Iran-Israel war: ಉಭಯ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿವೆ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ
ಇಸ್ರೇಲ್ ಮತ್ತು ಇರಾನ್ ತಮ್ಮ ಅಂತಿಮ ಕಾರ್ಯಾಚರಣೆಗಳನ್ನು ಮುಗಿಸಿದ ನಂತರ, ಸುಮಾರು 6 ಗಂಟೆಗಳಲ್ಲಿ ಕದನ ವಿರಾಮ ಪ್ರಾರಂಭವಾಗುತ್ತದೆ.

ವಾಷಿಂಗ್ಟನ್: ಇಸ್ರೇಲ್ ಮತ್ತು ಇರಾನ್ ರಾಷ್ಟ್ರಗಳ ನಡುವ ಸಂಪೂರ್ಣ ಕದನ ವಿರಾಮ ಒಪ್ಪಂದವಾಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ರುತ್ ನಲ್ಸಿ ಪೋಸ್ಟ್ ಮಾಡಿರುವ ಅವರು, ಎಲ್ಲರಿಗೂ ಅಭಿನಂದನೆಗಳು. ಇಸ್ರೇಲ್ ಮತ್ತು ಇರಾನ್ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಇಸ್ರೇಲ್ ಮತ್ತು ಇರಾನ್ ತಮ್ಮ ಅಂತಿಮ ಕಾರ್ಯಾಚರಣೆಗಳನ್ನು ಮುಗಿಸಿದ ನಂತರ, ಸುಮಾರು 6 ಗಂಟೆಗಳಲ್ಲಿ ಕದನ ವಿರಾಮ ಪ್ರಾರಂಭವಾಗುತ್ತದೆ. 12 ಗಂಟೆಗಳ ಕಾಲ ಇದು ನಡೆಯುತ್ತದೆ. ನಂತರ ಯುದ್ಧವು ಮುಕ್ತಾಯವಾಗುತ್ತದೆ ಎಂದು ಹೇಳಿದ್ದಾರೆ.
ಇರಾನ್ ಮೊದಲು ಕದನ ವಿರಾಮವನ್ನು ಪ್ರಾರಂಭಿಸುತ್ತದೆ. 12 ಗಂಟೆಗಳ ನಂತರ ಇಸ್ರೇಲ್ ಕದನ ವಿರಾಮವನ್ನು ಪ್ರಾರಂಭಿಸುತ್ತದೆ. 24 ಗಂಟೆಗಳ ನಂತರ, 12 ದಿನಗಳ ಯುದ್ಧವು ಅಧಿಕೃತವಾಗಿ ಕೊನೆಗೊಳ್ಳುತ್ತದೆ. ಜಗತ್ತು ಇದನ್ನು ಸ್ವಾಗತಿಸುತ್ತದೆ. ಪ್ರತಿ ಕದನ ವಿರಾಮದ ಸಮಯದಲ್ಲಿ, ಎರಡೂ ಕಡೆಯವರು ಶಾಂತವಾಗಿ ಮತ್ತು ಗೌರವದಿಂದ ಇರುತ್ತಾರೆ ಎಂದು ತಿಳಿಸಿದ್ದಾರೆ.
ಎಲ್ಲವೂ ಸರಿಯಾಗಿ ನಡೆದರೆ, ಇಸ್ರೇಲ್ ಮತ್ತು ಇರಾನ್ ಉಭಯ ದೇಶಗಳು ಈ ಯುದ್ಧವನ್ನು ಕೊನೆಗೊಳಿಸಲು ಧೈರ್ಯ ಮತ್ತು ಬುದ್ಧಿವಂತಿಕೆಯನ್ನು ತೋರಿಸಿವೆ. ಈ ಯುದ್ಧವು ವರ್ಷಗಳವರೆಗೆ ಮುಂದುವರಿಯಬಹುದಿತ್ತು. ಇಡೀ ಮಧ್ಯಪ್ರಾಚ್ಯವನ್ನು ನಾಶ ಮಾಡಬಹುದಿತ್ತು. ಆದರೆ, ಅದು ಆಗಲಿಲ್ಲ. ಮುಂದೆ ಎಂದಿಗೂ ಆಗುವುದಿಲ್ಲ. ದೇವರು ಇಸ್ರೇಲ್ ಅನ್ನು ಆಶೀರ್ವದಿಸಲಿ, ದೇವರು ಇರಾನ್ ಅನ್ನು ಆಶೀರ್ವದಿಸಲಿ, ದೇವರು ಮಧ್ಯಪ್ರಾಚ್ಯವನ್ನು ಆಶೀರ್ವದಿಸಲಿ, ದೇವರು ಅಮೆರಿಕವನ್ನು ಆಶೀರ್ವದಿಸಲಿ, ದೇವರು ಇಡೀ ಜಗತ್ತನ್ನು ಆಶೀರ್ವದಿಸಲಿ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



