ವಿದೇಶ

Pakistan Airstrikes Afghanistan: 10 ಮಂದಿ ಅಫ್ಘಾನ್ ನಾಗರಿಕರು ಸಾವು; ಪ್ರತೀಕಾರದ ಪ್ರತಿಜ್ಞೆ ಮಾಡಿದ ಕಾಬುಲ್

ಅಫ್ಘಾನಿಸ್ತಾನದಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ತನ್ನ ಕ್ರೌರ್ಯವನ್ನು ಪ್ರದರ್ಶಿಸಿದ್ದು, ಪಾಕಿಸ್ತಾನ ನಡೆಸಿದ ವಾಯುದಾಳಿಗೆ ಅಫ್ಘಾನಿಸ್ತಾನದ 10 ಮಂದಿ ನಾಗರೀಕರು ಸಾವನ್ನಪ್ಪಿದ್ದಾರೆ.

Pakistan Airstrikes Afghanistan: 10 ಮಂದಿ ಅಫ್ಘಾನ್ ನಾಗರಿಕರು ಸಾವು; ಪ್ರತೀಕಾರದ ಪ್ರತಿಜ್ಞೆ ಮಾಡಿದ ಕಾಬುಲ್
ತಾಲಿಬಾನ್ ಭದ್ರತಾ ಸಿಬ್ಬಂದಿ
Published On :

ಕಾಬುಲ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ಯುದ್ಧದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಫ್ಘಾನಿಸ್ತಾನದ ನೆಲದಲ್ಲಿ ಪಾಕಿಸ್ತಾನ ಮತ್ತೊಮ್ಮೆ ವೈಮಾನಿಕ ದಾಳಿ ನಡೆಸಿದೆ.

ಅಫ್ಘಾನಿಸ್ತಾನದಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ತನ್ನ ಕ್ರೌರ್ಯವನ್ನು ಪ್ರದರ್ಶಿಸಿದ್ದು, ಪಾಕಿಸ್ತಾನ ನಡೆಸಿದ ವಾಯುದಾಳಿಗೆ ಅಫ್ಘಾನಿಸ್ತಾನದ 10 ಮಂದಿ ನಾಗರೀಕರು ಸಾವನ್ನಪ್ಪಿದ್ದಾರೆ. ಅಲ್ಲದೆ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಈ ದಾಳಿಯೊಂದಿಗೆ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಕದನ ವಿರಾಮ ಅಂತ್ಯಗೊಂಡಿದ್ದು, ಕಾಬುಲ್ ಕೂಡ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಪಾಕಿಸ್ತಾನ ಕದನ ವಿರಾಮವನ್ನು ಮುರಿದಿದೆ ಮತ್ತು ಪಕ್ಟಿಕಾ ಪ್ರಾಂತ್ಯದ ಮೂರು ಸ್ಥಳಗಳ ಮೇಲೆ ಬಾಂಬ್ ದಾಳಿ ಮಾಡಿದೆ. ಅಫ್ಘಾನಿಸ್ತಾನ ಪ್ರತೀಕಾರ ತೀರಿಸಿಕೊಳ್ಳುತ್ತದೆ ಎಂದು ಹಿರಿಯ ತಾಲಿಬಾನ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪಾಕಿಸ್ತಾನ ನಡೆಸಿದ ಈ ದಾಳಿಯಲ್ಲಿ ಹತ್ತು ನಾಗರಿಕರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.