ಒಳಗೆ ನುಗ್ಗಿ ಹೊಡೀತಿದ್ದಾರೆ, ಭಾರತದ ದಾಳಿಯಿಂದ ನಮ್ಮನ್ನು ದೇವರೇ ಕಾಪಾಡಬೇಕು: ಪಾಕ್ ಸಂಸತ್ ನಲ್ಲಿ ಕಣ್ಣೀರಿಟ್ಟ ಸಂಸದರು; Video
ಸಂಸತ್ತಿನಲ್ಲಿ ಚರ್ಚೆಯ ಸಮಯದಲ್ಲಿ ಮಾತನಾಡುತ್ತಿದ್ದ ಪಾಕಿಸ್ತಾನಿ ಸಂಸದ ತಾಹಿರ್ ಇಕ್ಬಾಲ್ ಭಾರತೀಯ ದಾಳಿಯನ್ನು ಉಲ್ಲೇಖಿಸಿ ಕಣ್ಣೀರಿಡಲು ಪ್ರಾರಂಭಿಸಿದ್ದು ಈಗ ಎಲ್ಲೆಡೆ ಸುದ್ದಿಯಾಗುತ್ತಿದೆ.

ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಸ್ಪಷ್ಟ ಉದಾಹರಣೆಯಾಗಿ ಪಾಕಿಸ್ತಾನದ ಸಂಸತ್ತಿನಲ್ಲಿಯೂ ಭಾರತದ ದಾಳಿಯ ಭೀತಿ ಪ್ರತಿಧ್ವನಿಸಿದೆ.
ಸಂಸತ್ತಿನಲ್ಲಿ ಚರ್ಚೆಯ ಸಮಯದಲ್ಲಿ ಮಾತನಾಡುತ್ತಿದ್ದ ಪಾಕಿಸ್ತಾನಿ ಸಂಸದ ತಾಹಿರ್ ಇಕ್ಬಾಲ್ ಭಾರತೀಯ ದಾಳಿಯನ್ನು ಉಲ್ಲೇಖಿಸಿ ಕಣ್ಣೀರಿಡಲು ಪ್ರಾರಂಭಿಸಿದ್ದು ಈಗ ಎಲ್ಲೆಡೆ ಸುದ್ದಿಯಾಗುತ್ತಿದೆ.
ಭಾರತದ ದಾಳಿಯಿಂದ ಪಾಕಿಸ್ತಾನವನ್ನು ರಕ್ಷಿಸುವಂತೆ ಸಂಸತ್ ನಲ್ಲಿ ಮನವಿ ಮಾಡುತ್ತಿದ್ದ ಇಕ್ಬಾಲ್, "ಓ ದೇವರೇ, ಇವತ್ತು ನನ್ನನ್ನು ಕಾಪಾಡು "ಅಲ್ಲಾಹನು ನಮ್ಮ ದೇಶವನ್ನು ರಕ್ಷಿಸಲಿ ಮತ್ತು ನಮ್ಮನ್ನು ಒಗ್ಗಟ್ಟಿನಿಂದ ಇಡಲಿ ಎಂದು ನಾವು ಪ್ರಾರ್ಥಿಸುತ್ತೇವೆ" ಎಂದು ಗದ್ಗದಿತರಾಗಿ ಮಾತನಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗತೊಡಗಿದೆ.
ಮತ್ತೊಬ್ಬ ಮಹಿಳಾ ಸಂಸದೆಯೂ ಭಾರತದ ದಾಳಿ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಜನರನ್ನು ರಕ್ಷಿಸುವಂತೆ ಮನವಿ ಮಾಡಿದ್ದಾರೆ. ಈ ಎರಡೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿವೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ನಿನ್ನೆ ರಾತ್ರಿಯೂ ಪಾಕಿಸ್ತಾನ ಭಾರತದ 15 ನಗರಗಳನ್ನು ಗುರಿಯಾಗಿಸಿಕೊಂಡಿತ್ತು. ರಾತ್ರಿ 1 ಗಂಟೆಯ ಸುಮಾರಿಗೆ ಪಾಕಿಸ್ತಾನ ಡ್ರೋನ್‌ಗಳೊಂದಿಗೆ ದಾಳಿ ಮಾಡಿತು ಮತ್ತು ಕ್ಷಿಪಣಿಗಳನ್ನು ಹಾರಿಸಿತು ಆದರೆ ಪಾಕಿಸ್ತಾನದ ಪ್ರತಿಯೊಂದು ದಾಳಿಯನ್ನು ಭಾರತ ವಿಫಲಗೊಳಿಸಿದ್ದು, ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ನಾಶ ಮಾಡಿದೆ. ಭಾರತದ ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಬಟಿಂಡಾ, ಚಂಡೀಗಢ, ಪಠಾಣ್‌ಕೋಟ್‌ಗಳ ಮೇಲೆ ದಾಳಿ ಮಾಡಲು ಪಾಕಿಸ್ತಾನದಿಂದ ವಿಫಲ ಪ್ರಯತ್ನಗಳು ನಡೆದಿವೆ. ಇದಲ್ಲದೆ, ಶ್ರೀನಗರ, ಅವಂತಿಪೋರಾ, ಆದಂಪುರ, ಫಲೋಡಿ, ಭುಜ್‌ಗಳಲ್ಲಿಯೂ ದಾಳಿಯ ಪ್ರಯತ್ನಗಳು ನಡೆದವು ಆದರೆ ಭಾರತ ಪಾಕಿಸ್ತಾನದ ಎಲ್ಲಾ ಕ್ಷಿಪಣಿಗಳನ್ನು ಗಾಳಿಯಲ್ಲೇ ಹೊಡೆದುರುಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



