ಪ್ರಧಾನಿ ಮೋದಿಗೆ ಘಾನಾ ದೇಶದ ರಾಷ್ಟ್ರೀಯ ಗೌರವ ಪ್ರದಾನ; Video
ಮೋದಿ ಅವರ "ವಿಶಿಷ್ಟ ರಾಜನೀತಿ ಮತ್ತು ಪ್ರಭಾವಿ ಜಾಗತಿಕ ನಾಯಕತ್ವ" ಕ್ಕಾಗಿ ಈ ಪ್ರಶಸ್ತಿ ನೀಡಲಾಗಿದೆ.

ಅಕ್ರಾ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಘಾನಾ ದೇಶದ ರಾಷ್ಟ್ರೀಯ ಪ್ರಶಸ್ತಿ 'ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ' ಪ್ರದಾನ ಮಾಡಿ ಗೌರವಿಸಲಾಗಿದೆ. ಮೋದಿ ಅವರ "ವಿಶಿಷ್ಟ ರಾಜನೀತಿ ಮತ್ತು ಪ್ರಭಾವಿ ಜಾಗತಿಕ ನಾಯಕತ್ವ" ಕ್ಕಾಗಿ ಈ ಪ್ರಶಸ್ತಿ ನೀಡಲಾಗಿದೆ.
ಘಾನಾ ಅಧ್ಯಕ್ಷ ಜಾನ್ ಡ್ರಾಮಣಿ ಮಹಾಮಾ ಅವರಿಂದ ಮೋದಿ ಬುಧವಾರ ಪ್ರಶಸ್ತಿ ಸ್ವೀಕರಿಸಿದರು. ಈ ಪ್ರಶಸ್ತಿಯು ತನಗೆ ಅತ್ಯಂತ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
ಈ ಗೌರವ 140 ಕೋಟಿ ಭಾರತೀಯರ ಸಾಧನೆ. ಅವರ ಪರವಾಗಿ ನಾನು ಇದನ್ನು ಸ್ವೀಕರಿಸಿದ್ದೇನೆ. ಈ ಪ್ರಶಸ್ತಿಯನ್ನು ಎರಡು ದೇಶಗಳ ಯುವ ಜನತೆಯ ಆಕಾಂಕ್ಷೆಗಳು, ಉಜ್ವಲ ಭವಿಷ್ಯ, ಅವರ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳು ಮತ್ತು ವೈವಿಧ್ಯತೆ ಹಾಗೂ ಭಾರತ ಮತ್ತು ಘಾನಾದ ನಡುವಿನ ಐತಿಹಾಸಿಕ ಸಂಬಂಧಗಳಿಗೆ ಅರ್ಪಿಸುತ್ತೇನೆ ಎಂದಿದ್ದಾರೆ.
ಈ ಗೌರವ ಭಾರತ-ಘಾನಾ ಸ್ನೇಹಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುವ ಒಂದು ಜವಾಬ್ದಾರಿಯೂ ಆಗಿದೆ. ಭಾರತವು ಯಾವಾಗಲೂ ಘಾನಾದ ಜನರೊಂದಿಗೆ ನಿಲ್ಲುತ್ತದೆ ಮತ್ತು ವಿಶ್ವಾಸಾರ್ಹ ಮತ್ತು ಅಭಿವೃದ್ಧಿ ಪಾಲುದಾರನಾಗಿ ಕೊಡುಗೆ ನೀಡುವುದನ್ನು ಮುಂದುವರಿಸುತ್ತದೆ" ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



