ವಿದೇಶ

ಹಾಂಕಾಂಗ್: ರನ್​ವೇಯಿಂದ ಜಾರಿ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ, ಇಬ್ಬರು ಸಾವು

ಸೋಮವಾರ ಮುಂಜಾನೆ 3.50ರ ವೇಳೆಗೆ ಈ ಘಟನೆ ಸಂಭವಿಸಿದ್ದು, ಮೃತಪಟ್ಟ ಇಬ್ಬರು ಈ ದುರಂತದ ಸಮಯದಲ್ಲಿ ವಿಮಾನ ನಿಲ್ದಾಣದ ವಾಹನದಲ್ಲಿದ್ದರು ಎಂದು ಹೇಳಲಾಗಿದೆ

ಹಾಂಕಾಂಗ್: ರನ್​ವೇಯಿಂದ ಜಾರಿ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ, ಇಬ್ಬರು ಸಾವು
ಸಮುದ್ರಕ್ಕೆ ಜಾರಿ ಬಿದ್ದ ವಿಮಾನ
Published On :

ಹಾಂಕಾಂಗ್: ದುಬೈನಿಂದ ಹಾಂಕಾಂಗ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸರಕು ಸಾಗಾಣಿಕೆ ವಿಮಾನವೊಂದು ಸೋಮವಾರ ಮುಂಜಾನೆ ಲ್ಯಾಂಡಿಂಗ್ ವೇಳೆ ರನ್‌ವೇಯಿಂದ ಸಮುದ್ರಕ್ಕೆ ಜಾರಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ.

ಸೋಮವಾರ ಮುಂಜಾನೆ 3.50ರ ವೇಳೆಗೆ ಈ ಘಟನೆ ಸಂಭವಿಸಿದ್ದು, ಮೃತಪಟ್ಟ ಇಬ್ಬರು ಈ ದುರಂತದ ಸಮಯದಲ್ಲಿ ವಿಮಾನ ನಿಲ್ದಾಣದ ವಾಹನದಲ್ಲಿದ್ದರು ಎಂದು ಹೇಳಲಾಗಿದೆ. ಎಮಿರೇಟ್ ವಿಮಾನ ಸಂಖ್ಯೆಯಡಿ ಈ ಕಾರ್ಗೊ ವಿಮಾನ ಕಾರ್ಯಾಚರಣೆ ನಡೆಸುತ್ತಿತ್ತು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ವಿಮಾನಯಾನ ಸಂಸ್ಥೆ ತಕ್ಷಣಕ್ಕೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ರಾಯ್ಟರ್ಸ್ ವರದಿ ಮಾಡಿದೆ.

ವಿಮಾನದಲ್ಲಿದ್ದ ಎಲ್ಲ ನಾಲ್ಕು ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ವಿಮಾನ ನಿಲ್ದಾಣ ಸಿಬ್ಬಂದಿಯ ಪೈಕಿ ಒಬ್ಬರನ್ನೂ ರಕ್ಷಿಸಲಾಗಿದೆ. ಮತ್ತೊಬ್ಬರು ನಾಪತ್ತೆಯಾಗಿದ್ದಾರೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ಹೇಳಿದ್ದಾರೆ.

ವಿಮಾನ ಪತ್ತೆ ಸೇವೆಗಳ ಸಂಸ್ಥೆ ಫ್ಲೈಟ್ ರಾಡರ್ 24 ಪ್ರಕಾರ, ರನ್‌ವೇಯಿಂದ ಹೊರಹೋಗಿ ಅಪಘಾತಕ್ಕೀಡಾದ ವಿಮಾನ ಬೋಯಿಂಗ್ 747 ಸರಕು ಸಾಗಾಣಿಕೆ ವಿಮಾನವಾಗಿದೆ. ಅಪಘಾತದ ನಂತರ, ಸರಕು ವಿಮಾನವು ಜಾರಿದ ರನ್‌ವೇಯನ್ನು ವಿಮಾನ ನಿಲ್ದಾಣ ಮುಚ್ಚಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.