ಕದನ ವಿರಾಮ ಘೋಷಣೆ ಬೆನ್ನಲ್ಲೇ ವಾಯು ಪ್ರದೇಶ ಸಂಚಾರಕ್ಕೆ ಮುಕ್ತ ಎಂದ ಪಾಕಿಸ್ತಾನ!
ದೇಶದ ಎಲ್ಲಾ ವಿಮಾನ ನಿಲ್ದಾಣಗಳು ಸಾಮಾನ್ಯ ವಿಮಾನ ಕಾರ್ಯಾಚರಣೆಗಳಿಗೆ ಲಭ್ಯವಿದೆ. ಪ್ರಯಾಣಿಕರು ತಮ್ಮ ವಿಮಾನಗಳ ಇತ್ತೀಚಿನ ವೇಳಾಪಟ್ಟಿಗಾಗಿ ಸಂಬಂಧಿತ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಲು ಕೋರಲಾಗಿದೆ ಎಂದು PAA ಹೇಳಿದೆ.

ಇಸ್ಲಾಮಾಬಾದ್: ಭಾರತದೊಂದಿಗೆ ಕದನ ವಿರಾಮ ಘೋಷಣೆಯೊಂದಿಗೆ 'ಬೀಸೋ ದೊಣ್ಣೆಯಿಂದ ಪಾರಾದ ಪಾಕಿಸ್ತಾನ, ತನ್ನ ವಾಯುಪ್ರದೇಶವನ್ನು ಎಲ್ಲಾ ರೀತಿಯ ವಾಯು ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಶನಿವಾರ ಪ್ರಕಟಿಸಿದೆ.
ಭಾರತದೊಂದಿಗೆ ಉದ್ವಿಗ್ನತೆ ಕೊನೆಗೊಂಡಂತೆ ದೇಶ ಸಹಜ ಸ್ಥಿತಿಗೆ ಮರಳುತ್ತಿದೆ. ಹೀಗಾಗಿ ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರ (PAA) ಈ ಘೋಷಣೆ ಮಾಡಿದೆ.
ದೇಶದ ಎಲ್ಲಾ ವಿಮಾನ ನಿಲ್ದಾಣಗಳು ಸಾಮಾನ್ಯ ವಿಮಾನ ಕಾರ್ಯಾಚರಣೆಗಳಿಗೆ ಲಭ್ಯವಿದೆ. ಪ್ರಯಾಣಿಕರು ತಮ್ಮ ವಿಮಾನಗಳ ಇತ್ತೀಚಿನ ವೇಳಾಪಟ್ಟಿಗಾಗಿ ಸಂಬಂಧಿತ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಲು ಕೋರಲಾಗಿದೆ ಎಂದು PAA ಹೇಳಿದೆ.
ಎಲ್ಲಾ ರೀತಿಯ ವಿಮಾನಗಳಿಗೆ ಪಾಕಿಸ್ತಾನದ ವಾಯುಪ್ರದೇಶವನ್ನು ಸಂಪೂರ್ಣವಾಗಿ ಪುನ: ಸ್ಥಾಪಿಸಲಾಗಿದೆ ಮತ್ತು ದೇಶದ ಎಲ್ಲಾ ವಿಮಾನ ನಿಲ್ದಾಣಗಳು ಸಾಮಾನ್ಯ ವಿಮಾನ ಕಾರ್ಯಾಚರಣೆಗೆ ಲಭ್ಯವಿದೆ ಎಂದು ಹೇಳಿದೆ.
ಭಾರತದೊಂದಿಗಿನ ಉದ್ವಿಗ್ನತೆಯೊಂದಿಗೆ ಪಾಕಿಸ್ತಾನದ ವಾಯುಪ್ರದೇಶ ಮತ್ತು ಮಾರ್ಗಗಳನ್ನು ನಿರ್ದಿಷ್ಟ ಅವಧಿಗೆ ಮುಚ್ಚಲಾಗಿತ್ತು. ಇದು ನಿಯಮಿತ ವಾಯು ಸಂಚಾರಕ್ಕೆ ಅಡ್ಡಿಯಾಗಿ, ಪ್ರಯಾಣಿಕರಿಗೆ ತೀವ್ರ ಸಮಸ್ಯೆಯಾಗಿತ್ತು.
ವಾಯುಪ್ರದೇಶವನ್ನು ತೆರೆಯುವ ನಿರ್ಧಾರದಿಂದ ಪಾಕಿಸ್ತಾನ ಮತ್ತು ಭಾರತದ ವಿಮಾನಗಳ ಹಾರಾಟ ಸೇವೆ ಪುನರ್ ಆರಂಭವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



