ಪಾಕಿಸ್ತಾನಕ್ಕೆ ನೂತನ ಭದ್ರತಾ ಸಲಹೆಗಾರ: ಲೆ. ಜನರಲ್ ಮುಹಮ್ಮದ್ ಅಸಿಮ್ ಮಲಿಕ್ ನೇಮಕ
ಮಲಿಕ್ ಅವರನ್ನು ಕಳೆದ ವರ್ಷ ಅಕ್ಟೋಬರ್ ನಲ್ಲಿ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್‌ನ ಮಹಾನಿರ್ದೇಶಕರಾಗಿ ನೇಮಿಸಲಾಗಿತ್ತು.

ಇಸ್ಲಾಮಾಬಾದ್: ಪಹಲ್ಗಾಮ್ ಭಯೋತ್ಪಾದಕ ದಾಳಿ ನಂತರ ಭಾರತದೊಂದಿಗೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಪಾಕಿಸ್ತಾನವು ಗುಪ್ತಚರ ಇಲಾಖೆ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮುಹಮ್ಮದ್ ಅಸಿಮ್ ಮಲಿಕ್ ಅವರನ್ನು ನೂತನ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಿಸಿದೆ.
ಮಲಿಕ್ ಅವರನ್ನು ಕಳೆದ ವರ್ಷ ಅಕ್ಟೋಬರ್ ನಲ್ಲಿ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್‌ನ ಮಹಾನಿರ್ದೇಶಕರಾಗಿ ನೇಮಿಸಲಾಗಿತ್ತು. ಇತ್ತೀಚಿನ ಬೆಳವಣಿಗೆ ನಂತರ ಮೊನ್ನೆ ಮಂಗಳವಾರ ಕ್ಯಾಬಿನೆಟ್ ವಿಭಾಗವು ಹೊರಡಿಸಿದ ಅಧಿಸೂಚನೆಯ ಪ್ರಕಾರ, ಜನರಲ್ ಮಲಿಕ್ ಅವರಿಗೆ ಔಪಚಾರಿಕವಾಗಿ NSA ಕಾರ್ಯವನ್ನು ನೀಡಲಾಗಿದೆ.
ಲೆಫ್ಟಿನೆಂಟ್ ಜನರಲ್ ಮುಹಮ್ಮದ್ ಅಸಿಮ್ ಮಲಿಕ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಹೆಚ್ಚುವರಿ ಹೊಣೆಯನ್ನು ವಹಿಸಿಕೊಳ್ಳುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅವರು ದೇಶದ ಹತ್ತನೇ ಎನ್ ಎಸ್ ಎ ಆಗಿದ್ದಾರೆ, ಸೇವೆ ಸಲ್ಲಿಸುತ್ತಿರುವ ಐಎಸ್ ಐ ಮುಖ್ಯಸ್ಥರಿಗೆ ಎರಡು ಪ್ರಮುಖ ಹುದ್ದೆಗಳಲ್ಲಿ ಏಕಕಾಲದಲ್ಲಿ ಸೇವೆ ಸಲ್ಲಿಸುವ ಕಾರ್ಯವನ್ನು ನೀಡಲಾಗಿರುವುದು ಇದೇ ಮೊದಲು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



