ವಿದೇಶ

ನೇಪಾಳದಲ್ಲಿ Facebook, Twitter, YouTube ಸೇರಿ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ: ಕಾರಣ...?

ನೇಪಾಳ ಸರ್ಕಾರ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಲ್ಲಿ ನೋಂದಾಯಿಸಲು ವಿಫಲವಾದ ಹಿನ್ನೆಲೆ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್, ಯೂಟ್ಯೂಬ್ ಸೇರಿದಂತೆ 26 ಸಾಮಾಜಿಕ ಜಾಲತಾಣಗಳನ್ನು ನಿರ್ಬಂಧಿಸಲಾಗಿದೆ.

ನೇಪಾಳದಲ್ಲಿ Facebook, Twitter, YouTube ಸೇರಿ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ: ಕಾರಣ...?
ಸಂಗ್ರಹ ಚಿತ್ರ
Published On :

ಕಠ್ಮಂಡು: ನೇಪಾಳ ರಾಷ್ಟ್ರದಲ್ಲಿ ಫೇಸ್ಬುಕ್‌, ಟ್ವಿಟರ್, ಯೂಟ್ಯೂಬ್‌ ಸೇರಿದಂತೆ 26 ಸಾಮಾಜಿಕ ಜಾಲತಾಮಗಳ ಮೇಲೆ ನಿಷೇಧ ಹೇರಲಾಗಿದೆ.

ನೇಪಾಳ ಸರ್ಕಾರ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಲ್ಲಿ ನೋಂದಾಯಿಸಲು ವಿಫಲವಾದ ಹಿನ್ನೆಲೆ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್, ಯೂಟ್ಯೂಬ್ ಸೇರಿದಂತೆ 26 ಸಾಮಾಜಿಕ ಜಾಲತಾಣಗಳನ್ನು ನಿರ್ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿ ನೋಂದಣಿಗೆ ನೇಪಾಳ ಸರ್ಕಾರ ಆ.28ರಂದು 7 ದಿನಗಳ ಗಡುವು ನೀಡಿತ್ತು. ಬುಧವಾರ ಸಮಯ ಅಂತ್ಯ ಹಿನ್ನೆಲೆಯಲ್ಲಿ ಮೆಟಾ ಒಡೆತನದ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್, ಯುಟ್ಯೂಬ್, ಎಕ್ಸ್, ರೆಡ್ಡಿಟ್, ಲಿಂಕ್ಸ್ ಇನ್, ಟಿಕ್‌ಟಾಕ್ ಸೇರಿದಂತೆ 26 ಸಾಮಾಜಿಕ ವೇದಿಕೆ ಗಳಿಗೆ ನಿರ್ಬಂಧ ವಿಧಿಸಿದೆ.

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸರ್ಕಾರ ನಿರ್ಧಾರ ಕೈಗೊಂಡಿದೆ. ಆದರೆ, ಈ ಬಗ್ಗೆ ಮೆಟಾ ಸೇರಿದಂತೆ ಯಾವ ಸಂಸ್ಥೆಗಳೂ ಪ್ರತಿಕ್ರಿಯೆ ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.