Telangana techie shot: ಅಮೆರಿಕದಲ್ಲಿ ರೂಮ್ ಮೇಟ್ ಜೊತೆಗೆ ಹೊಡೆದಾಟ; ಪೊಲೀಸರ ಗುಂಡೇಟಿಗೆ ತೆಲಂಗಾಣ ಟೆಕ್ಕಿ ಸಾವು!
ಏನಾಯಿತು ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಕ್ಷುಲಕ ವಿಚಾರಕ್ಕೆ ರೂಮ್‌ಮೇಟ್‌ನೊಂದಿಗೆ ಜಗಳ ನಡೆದಿದೆ. ಗುರುವಾರ ಬೆಳಗ್ಗೆ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ತಿಳಿಸಲಾಗಿದೆ ಎಂದು ಅವರು ಹೇಳಿದರು.

ಹೈದರಾಬಾದ್: ರೂಮ್ ಮೇಟ್ ಜೊತೆಗೆ ಹೊಡೆದಾಟದ ನಂತರ ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯ 29 ವರ್ಷದ ಟೆಕ್ಕಿಯನ್ನು ಅಮೆರಿಕದಲ್ಲಿ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿರುವುದಾಗಿ ಅವರು ಕುಟುಂಬ ಗುರುವಾರ ತಿಳಿಸಿದೆ.
ಕ್ಯಾಲಿಫೋರ್ನಿಯಾದಲ್ಲಿ ಸಾಫ್ಟ್‌ವೇರ್ ವೃತ್ತಿಪರರಾಗಿದ್ದ ಮೊಹಮ್ಮದ್ ನಿಜಾಮುದ್ದೀನ್ ಅವರನ್ನು ಸೆಪ್ಟೆಂಬರ್ 3 ರಂದು ಸಾಂಟಾ ಕ್ಲಾರಾ ಪೊಲೀಸರು ಕೊಂದಿದ್ದಾರೆ ಎಂದು ಹೇಳಲಾಗಿದೆ. ಈ ವಿಷಯವನ್ನು ತನ್ನ ಮಗನ ಸ್ನೇಹಿತನ ಮೂಲಕ ತಿಳಿದಿರುವುದಾಗಿ ಅವರ ತಂದೆ ಮೊಹಮ್ಮದ್ ಹಸ್ನುದ್ದೀನ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಏನಾಯಿತು ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಕ್ಷುಲಕ ವಿಚಾರಕ್ಕೆ ರೂಮ್‌ಮೇಟ್‌ನೊಂದಿಗೆ ಜಗಳ ನಡೆದಿದೆ. ಗುರುವಾರ ಬೆಳಗ್ಗೆ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ತಿಳಿಸಲಾಗಿದೆ ಎಂದು ಅವರು ಹೇಳಿದರು.
ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿರುವ ಹಸ್ನುದ್ದೀನ್ ತಮ್ಮ ಮಗನ ಮೃತದೇಹವನ್ನು ಮಹಬೂಬ್‌ನಗರಕ್ಕೆ ತರಲು ನೆರವು ನೀಡುವಂತೆ ಕೋರಿದ್ದಾರೆ. ವಾಷಿಂಗ್ಟನ್ ಮತ್ತು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಅಧಿಕಾರಿಗಳಿಂದ ತುರ್ತು ಸಹಾಯವನ್ನು ಕೋರಿದ್ದು, ಅಮೆರಿಕದ ಪೊಲೀಸರು ತನ್ನ ಮಗನನ್ನು ಯಾಕೆ ಗುಂಡಿಕ್ಕಿ ಕೊಂದಿದ್ದಾರೆ ಎಂಬುದಕ್ಕೆ ನಿಜವಾದ ಕಾರಣಗಳು ನನಗೆ ತಿಳಿದಿಲ್ಲ ಎಂದಿದ್ದಾರೆ.
ಮಜ್ಲಿಸ್ ಬಚಾವೋ ತಹ್ರೀಕ್ (ಎಂಬಿಟಿ) ವಕ್ತಾರ ಅಮ್ಜೆದ್ ಉಲ್ಲಾ ಖಾನ್ ಕುಟುಂಬದ ಮನವಿಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದು, ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದ್ದಾರೆ. ನಿಜಾಮುದ್ದೀನ್ ಅಮೇರಿಕಾದಲ್ಲಿ ಸಾಫ್ಟ್‌ವೇರ್ ವೃತ್ತಿಪರರಾಗಿ ಕೆಲಸ ಮಾಡುವ ಮೊದಲು ಎಂಎಸ್ ಮುಗಿಸಿದ್ದರು ಎಂದು ಅವರ ತಂದೆ ಹೇಳಿದರು.
ಪೊಲೀಸರ ಹೇಳಿಕೆ ಏನು?
ಐಸೆನ್‌ಹೋವರ್ ಡ್ರೈವ್‌ನಲ್ಲಿರುವ ಮನೆಯೊಳಗೆ ತನ್ನ ರೂಮ್‌ಮೇಟ್‌ಗೆ ಇರಿದ ಆರೋಪದ ನಂತರ ಒಬ್ಬ ವ್ಯಕ್ತಿಯನ್ನು ಅಧಿಕಾರಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸಾಂಟಾ ಕ್ಲಾರಾ ಪೋಲೀಸರು ತಿಳಿಸಿದ್ದಾರೆ. ಸೆಪ್ಟೆಂಬರ್ 3 ರಂದು ಬೆಳಿಗ್ಗೆ 6:18 ರ ಸುಮಾರಿಗೆ ಚಾಕು ಹೊಂದಿದ್ದ ಶಸ್ತ್ರಸಜ್ಜಿತ ಶಂಕಿತನ ಮೇಲೆ ಗುಂಡು ಹಾರಿಸಲಾಯಿತು. ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ತದನಂತರ ಆತ ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಸಂತ್ರಸ್ತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ನಮ್ಮ ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಹೆಚ್ಚಿನ ಹಾನಿ ತಡೆಯಲು ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಇದರಿಂದ ಒಬ್ಬರ ಜೀವ ಉಳಿಸಿದ್ದೇವೆ ಎಂದು ಪೊಲೀಸ್ ಮುಖ್ಯಸ್ಥ ಕೋರಿ ಮೋರ್ಗಾನ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


