62ನೇ ವಯಸ್ಸಿನಲ್ಲಿ 46 ವರ್ಷದ ಗೆಳತಿಯನ್ನು ಮದುವೆಯಾದ ಆಸ್ಟ್ರೇಲಿಯಾ ಪ್ರಧಾನಿ!
ಆಲ್ಬನೀಸ್ ಅವರು ಅಧಿಕಾರದಲ್ಲಿದ್ದಾಗ ವಿವಾಹವಾದ ಆಸ್ಟ್ರೇಲಿಯಾದ ಮೊದಲ ಪ್ರಧಾನಿಯಾಗಿದ್ದಾರೆ.

ಕ್ಯಾನ್‌ಬೆರಾ: ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಶನಿವಾರ ತಮ್ಮ ದೀರ್ಘಕಾಲದ ಗೆಳತಿ ಜೋಡಿ ಹೇಡನ್ ಅವರನ್ನು ವಿವಾಹವಾದರು. ಈ ಮೂಲಕ
ಆಲ್ಬನೀಸ್ ಅವರು ಅಧಿಕಾರದಲ್ಲಿದ್ದಾಗ ವಿವಾಹವಾದ ಆಸ್ಟ್ರೇಲಿಯಾದ ಮೊದಲ ಪ್ರಧಾನಿಯಾಗಿದ್ದಾರೆ.
62 ವರ್ಷದ ನಾಯಕ ಆಲ್ಬನೀಸ್ ಅವರು ಇಂದು ಕ್ಯಾನ್‌ಬೆರಾದ ತಮ್ಮ ಅಧಿಕೃತ ನಿವಾಸವಾದ ದಿ ಲಾಡ್ಜ್‌ನ ಉದ್ಯಾನದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ 46 ವರ್ಷದ ಹಣಕಾಸು ಸೇವಾ ಉದ್ಯೋಗಿ ಹೇಡನ್ ಅವರೊಂದಿಗೆ ವಿವಾಹವಾದರು. ಇದು ಆಂಥೋನಿ ಅಲ್ಬನೀಸ್ ಅವರಿಗೆ ಎರಡನೇ ಮದುವೆ.
"ನಮ್ಮ ಕುಟುಂಬ ಮತ್ತು ಹತ್ತಿರದ ಸ್ನೇಹಿತರ ಮುಂದೆ ನಮ್ಮ ಭವಿಷ್ಯದ ಜೀವನವನ್ನು ಒಟ್ಟಿಗೆ ಕಳೆಯುವ ನಮ್ಮ ಪ್ರೀತಿ ಮತ್ತು ಬದ್ಧತೆಯನ್ನು ಹಂಚಿಕೊಳ್ಳಲು ಸಂತೋಷವಾಗುತ್ತಿದೆ" ಎಂದು ಆಲ್ಬನೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"ವಿವಾಹಿತರು" ಎಂದು ಪ್ರಧಾನಿ ಸಾಮಾಜಿಕ ಮಾಧ್ಯಮದಲ್ಲಿ ಒಂದು ಪದದ ಪೋಸ್ಟ್ ಹಂಚಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



