Ceasefire: ಕೊನೆಗೂ 'ಕದನ ವಿರಾಮ' ಒಪ್ಪಿದ ಇಸ್ರೇಲ್-ಇರಾನ್; ಮಧ್ಯ ಪ್ರಾಚ್ಯದಲ್ಲಿನ 12 ದಿನಗಳ ಯುದ್ಧ ಸದ್ಯಕ್ಕೆ ಅಂತ್ಯ!
ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸಿದ ಕದನ ವಿರಾಮ ಒಪ್ಪಂದ ಸೂತ್ರವನ್ನು ಇಸ್ರೇಲ್ ಹಾಗೂ ಇರಾನ್ ಮಂಗಳವಾರ ಒಪ್ಪಿಕೊಂಡಿವೆ.

ಜೆರುಸೆಲೆಂ: ಇಸ್ರೇಲ್ ಹಾಗೂ ಇರಾನ್ ನಡುವಣ ಸಂಘರ್ಷ, ಮಿಲಿಟರಿ ಕಾರ್ಯಾಚರಣೆಯಿಂದ ಕಳೆದ 12 ದಿನಗಳಿಂದ ಮಧ್ಯ ಪ್ರಾಚ್ಯದಲ್ಲಿ ಉಂಟಾಗಿದ್ದ ಯುದ್ಧ ಕೊನೆಗೂ ಅಂತ್ಯವಾಗಿದೆ.
ಕತಾರ್ ನಲ್ಲಿ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಇರಾನ್ ಪ್ರತೀಕಾರದ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸಿದ ಕದನ ವಿರಾಮ ಒಪ್ಪಂದ ಸೂತ್ರವನ್ನು ಇಸ್ರೇಲ್ ಹಾಗೂ ಇರಾನ್ ಮಂಗಳವಾರ ಒಪ್ಪಿಕೊಂಡಿವೆ.
ಮಂಗಳವಾರ ಮುಂಜಾನೆ ಇಸ್ರೇಲ್ ಗುರಿಯಾಗಿಸಿ ಇರಾನ್ ನಡೆಸಿದ ಅಂತಿಮ ಕ್ಷಿಪಣಿ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದರೆ, ಇಸ್ರೇಲ್ ಬೆಳಗಾಗುವ ಮುನ್ನಾವೇ ಇರಾನ್‌ನಾದ್ಯಂತ ಅನೇಕ ಕಟ್ಟಡಗಳನ್ನು ಗುರಿಯಾಗಿಸಿ ವೈಮಾನಿಕ ದಾಳಿ ನಡೆಸಿತ್ತು. ತದ ನಂತರ ಉಭಯ ರಾಷ್ಟ್ರಗಳು ಕದನ ವಿರಾಮ ಒಪ್ಪಂದವನ್ನು ಒಪ್ಪಿಕೊಂಡಿವೆ.
ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆಯೊಂದಿಗೆ ಇರಾನ್ ಜೊತೆಗಿನ ದ್ವಿಪಕ್ಷೀಯ ಕದನ ವಿರಾಮ ಒಪ್ಪಂದವನ್ನು ಇಸ್ರೇಲ್ ಒಪ್ಪಿಕೊಂಡಿದೆ ಎಂದು ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ. ಇರಾನ್‌ನ ಪರಮಾಣು ಮತ್ತು ಖಂಡಾಂತರ ಕ್ಷಿಪಣಿ ಬೆದರಿಕೆ ಹೋಗಲಾಡಿಸುವುದು ಸೇರಿದಂತೆ ಇರಾನ್ ವಿರುದ್ಧದ 12 ದಿನಗಳ ಕಾರ್ಯಾಚರಣೆಯಲ್ಲಿ ಇಸ್ರೇಲ್ ತನ್ನ ಎಲ್ಲಾ ಯುದ್ಧ ಗುರಿಗಳನ್ನು ಸಾಧಿಸಿದೆ ಎಂದು ಸೋಮವಾರ ರಾತ್ರಿ ಇಸ್ರೇಲ್‌ನ ಭದ್ರತಾ ಕ್ಯಾಬಿನೆಟ್‌ಗೆ ವಿವರಿಸಿರುವುದಾಗಿ ನೇತನ್ಯಾಹು ತಿಳಿಸಿದ್ದಾರೆ.
ಇಸ್ರೇಲ್ ಕೂಡಾ ಇರಾನ್‌ನ ಹಲವು ಕಮಾಂಡರ್ ಗಳನ್ನು ಹತ್ಯೆ ಮಾಡಿದ್ದು, ಹಲವಾರು ಸರ್ಕಾರಿ ಕಟ್ಟಡಗಳನ್ನು ಹಾನಿಗೊಳಿಸಿದೆ. ಇರಾನ್ ನ ವಾಯು ದಾಳಿಯನ್ನು ಸಮರ್ಪಕವಾಗಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿರುವುದಾಗಿ ನೇತನ್ಯಾಹು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



