ವಿದೇಶ

ಆಸ್ಟ್ರೇಲಿಯಾದಲ್ಲಿ ಭೀಕರ ರಸ್ತೆ ಅಪಘಾತ: ಭಾರತೀಯ ಮೂಲದ 8 ತಿಂಗಳ ಗರ್ಭಿಣಿ, ಹೊಟ್ಟೆಯಲ್ಲಿದ್ದ ಮಗು ಸಾವು

ಸಮನ್ವಿತಾ ಮತ್ತು ಅವರ ಕುಟುಂಬ ಫುಟ್‌ಪಾತ್‌ನಲ್ಲಿ ರಸ್ತೆ ದಾಟಲು ನಿಂತಿದ್ದಾಗ, ಹಿಂದಿನಿಂದ ಬಂದ BMW ಕಾರು , ಮುಂದೆ ನಿಧಾನವಾಗಿ ಹೋಗುತ್ತಿದ್ದ ಕಿಯಾ ಕಾರ್ನಿವಲ್ ಕಾರಿಗೆ ಡಿಕ್ಕಿ ಹೊಡೆದಿದೆ.

ಆಸ್ಟ್ರೇಲಿಯಾದಲ್ಲಿ ಭೀಕರ ರಸ್ತೆ ಅಪಘಾತ: ಭಾರತೀಯ ಮೂಲದ 8 ತಿಂಗಳ ಗರ್ಭಿಣಿ, ಹೊಟ್ಟೆಯಲ್ಲಿದ್ದ ಮಗು ಸಾವು
ಮೃತ ಮಹಿಳೆ ಸಮನ್ವಿತಾ
Published On :

ಮೆಲ್ಬರ್ನ್‌: ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಎಂಟು ತಿಂಗಳ ಗರ್ಭಿಣಿ ಹಾಗೂ ಹೊಟ್ಟೆಯೊಳಗಿದ್ದ ಮಗು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಸಮನ್ವಿತಾ ಧಾರೇಶ್ವರ್‌ (33) ಮೃತ ಮಹಿಳೆ. ಕಳೆದ ಶುಕ್ರವಾರ ರಾತ್ರಿ 8ರ ಸುಮಾರಿಗೆ ಸಮನ್ವಿತಾ ಅವರು ತಮ್ಮ ಪತಿ ಹಾಗು 3 ವರ್ಷದ ಮಗನೊಂದಿಗೆ ಜರ್ಜ್ ಸೇಂಟ್‌ ಇನ ಹಾರ್ನ್‌ಸ್ಬಿ ಬಳಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಹೆರಿಗೆಗೆ ಇನ್ನು ಕೆಲವೇ ವಾರಗಳು ಬಾಕಿ ಇರುವಾಗಲೇ ಈ ದುರ್ಘಟನೆ ಸಂಭವಿಸಿದೆ.

ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಹಾರ್ನ್ಸ್‌ಬೈನಲ್ಲಿರುವ ಜಾರ್ಜ್ ಸ್ಟ್ರೀಟ್‌ನಲ್ಲಿ ಈ ದುರ್ಘಟನೆ ನಡೆದಿದೆ. ಸಮನ್ವಿತಾ ಮತ್ತು ಅವರ ಕುಟುಂಬ ಫುಟ್‌ಪಾತ್‌ನಲ್ಲಿ ರಸ್ತೆ ದಾಟಲು ನಿಂತಿದ್ದಾಗ, ಹಿಂದಿನಿಂದ ಬಂದ BMW ಕಾರು , ಮುಂದೆ ನಿಧಾನವಾಗಿ ಹೋಗುತ್ತಿದ್ದ ಕಿಯಾ ಕಾರ್ನಿವಲ್ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಕಿಯಾ ಕಾರ್ ಮುಂದೆ ನುಗ್ಗಿ, ರಸ್ತೆ ದಾಟುತ್ತಿದ್ದ ಸಮನ್ವಿತಾಗೆ ಅಪ್ಪಳಿಸಿದೆ.

ಈ ಭೀಕರ ಅಪಘಾತದಲ್ಲಿ ಸಮನ್ವಿತಾಗೆ ಗಂಭೀರ ಗಾಯಗಳಾಗಿದ್ದವು. ಅವರನ್ನು ತಕ್ಷಣವೇ ವೆಸ್ಟ್‌ಮೀಡ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ದುರದೃಷ್ಟವಶಾತ್, ಸಮನ್ವಿತಾ ಮತ್ತು ಅವರ ಗರ್ಭದಲ್ಲಿದ್ದ ಮಗುವನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ BMW ಕಾರನ್ನು 19 ವರ್ಷದ ಆರೋನ್ ಪಪಜೋಗ್ಲು ಎಂಬಾತ ಚಲಾಯಿಸುತ್ತಿದ್ದ ಎನ್ನಲಾಗಿದೆ. ಇವನು 'P-plater' ಆಗಿದ್ದನು, ಅಂದರೆ ತಾತ್ಕಾಲಿಕ ಅಥವಾ ಪ್ರೊಬೇಷನರಿ ಲೈಸೆನ್ಸ್ ಹೊಂದಿದ್ದನು. ಬಿಎಂಡಬ್ಲ್ಯೂ ಓಡಿಸುತ್ತಿದ್ದ 19 ವರ್ಷದ ಯುವಕ ಮತ್ತು ಕಿಯಾ ಚಾಲನೆ ಮಾಡುತ್ತಿದ್ದ 48 ವರ್ಷದ ವ್ಯಕ್ತಿಗೆ ಯಾವುದೇ ಗಾಯಗಳಾಗಿಲ್ಲ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.