ವಿದೇಶ

G20 Summit: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಜೊತೆಗೆ ಪ್ರಧಾನಿ ಮೋದಿ ಆತ್ಮೀಯತೆ! Video ವೈರಲ್

ಉಭಯ ನಾಯಕರು ನಗುತ್ತಾ, ಶೇಕ್ ಹ್ಯಾಂಡ್ ಮಾಡಿದ್ದು, ಪರಸ್ಪರ ಉಭಯ ಕುಶಲೋಪರಿ ವಿಚಾರಿಸುತ್ತಿರುವುದು ವಿಡಿಯೋದಲ್ಲಿದೆ.

G20 Summit: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಜೊತೆಗೆ ಪ್ರಧಾನಿ ಮೋದಿ ಆತ್ಮೀಯತೆ! Video ವೈರಲ್
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಜೊತೆಗೆ ಪ್ರಧಾನಿ ಮೋದಿ ನಗುತ್ತಿರುವ ದೃಶ್ಯ
Published On :

ಜೋಹಾನ್ಸ್ ಬರ್ಗ್: ಜಿ-20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಜೊತೆಗಿನ ಆತ್ಮೀಯತೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಉಭಯ ನಾಯಕರು ನಗುತ್ತಾ, ಶೇಕ್ ಹ್ಯಾಂಡ್ ಮಾಡಿದ್ದು, ಪರಸ್ಪರ ಉಭಯ ಕುಶಲೋಪರಿ ವಿಚಾರಿಸುತ್ತಿರುವುದು ವಿಡಿಯೋದಲ್ಲಿದೆ.

ಇತ್ತೀಚಿಗೆ ಕೆನಡಾದಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಭೇಟಿಯಾಗಿದ್ದರು. ಮೆಲೋನಿಯವರು ಮೋದಿಯವರನ್ನು ನೀವು ಅತ್ಯುತ್ತಮರು ಎಂದು ಹೊಗಳಿದ್ದು, ಅದಕ್ಕೆ ಮೋದಿ ನಗುತ್ತಾ ಪ್ರತಿಕ್ರಿಯಿಸಿರುವ ವಿಡಿಯೋ ಮೆಲೋಡಿ ಮೂಮೆಂಟ್ಸ್‌ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಇದಕ್ಕೂ ಮುನ್ನ ನಡೆದ ಇಬ್ಬರು ಪ್ರಧಾನಿಗಳ ಭೇಟಿಯೂ ಎಲ್ಲರ ಗಮನ ಸೆಳೆದಿತ್ತು.

ಮೆಲೋನಿ ಭೇಟಿಯಾದ ನಂತರ ಪ್ರಧಾನಿ ನರೇಂದ್ರ ಮೋದಿ ಭ್ರಜಿಲ್ ಅಧ್ಯಕ್ಷ ಸಿಲ್ವಾ ಸೇರಿದಂತೆ ವಿಶ್ವದ ಅನೇಕ ನಾಯಕರನ್ನು ತಬ್ಬಿಕೊಳ್ಳುವುದರೊಂದಿಗೆ ಪರಸ್ಪರ ಶುಭ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.