ವಿದೇಶ

ಏಳು ಒತ್ತೆಯಾಳುಗಳನ್ನು ಹಸ್ತಾಂತರಿಸಿದ ಹಮಾಸ್: ನೆತನ್ಯಾಹು ದಂಪತಿಯ 'ವೆಲ್ ಕಮ್ ನೋಟ್' ವೈರಲ್!

ಇಸ್ರೇಲಿ ಪ್ರಧಾನ ಮಂತ್ರಿ ಕಚೇರಿ ಸೋಮವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪಿಎಂ ಬೆಂಜಮಿನ್ ನೆತನ್ಯಾಹು ಮತ್ತು ಅವರ ಪತ್ನಿ ಸಾರಾ ಅವರು ಒತ್ತೆಯಾಳುಗಳಿಗಾಗಿ ಬರೆದ ವೈಯಕ್ತಿಕ ಸಂದೇಶವನ್ನು ಹಂಚಿಕೊಂಡಿದೆ.

ಏಳು ಒತ್ತೆಯಾಳುಗಳನ್ನು ಹಸ್ತಾಂತರಿಸಿದ ಹಮಾಸ್:  ನೆತನ್ಯಾಹು ದಂಪತಿಯ 'ವೆಲ್ ಕಮ್ ನೋಟ್' ವೈರಲ್!
'ವೆಲ್ ಕಮ್ ನೋಟ್'
Published On :

ಜೆರುಸಲೆಂ: ಹಮಾಸ್ ಏಳು ಒತ್ತೆಯಾಳುಗಳನ್ನು ಇಸ್ರೇಲ್ ಗೆ ಹಸ್ತಾಂತರಿಸಿದ್ದು, ಉಭಯ ರಾಷ್ಟ್ರಗಳು ಕದನ ವಿರಾಮ ಒಪ್ಪಂದಕ್ಕೆ ಬದ್ಧವಾಗಿರುವುದಾಗಿ ಹೇಳಿಕೆ ನೀಡಿವೆ.

20 ಮಂದಿಯಲ್ಲಿ ಏಳು ಮಂದಿ ಒತ್ತೆಯಾಳುಗಳನ್ನು ರೆಡ್ ಕ್ರಾಸ್‌ಗೆ ಹಸ್ತಾಂತರಿಸಲಾಗಿದೆ ಎಂದು ಹಮಾಸ್‌ನ ಮಿಲಿಟರಿ ವಿಭಾಗ ಅಲ್-ಕಸ್ಸಾಮ್ ಬ್ರಿಗೇಡ್ಸ್ ಹೇಳಿಕೆಯಲ್ಲಿ ತಿಳಿಸಿದೆ.

ಇದಕ್ಕೂ ಮುನ್ನ ಇಸ್ರೇಲಿ ಪ್ರಧಾನ ಮಂತ್ರಿ ಕಚೇರಿ ಸೋಮವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪಿಎಂ ಬೆಂಜಮಿನ್ ನೆತನ್ಯಾಹು ಮತ್ತು ಅವರ ಪತ್ನಿ ಸಾರಾ ಅವರು ಬಿಡುಗಡೆಯಾದ ಒತ್ತೆಯಾಳುಗಳಿಗಾಗಿ ಬರೆದ ವೈಯಕ್ತಿಕ ಸಂದೇಶವನ್ನು ಹಂಚಿಕೊಂಡಿದೆ.

ಒತ್ತೆಯಾಳುಗಳ ವೆಲ್ ಕಮ್ ಕಿಟ್‌ನಲ್ಲಿ ಬಟ್ಟೆ, ವೈಯಕ್ತಿಕ ಉಪಕರಣಗಳು, ಲ್ಯಾಪ್‌ಟಾಪ್, ಸೆಲ್‌ಫೋನ್ ಮತ್ತು ಟ್ಯಾಬ್ಲೆಟ್ ಸೇರಿವೆ. ಇಸ್ರೇಲ್ ಜನರ ಪರವಾಗಿ, ಮರಳಿ ಸ್ವಾಗತ! ನಾವು ನಿಮಗಾಗಿ ಕಾಯುತ್ತಿದ್ದೇವೆ. ನಾವು ನಿಮ್ಮನ್ನು ಅಪ್ಪಿಕೊಳ್ಳುತ್ತೇವೆ ಎಂದು ಸಾರಾ ಮತ್ತು ಬೆಂಜಮಿನ್ ನೆತನ್ಯಾಹು ಅವರ ಕೈಯಲ್ಲಿ ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.