಷಿಸಿದ್ದಾರೆ.
ಅಮೇರಿಕಾ ಸೇನೆಯನ್ನು ಬಲಪಡಿಸುವುದು ನಮ್ಮ ಗುರಿ 2017 ರಂತೆ ಜಗತ್ತಿನ ಬಲಿಷ್ಠ ಸೇನೆಯನ್ನು ನಿರ್ಮಿಸುತ್ತೇವೆ ಎಂದು ಟ್ರಂಪ್ ಇದೇ ವೇಳೆ ಹೇಳಿದ್ದಾರೆ. ಇದೇ ವೇಳೆ ಸರ್ಕಾರದ ಪಾರದರ್ಶಕತೆಗಾಗಿ ಇಲಾಖೆಯನ್ನು ಸ್ಥಾಪಿಸುತ್ತೇವೆ, ಭಯೋತ್ಪಾದನೆಯನ್ನು ಮಟ್ಟ ಹಾಕುತ್ತೇವೆ ಎಂದು ಟ್ರಂಪ್ ತಿಳಿಸಿದ್ದಾರೆ.
ಇನ್ನು ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ಭಾರತ ಸೇರಿದಂತೆ ಹಲವು ದೇಶಗಳು ಅಮೇರಿಕಾ ಉತ್ಪನ್ನಗಳಿಗೆ ಹೆಚ್ಚಿನ ತೆರಿಗೆ ವಿಧಿಸುವುದನ್ನು ವಿರೋಧಿಸಿ ನಾವೂ ಪ್ರತೀಕಾರಕ್ಕೆ ಮುಂದಾಗುತ್ತೇವೆ ಎಂದು ಹೇಳಿದ್ದರು. ಅದರಂತೆ ಅನ್ಯ ದೇಶಗಳಿಗೆ ಹೆಚ್ಚಿನ ತೆರಿಗೆ ವಿಧಿಸುವ ಬಗ್ಗೆ ತಮ್ಮ ಮೊದಲ ಭಾಷಣದಲ್ಲಿ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದು, ಅಮೇರಿಕಾದ ಜನರ ಒಳಿತಿಗಾಗಿ ಈ ಕ್ರಮ ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


