Pakistan Train Hijack: ಭದ್ರತಾ ಪಡೆಗಳಿಂದ 27 ಭಯೋತ್ಪಾದಕರ ಹತ್ಯೆ,155 ಪ್ರಯಾಣಿಕರ ರಕ್ಷಣೆ
ಗಡಾಲರ್ ಮತ್ತು ಪೆಹ್ರೊ ಕುನ್ರಿ ಕಣಿವೆ ಪ್ರದೇಶದ ಸಮೀಪದ ಸುರಂಗದಲ್ಲಿ ಬಂದೂಕುಧಾರಿಗಳು ದಾಳಿ ನಡೆಸಿದ್ದರು. ನಂತರ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್ಎ) ದಾಳಿಯ ಹೊಣೆಯನ್ನು ಹೊತ್ತುಕೊಂಡಿತು.

ಕ್ವೆಟ್ಟಾ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲಿನ ಮೇಲೆ ದಾಳಿ ನಡೆಸಿದ ಉಗ್ರರು ನೂರಾರು ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿದ್ದರು. ಈ ಪೈಕಿ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ 155 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, 27 ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ.
ರಕ್ಷಣಾ ಕಾರ್ಯಾಚರಣೆಯ ವೇಳೆ 37 ಪ್ರಯಾಣಿಕರು ಗಾಯಗೊಂಡಿದ್ದು, ಅವರಿಗೆ ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ.
ಮಂಗಳವಾರ ಮಧ್ಯಾಹ್ನ ಕ್ವೆಟ್ಟಾದಿಂದ ಪೆಶಾವರಕ್ಕೆ ತೆರಳುತ್ತಿದ್ದ ಒಂಬತ್ತು ಬೋಗಿಗಳಿರುವ ಜಾಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಸುಮಾರು 400 ಪ್ರಯಾಣಿಕರು ಸಂಚರಿಸುತ್ತಿದ್ದರು. ಗಡಾಲರ್ ಮತ್ತು ಪೆಹ್ರೊ ಕುನ್ರಿ ಕಣಿವೆ ಪ್ರದೇಶದ ಸಮೀಪದ ಸುರಂಗದಲ್ಲಿ ಬಂದೂಕುಧಾರಿಗಳು ದಾಳಿ ನಡೆಸಿದ್ದರು. ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್ಎ) ದಾಳಿಯ ಹೊಣೆ ಹೊತ್ತುಕೊಂಡಿತ್ತು.
ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯ ನಡುವೆಯೂ ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ 155 ಪ್ರಯಾಣಿಕರನ್ನು ರಕ್ಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



