ವಿದೇಶ

2022 ರಿಂದ ಪಾಕ್ ಜೈಲಿನಲ್ಲಿ ಬಂಧಿಯಾಗಿದ್ದ ಭಾರತೀಯ ಮೀನುಗಾರ ಆತ್ಮಹತ್ಯೆ

ಅಕ್ರಮವಾಗಿ ಪಾಕಿಸ್ತಾನದ ಜಲಗಡಿ ಪ್ರವೇಶಿಸಿದ ಆರೋಪದ ಮೇಲೆ ಫೆಬ್ರವರಿ 2022 ರಲ್ಲಿ ಬಂಧಿಸಲ್ಪಟ್ಟ ಆನಂದ್ ಅವರು ಜೈಲಿನ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

2022 ರಿಂದ ಪಾಕ್ ಜೈಲಿನಲ್ಲಿ ಬಂಧಿಯಾಗಿದ್ದ ಭಾರತೀಯ ಮೀನುಗಾರ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Published On :

ಕರಾಚಿ: ಕರಾಚಿಯ ಮಾಲಿರ್ ಜೈಲಿನಲ್ಲಿ ಮಂಗಳವಾರ ಭಾರತೀಯ ಮೀನುಗಾರ ಗೌರವ್ ರಾಮ್ ಆನಂದ್(52) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಡಾನ್.ಕಾಮ್ ವರದಿ ಮಾಡಿದೆ.

ಅಕ್ರಮವಾಗಿ ಪಾಕಿಸ್ತಾನದ ಜಲಗಡಿ ಪ್ರವೇಶಿಸಿದ ಆರೋಪದ ಮೇಲೆ ಫೆಬ್ರವರಿ 2022 ರಲ್ಲಿ ಬಂಧಿಸಲ್ಪಟ್ಟ ಆನಂದ್ ಅವರು ಜೈಲಿನ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿರುವುದಾಗಿ ಡಾನ್ ವರದಿ ಮಾಡಿದೆ.

ಮಾಲಿರ್ ಜೈಲಿನ ಸೂಪರಿಂಟೆಂಡೆಂಟ್ ಅರ್ಷದ್ ಹುಸೇನ್ ಅವರು ಈ ಘಟನೆಯನ್ನು ದೃಢಪಡಿಸಿದ್ದು, ಕೈದಿ ಶೌಚಾಲಯಕ್ಕೆ ಹೋಗಿದ್ದ ವೇಳೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಜೈಲಿನ ಕರ್ತವ್ಯ ನಿರತ ವೈದ್ಯರು ಬೆಳಗಿನ ಜಾವ 2:20 ಕ್ಕೆ ಆನಂದ್ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಮ್ಯಾಜಿಸ್ಟ್ರೇಟ್, ಮುಂದಿನ ಕಾನೂನು ಕ್ರಮಗಳು ಮುಗಿಯುವವರೆಗೆ ಅವರ ದೇಹವನ್ನು ಸೊಹ್ರಾಬ್ ಗೋತ್‌ನಲ್ಲಿರುವ ಈಧಿ ಫೌಂಡೇಶನ್‌ನ ಕೋಲ್ಡ್ ಸ್ಟೋರೇಜ್ ಸ್ಥಳಾಂತರಿಸಲು ಆದೇಶಿಸಿದ್ದಾರೆ.

ಸರ್ಕಾರಿ ಮೂಲಗಳ ಪ್ರಕಾರ, ಡಿಸೆಂಬರ್ 31, 2024 ರ ಹೊತ್ತಿಗೆ, 144 ಭಾರತೀಯ ಮೀನುಗಾರರು ಮತ್ತು 1,173 ದೋಣಿಗಳು - ಮುಖ್ಯವಾಗಿ ಗುಜರಾತ್‌ನವರು - ಪಾಕಿಸ್ತಾನದ ವಶದಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.