ಭಾರತದಲ್ಲಿ ಸಿಲುಕಿರುವ ತನ್ನ ಪ್ರಜೆಗಳಿಗೆ ವಾಘಾ ಗಡಿ ಮೂಲಕ ಮರಳಲು ಪಾಕಿಸ್ತಾನ ಅವಕಾಶ
ಭಾರತವನ್ನು ತೊರೆಯಲು ನೀಡಲಾಗಿದ್ದ ಗಡುವು ಗುರುವಾರ ಮುಗಿದಿದ್ದು, ಸುಮಾರು 70 ಪಾಕಿಸ್ತಾನಿ ಪ್ರಜೆಗಳು ಗಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಕೇಂದ್ರ ಸರ್ಕಾರ ಭಾರತದಲ್ಲಿರುವ ಪಾಕಿಸ್ತಾನಿ ಪ್ರಜೆಗಳ ವೀಸಾಗಳನ್ನು ರದ್ದುಗೊಳಿಸಿದೆ. ವೀಸಾ ರದ್ದಾಗಿ ಭಾರತದಲ್ಲಿ ಸಿಲುಕಿರುವ ತನ್ನ ನಾಗರಿಕರಿಗೆ ವಾಘಾ ಗಡಿ ಮೂಲಕ ದೇಶಕ್ಕೆ ಮರಳಲು ಅವಕಾಶ ನೀಡುವುದಾಗಿ ಪಾಕಿಸ್ತಾನ ಶುಕ್ರವಾರ ಘೋಷಿಸಿದೆ.
ಭಾರತದ ಅಮೃತಸರ ಮತ್ತು ಪಾಕಿಸ್ತಾನದ ಲಾಹೋರ್ ಬಳಿ ಇರುವ ಅಟ್ಟಾರಿ-ವಾಘಾ ಗಡಿಯನ್ನು ಏಪ್ರಿಲ್ 30 ರವರೆಗೆ ತೆರೆದಿಟ್ಟು, ಗುರುವಾರ ಬಂದ್ ಮಾಡಲಾಗಿದೆ.
ಭಾರತವನ್ನು ತೊರೆಯಲು ನೀಡಲಾಗಿದ್ದ ಗಡುವು ಗುರುವಾರ ಮುಗಿದಿದ್ದು, ಸುಮಾರು 70 ಪಾಕಿಸ್ತಾನಿ ಪ್ರಜೆಗಳು ಗಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಮಾಧ್ಯಮ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ(MoFA) ವಕ್ತಾರರು, ಮಕ್ಕಳು ಸೇರಿದಂತೆ ಪಾಕಿಸ್ತಾನಿ ಪ್ರಜೆಗಳು ಭಾರತದ ಕಡೆಯ ಅಟ್ಟಾರಿ ಗಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ವರದಿಗಳನ್ನು ಒಪ್ಪಿಕೊಂಡರು.
"ಕೆಲವು ಪಾಕಿಸ್ತಾನಿ ಪ್ರಜೆಗಳು ಅಟ್ಟಾರಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಧ್ಯಮ ವರದಿಗಳ ಬಗ್ಗೆ ನಮಗೆ ತಿಳಿದಿದೆ. ಭಾರತೀಯ ಅಧಿಕಾರಿಗಳು ತಮ್ಮ ಕಡೆಯಿಂದ ಗಡಿ ದಾಟಲು ಅವಕಾಶ ನೀಡಿದರೆ ನಮ್ಮ ನಾಗರಿಕರನ್ನು ಸ್ವೀಕರಿಸಲು ನಾವು ಮುಕ್ತರಾಗಿದ್ದೇವೆ" ಎಂದು MoFA ವಕ್ತಾರರು ತಿಳಿಸಿದ್ದಾರೆ.
ಭವಿಷ್ಯದಲ್ಲಿಯೂ ವಾಘಾ ಗಡಿಯು ಪಾಕಿಸ್ತಾನಕ್ಕೆ ಮರಳಲು ಬಯಸುವ ಪಾಕಿಸ್ತಾನಿ ಪ್ರಜೆಗಳಿಗೆ ಮುಕ್ತವಾಗಿರುತ್ತದೆ ಎಂದು ವಕ್ತಾರರು ಹೇಳಿದ್ದಾರೆ.
ಪಾಕಿಸ್ತಾನಿ ಪ್ರಜೆಗಳ ವೀಸಾಗಳನ್ನು ರದ್ದುಗೊಳಿಸುವ ಭಾರತದ ನಿರ್ಧಾರವನ್ನು ಪಾಕ್ ವಿದೇಶಾಂಗ ಕಚೇರಿ ಟೀಕಿಸಿದೆ.
"ಪಾಕಿಸ್ತಾನಿ ಪ್ರಜೆಗಳ ವೀಸಾಗಳನ್ನು ರದ್ದುಗೊಳಿಸುವ ಭಾರತದ ನಿರ್ಧಾರವು ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಹಲವು ಗಂಭೀರ ಮಾನವೀಯ ಸವಾಲುಗಳನ್ನು ಸೃಷ್ಟಿಸುತ್ತಿದೆ" ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



