ಭಾರತದಿಂದ ಪ್ರತೀಕಾರದ ದಾಳಿ ಭೀತಿ: Pokನಲ್ಲಿ 1000ಕ್ಕೂ ಹೆಚ್ಚು ಮದರಸಾಗಳು ಬಂದ್!
ಈ ಮದರಸಾಗಳನ್ನು ತಾತ್ಕಾಲಿಕವಾಗಿ ಮುಚ್ಚುವುದು ನಮ್ಮ ರಕ್ಷಣಾತ್ಮಕ ಕ್ರಮವಾಗಿದೆ ಎಂದು ಪಾಕಿಸ್ತಾನಿ ಅಧಿಕಾರಿ ಹಫೀಜ್ ನಜೀರ್ ಅಹ್ಮದ್ ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಪಾಕಿಸ್ತಾನ ಸರ್ಕಾರ ಮತ್ತು ಅದರ ಸೇನೆಯು ಭಯದ ನೆರಳಿನಲ್ಲಿ ಬದುಕುತ್ತಿವೆ. ಭಾರತದ ಪ್ರತೀಕಾರದ ಭಯದಲ್ಲಿದ್ದಾರೆ. ಇದಕ್ಕಾಗಿಯೇ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (Pok) ಮುಂದಿನ 10 ದಿನಗಳವರೆಗೆ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳನ್ನು ನಿಷೇಧಿಸಿದೆ. ಇಷ್ಟು ಮಾತ್ರವಲ್ಲದೆ ಪಿಒಕೆಯಲ್ಲಿರುವ 1000ಕ್ಕೂ ಹೆಚ್ಚು ಮದರಸಾಗಳನ್ನು ತಾತ್ಕಾಲಿಕವಾಗಿ ಮುಚ್ಚಿದೆ. ಭಾರತವು ಈ ಮದರಸಾಗಳನ್ನು ಭಯೋತ್ಪಾದಕ ತರಬೇತಿ ಕೇಂದ್ರಗಳೆಂದು ಪರಿಗಣಿಸಿ ಗುರಿಯಾಗಿಸಬಹುದು ಎಂಬ ಭಯ ಪಾಕಿಸ್ತಾನಿ ಅಧಿಕಾರಿಗಳೇ ಒಪ್ಪಿಕೊಳ್ಳುತ್ತಿದ್ದಾರೆ.
ಈ ಮದರಸಾಗಳನ್ನು ತಾತ್ಕಾಲಿಕವಾಗಿ ಮುಚ್ಚುವುದು ನಮ್ಮ ರಕ್ಷಣಾತ್ಮಕ ಕ್ರಮವಾಗಿದೆ ಎಂದು ಪಾಕಿಸ್ತಾನಿ ಅಧಿಕಾರಿ ಹಫೀಜ್ ನಜೀರ್ ಅಹ್ಮದ್ ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆದಾಗ್ಯೂ, ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂತಹ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
'ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನ ಎರಡು ರೀತಿಯ ಉದ್ವಿಗ್ನ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಒಂದು ವಾತಾವರಣದ್ದಾದರೆ ಮತ್ತೊಂದು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಕೋಪದಿಂದಾಗಿ ಹುಟ್ಟಿಕೊಂಡಿದೆ. ಪಾಕಿಸ್ತಾನದಲ್ಲಿ ಅವ್ಯವಸ್ಥೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಬಿಸಿಲಿನ ಅಲೆಯನ್ನು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ. ಪಿಒಕೆಯಲ್ಲಿ 445 ನೋಂದಾಯಿತ ಮದರಸಾಗಳಿದ್ದು, 26 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ಪಾಕಿಸ್ತಾನಿ ಅಧಿಕಾರಿ ತಿಳಿಸಿದ್ದಾರೆ.
ಭಾರತವು ಬಹಳ ಸಮಯದಿಂದ ಪಿಒಕೆಯಲ್ಲಿರುವ ಭಯೋತ್ಪಾದಕ ಉಡಾವಣಾ ಪ್ಯಾಡ್‌ಗಳು ಮತ್ತು ತರಬೇತಿ ಶಿಬಿರಗಳ ಮೇಲೆ ನಿಗಾ ಇಟ್ಟಿದೆ. ಹಲವಾರು ವರದಿಗಳು ಮತ್ತು ಗುಪ್ತಚರ ಮಾಹಿತಿಗಳಲ್ಲಿ, ಈ ಮದರಸಾಗಳು ಜಿಹಾದಿ ತರಬೇತಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. 2016ರ ಸರ್ಜಿಕಲ್ ಸ್ಟ್ರೈಕ್ ಮತ್ತು 2019ರ ಬಾಲಕೋಟ್ ವಾಯುದಾಳಿಯ ನಂತರ ಪಿಒಕೆಯಲ್ಲಿ ಇಂತಹ ಚಟುವಟಿಕೆಗಳು ಕಂಡುಬರುತ್ತಿರುವುದು ಇದೇ ಮೊದಲು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



