ಭಾರತ-ಪಾಕ್ ಸಮಸ್ಯೆಗಳನ್ನು ಬಗೆಹರಿಸಲು 'ಶಾಂತಿಯುತ ಮಾತುಕತೆ' ಸೂಕ್ತ: ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಶನಿವಾರ ಭಾರತ ಮತ್ತು ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಂದ ಮಾಡಿಕೊಂಡಿವೆ.

ಇಸ್ಲಾಮಾಬಾದ್: ಪಾಕಿಸ್ತಾನ ಮತ್ತು ಭಾರತೀಯ ಸೇನೆಗಳ ನಡುವಿನ ನಾಲ್ಕು ದಿನಗಳ ಮುಖಾಮುಖಿಯ ಸಂದರ್ಭದಲ್ಲಿ 'ಅನುಕರಣೀಯ' ಏಕತೆ ಮತ್ತು ಸಮಗ್ರತೆಯನ್ನು ಪ್ರದರ್ಶಿಸಿದ್ದಕ್ಕಾಗಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ತಮ್ಮ ಸಮ್ಮಿಶ್ರ ಪಾಲುದಾರರು ಮತ್ತು ಪ್ರತಿಪಕ್ಷಗಳು ಸೇರಿದಂತೆ ದೇಶದ ರಾಜಕೀಯ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ.
ಶನಿವಾರ ತಡರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಷರೀಫ್, ಜಲ ಸಂಪನ್ಮೂಲಗಳ ಹಂಚಿಕೆ ಮತ್ತು ಕಾಶ್ಮೀರ ಸಮಸ್ಯೆ ಸೇರಿದಂತೆ ಭಾರತ ಮತ್ತು ಪಾಕಿಸ್ತಾನದ ನಡುವಿನ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು 'ಶಾಂತಿಯುತ ಮಾತುಕತೆಯ ಮಾರ್ಗ'ವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಶನಿವಾರ ಭಾರತ ಮತ್ತು ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಂದ ಮಾಡಿಕೊಂಡಿವೆ.
ಪ್ರಾದೇಶಿಕ ಶಾಂತಿಯ ಹಿತದೃಷ್ಟಿಯಿಂದ ಭಾರತದೊಂದಿಗೆ ಮಾಡಿಕೊಂಡ ಒಪ್ಪಂದಕ್ಕೆ ಪಾಕಿಸ್ತಾನ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದೆ. ಅಂತರರಾಷ್ಟ್ರೀಯ ರಾಜತಾಂತ್ರಿಕ ಪ್ರಯತ್ನಗಳಿಗೆ ಪಾಕಿಸ್ತಾನ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದೆ ಎಂದು ಷರೀಫ್ ಹೇಳಿದರು.
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವಲ್ಲಿ ಅಮೆರಿಕ, ಯುಕೆ, ಟರ್ಕಿ, ಸೌದಿ ಅರೇಬಿಯಾ, ಕತಾರ್, ಯುಎಇ ಮತ್ತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ನಾಯಕತ್ವ ಸೇರಿದಂತೆ ಎಲ್ಲಾ ಸ್ನೇಹಪರ ರಾಷ್ಟ್ರಗಳಿಗೆ ಕೃತಜ್ಞತೆ ಸಲ್ಲಿಸಿದರು.
ಪಾಕಿಸ್ತಾನದ ವಿಶ್ವಾಸಾರ್ಹ ಸ್ನೇಹಿತ ಚೀನಾ ಈ ಪ್ರಕ್ಷುಬ್ಧ ಸಮಯದಲ್ಲಿ ಪಾಕಿಸ್ತಾನದೊಂದಿಗೆ ನಿಂತಿದೆ. ಭಾರತದೊಂದಿಗಿನ ಕದನ ವಿರಾಮ ಒಪ್ಪಂದವು ಇಡೀ ರಾಷ್ಟ್ರ ಮತ್ತು ಪಾಕಿಸ್ತಾನದ ಸಶಸ್ತ್ರ ಪಡೆಗಳ ಯಶಸ್ಸು ಎಂದು ಬಣ್ಣಿಸಿದರು.
ರೇಡಿಯೋ ಪಾಕಿಸ್ತಾನದ ಪ್ರಕಾರ, ಪಾಕಿಸ್ತಾನ ಸೇನೆಯ 'ಆಪರೇಷನ್ ಬನ್ಯನ್-ಅನ್-ಮರ್ಸೂಸ್' ಯಶಸ್ವಿಯಾಗಿದೆ ಮತ್ತು ಭಾರತದ ಕ್ರಮಗಳಿಗೆ ವೃತ್ತಿಪರ ರೀತಿಯಲ್ಲಿ ಪ್ರತಿಕ್ರಿಯಿಸಲಾಗಿದೆ. ದೇಶ ಮತ್ತು ನಮ್ಮ ಸಶಸ್ತ್ರ ಪಡೆಗಳು ಪಾಕಿಸ್ತಾನಿಗಳು ಧೈರ್ಯಶಾಲಿ, ಸ್ವಾವಲಂಬಿ ಮತ್ತು ವಿವೇಕಯುತ ರಾಷ್ಟ್ರ ಎಂದು ಸಾಬೀತುಪಡಿಸಿವೆ ಎಂದು ಅವರು ಹೇಳಿದರು.
ಪಹಲ್ಗಾಮ್ ದಾಳಿಯ ವಿಶ್ವಾಸಾರ್ಹ ಮತ್ತು ಪಾರದರ್ಶಕ ತನಿಖೆಗೆ ಪಾಕಿಸ್ತಾನ ಬೆಂಬಲ ಸೂಚಿಸಿತು. ಆದರೆ, ಭಾರತವು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಲಿಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



