ವಿದೇಶ

ಅಮೆರಿಕಾ: ಅಲಸ್ಕಾ ಕರಾವಳಿಯಲ್ಲಿ ಭಾರೀ ಭೂಕಂಪ; ರಿಕ್ಟರ್ ಮಾಪಕದಲ್ಲಿ 7.3 ತೀವ್ರತೆ ದಾಖಲು

ದಕ್ಷಿಣ ಅಲಾಸ್ಕಾ ಮತ್ತು ಅಲಾಸ್ಕಾ ಪರ್ಯಾಯ ದ್ವೀಪದ ಕರಾವಳಿ ಪ್ರದೇಶಗಳಿಗೆ ನೀಡಲಾಗಿದ್ದ ಸುನಾಮಿ ಸಲಹೆಯನ್ನು ರದ್ದುಪಡಿಸಲಾಗಿದೆ ಎಂದು ರಾಷ್ಟ್ರೀಯ ಸುನಾಮಿ ಎಚ್ಚರಿಕೆ ಕೇಂದ್ರ (NTWC) ತಿಳಿಸಿದೆ.

ಅಮೆರಿಕಾ: ಅಲಸ್ಕಾ ಕರಾವಳಿಯಲ್ಲಿ ಭಾರೀ ಭೂಕಂಪ; ರಿಕ್ಟರ್ ಮಾಪಕದಲ್ಲಿ 7.3 ತೀವ್ರತೆ ದಾಖಲು
ಸಂಗ್ರಹ ಚಿತ್ರ
Published On :

ವಾಷಿಂಗ್ಟನ್: ಅಮೆರಿಕಾದ ಅಲಾಸ್ಕಾ ಕರಾವಳಿಯಲ್ಲಿ ಭಾರೀ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.3 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.

ಭೂಕಂಪದ ಕೇಂದ್ರಬಿಂದುವು ದ್ವೀಪ ಪಟ್ಟಣವಾದ ಸ್ಯಾಂಡ್ ಪಾಯಿಂಟ್‌ನ ದಕ್ಷಿಣಕ್ಕೆ ಸುಮಾರು 54 ಮೈಲುಗಳು (87 ಕಿಲೋಮೀಟರ್) ದೂರದಲ್ಲಿದೆ ಎಂದು ಯುಎಸ್‌ಜಿಎಸ್ ತಿಳಿಸಿದೆ.

ಭೂಕಂಪದ ನಂತರ ಅಧಿಕಾರಿಗಳು ದಕ್ಷಿಣ ಅಲಾಸ್ಕಾ ಮತ್ತು ಅಲಾಸ್ಕಾ ಪರ್ಯಾಯ ದ್ವೀಪಕ್ಕೆ ಸುನಾಮಿ ಎಚ್ಚರಿಕೆಯನ್ನು ನೀಡಿದ್ದರು. ನಂತರ ಎಚ್ಚರಿಕೆಯನ್ನು ಹಿಂಪಡೆದುಕೊಂಡರು.

ದಕ್ಷಿಣ ಅಲಾಸ್ಕಾ ಮತ್ತು ಅಲಾಸ್ಕಾ ಪರ್ಯಾಯ ದ್ವೀಪದ ಕರಾವಳಿ ಪ್ರದೇಶಗಳಿಗೆ ನೀಡಲಾಗಿದ್ದ ಸುನಾಮಿ ಸಲಹೆಯನ್ನು ರದ್ದುಪಡಿಸಲಾಗಿದೆ ಎಂದು ರಾಷ್ಟ್ರೀಯ ಸುನಾಮಿ ಎಚ್ಚರಿಕೆ ಕೇಂದ್ರ (NTWC) ತಿಳಿಸಿದೆ.

ಆರಂಭದಲ್ಲಿ ಭೂಮಿಯು 12 ಬಾರಿ ಕಂಪಿಸಿತ್ತು. ಈ ಪೈಕಿ ಒಂದು ಭೂಕಂಪ 5.2ರಷ್ಟು ತೀವ್ರತೆಯನ್ನು ಹೊಂದಿತ್ತು. ಸುನಾಮಿ ಎಚ್ಚರಿಕೆ ಮತ್ತು ಸಲಹೆಯನ್ನು ಅಲಾಸ್ಕನ್ ಕರಾವಳಿ ಪ್ರದೇಶಗಳಿಗೆ ಮಾತ್ರ ನೀಡಲಾಗಿದ್ದು, ದೂರದ ಪ್ರದೇಶಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ರಾಷ್ಟ್ರೀಯ ಸುನಾಮಿ ಎಚ್ಚರಿಕೆ ಕೇಂದ್ರ ತಿಳಿಸಿದೆ.

ಭೂಕಂಪದ ಬಳಿಕ ಸ್ಯಾಂಡ್ ಪಾಯಿಂಟ್‌ನಲ್ಲಿ ಗರಿಷ್ಠ 0.2 ಅಡಿ (6.1 ಸೆಂಟಿಮೀಟರ್) ಎತ್ತರದ ಸುನಾಮಿ ಕಂಡುಬಂದಿದ್ದು, ಸ್ಥಳೀಯ ನಿವಾಸಿಗಳು ಅಪಾಯಗಳ ಬಗ್ಗೆ ಎಚ್ಚರದಿಂದಿರಬೇಕು. ಸ್ಥಳೀಯ ಅಧಿಕಾರಿಗಳು ಸುರಕ್ಷಿತ ಎಂದು ಸೂಚಿಸುವವರೆಗೆ ಅಪಾಯ ವಲಯಗಳಿಗೆ ತೆರಳಬಾರದು ಎಂದು ಸಲಹೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.