"ನಮ್ಮ ಆಯ್ಕೆಯ ಸಮಯ, ಸ್ಥಳದಲ್ಲಿ ಭಾರತದ ವಿರುದ್ಧ ಪ್ರತೀಕಾರಕ್ಕೆ ಸಿದ್ಧ": ಪಾಕಿಸ್ತಾನ
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೂಲಕ ಪಾಕ್ ನಲ್ಲಿರುವ ಉಗ್ರ ನೆಲೆಗಳನ್ನು ಧ್ವಂಸಗೊಳಿಸಿದ ಬೆನ್ನಲ್ಲೇ ಪ್ರಧಾನಿ ಶೆಹಬಾಜ್ ಷರೀಫ್ ರಾಷ್ಟ್ರೀಯ ಭದ್ರತಾ ಮಂಡಳಿ (ಎನ್ಎಸ್ಸಿ) ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಭಾರತೀಯ ಸೇನಾ ದಾಳಿಗಳಿಗೆ ಪ್ರತಿಕ್ರಿಯೆಯಾಗಿ ದೇಶದ ಸಶಸ್ತ್ರ ಪಡೆಗಳು ತಮ್ಮ ಆಯ್ಕೆಯ ಸಮಯ, ಸ್ಥಳ ಮತ್ತು ರೀತಿಯಲ್ಲಿ ಪ್ರತೀಕಾರ ತೀರಿಸಿಕೊಳ್ಳಲು ಸೂಕ್ತ ಅಧಿಕಾರವನ್ನು ಹೊಂದಿವೆ ಎಂದು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಮಂಡಳಿ ಹೇಳಿದೆ.
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೂಲಕ ಪಾಕ್ ನಲ್ಲಿರುವ ಉಗ್ರ ನೆಲೆಗಳನ್ನು ಧ್ವಂಸಗೊಳಿಸಿದ ಬೆನ್ನಲ್ಲೇ ಪ್ರಧಾನಿ ಶೆಹಬಾಜ್ ಷರೀಫ್ ರಾಷ್ಟ್ರೀಯ ಭದ್ರತಾ ಮಂಡಳಿ (ಎನ್ಎಸ್ಸಿ) ಸಭೆಯ ಅಧ್ಯಕ್ಷತೆ ವಹಿಸಿದ್ದರು. ಇದರಲ್ಲಿ ಸಂಪುಟ ಸಚಿವರು, ಮುಖ್ಯಮಂತ್ರಿಗಳು, ಎಲ್ಲಾ ಸೇವೆಗಳ ಮುಖ್ಯಸ್ಥರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿ ಪರಿಸ್ಥಿತಿಯನ್ನು ಚರ್ಚಿಸಿದ್ದಾರೆ.
ವಿಶ್ವಸಂಸ್ಥೆಯ ಚಾರ್ಟರ್ನ 51 ನೇ ವಿಧಿಗೆ ಅನುಗುಣವಾಗಿ, ಭಾರತೀಯ ದಾಳಿಗಳಲ್ಲಿ ಅಮಾಯಕ ಪಾಕಿಸ್ತಾನಿಗಳ ಜೀವಹಾನಿಗೆ ಪ್ರತೀಕಾರ ತೀರಿಸಿಕೊಳ್ಳಲು ಪಾಕಿಸ್ತಾನ ಆತ್ಮರಕ್ಷಣೆಗಾಗಿ, ಆಯ್ಕೆ ಮಾಡಿದ ಸಮಯ, ಸ್ಥಳ ಮತ್ತು ರೀತಿಯಲ್ಲಿ ಪ್ರತಿಕ್ರಿಯಿಸುವ ಹಕ್ಕನ್ನು ಹೊಂದಿದೆ ಎಂದು ಎನ್ಎಸ್ಸಿ ಭಾರತಕ್ಕೆ ಎಚ್ಚರಿಸಿದೆ.
ಈ ನಿಟ್ಟಿನಲ್ಲಿ ಪಾಕಿಸ್ತಾನದ ಸಶಸ್ತ್ರ ಪಡೆಗಳಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದು ಎನ್ಎಸ್ಸಿ ಹೇಳಿಕೆ ತಿಳಿಸಿದೆ. ಷರೀಫ್ ಸಂಪುಟ ಸಭೆ ನಡೆಸಿ ಸಂಸತ್ತಿನಲ್ಲಿ ತಮ್ಮ ಭಾಷಣದ ಮೂಲಕ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ.
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಭಾರತದ ಅಪ್ರಚೋದಿತ ಮತ್ತು ಕಾನೂನುಬಾಹಿರ ಯುದ್ಧ ಕೃತ್ಯ ಎಂದು NSC ಸಭೆ ಹೇಳಿದೆ ಮತ್ತು ಪಾಕಿಸ್ತಾನದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ಸ್ಪಷ್ಟ ಉಲ್ಲಂಘನೆ ಎಂದು NSC ದಾಳಿಯನ್ನು ಖಂಡಿಸಿದೆ. ಇದು ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಯುದ್ಧ ಕೃತ್ಯಗಳಾಗಿವೆ ಎಂದು ಹೇಳಿಕೆ ತಿಳಿಸಿದೆ.
ಭಾರತೀಯ ಸೇನೆ ಮುಗ್ಧ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನಾಗರಿಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿರುವುದು ಮಾನವ ನಡವಳಿಕೆಯ ಎಲ್ಲಾ ಮಾನದಂಡಗಳು ಮತ್ತು ಅಂತರರಾಷ್ಟ್ರೀಯ ಕಾನೂನಿನ ನಿಬಂಧನೆಗಳನ್ನು ಉಲ್ಲಂಘಿಸುವ ಘೋರ ಅಪರಾಧವಾಗಿದೆ ಎಂದು ಪಾಕ್ ಭಾರತದ ವಿರುದ್ಧ ಹೇಳಿಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



