ವಿದೇಶ

ನೇಪಾಳದಲ್ಲಿ ಕಂದಕಕ್ಕೆ ಉರುಳಿದ ಜೀಪ್: ಎಂಟು ಮಂದಿ ಸಾವು, 10 ಜನರಿಗೆ ಗಾಯ!

ಕಠ್ಮಂಡುವಿನ ಪಶ್ಚಿಮಕ್ಕೆ ಸುಮಾರು 500 ಕಿಮೀ ದೂರದಲ್ಲಿರುವ ರುಕುಮ್ ಪಶ್ಚಿಮ ಜಿಲ್ಲೆಯ ಬಾಫಿಕೋಟ್‌ನ ಝರ್ಮಾರೆ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ.

ನೇಪಾಳದಲ್ಲಿ ಕಂದಕಕ್ಕೆ ಉರುಳಿದ ಜೀಪ್: ಎಂಟು ಮಂದಿ ಸಾವು, 10 ಜನರಿಗೆ ಗಾಯ!
ಕಂದಕಕ್ಕೆ ಉರುಳಿದ ಜೀಪ್
Published On :

ಕಠ್ಮಂಡು: ನೇಪಾಳದ ಕರ್ನಾಲಿ ಪ್ರಾಂತ್ಯದಲ್ಲಿ 18 ಪ್ರಯಾಣಿಕರಿದ್ದ ಜೀಪ್ 700 ಅಡಿಗಳಷ್ಟು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕಠ್ಮಂಡುವಿನ ಪಶ್ಚಿಮಕ್ಕೆ ಸುಮಾರು 500 ಕಿಮೀ ದೂರದಲ್ಲಿರುವ ರುಕುಮ್ ಪಶ್ಚಿಮ ಜಿಲ್ಲೆಯ ಬಾಫಿಕೋಟ್‌ನ ಝರ್ಮಾರೆ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ.

ಜೀಪ್ ಮುಸಿಕೋಟ್‌ನ ಖಲಂಗಾದಿಂದ ಅಥ್ಬಿಸ್ಕಟ್ ಪುರಸಭೆಯ ಸೈಲಿಖಾಡಿ ಪ್ರದೇಶದ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅತಿವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತರೆಲ್ಲರೂ 15 ರಿಂದ 30 ವರ್ಷದ ಯುವಕರಾಗಿದ್ದಾರೆ. ಗಾಯಗೊಂಡಿರುವ ಇತರ ಹತ್ತು ಮಂದಿ ಸಾಲೆಯ ರುಕುಮ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.