ವಿದೇಶ

ಲಂಡನ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ: ಭಾರತದ ಹೈಕಮಿಷನ್ ಕಚೇರಿ ತೀವ್ರ ಖಂಡನೆ; Video

ಭಾರತದ ಹೈಕಮಿಷನ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದೆ, ಇದನ್ನು ನಾಚಿಕೆಗೇಡಿನ ಕೃತ್ಯ ಮತ್ತು ಅಹಿಂಸೆಯ ಪರಂಪರೆಯ ಮೇಲಿನ ದಾಳಿ ಎಂದು ಕರೆದಿದೆ.

ಲಂಡನ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ: ಭಾರತದ ಹೈಕಮಿಷನ್ ಕಚೇರಿ ತೀವ್ರ ಖಂಡನೆ; Video
ಲಂಡನ್‌ನ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ
Published On :

ಅಕ್ಟೋಬರ್ 2 ರಂದು ಮಹಾತ್ಮಾ ಗಾಂಧಿ ಜನ್ಮದಿನ. ಅದಕ್ಕೆ ಎರಡು ದಿನ ಮೊದಲು ಲಂಡನ್‌ನ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ.

ಭಾರತದ ಹೈಕಮಿಷನ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದೆ, ಇದನ್ನು ನಾಚಿಕೆಗೇಡಿನ ಕೃತ್ಯ ಮತ್ತು ಅಹಿಂಸೆಯ ಪರಂಪರೆಯ ಮೇಲಿನ ದಾಳಿ ಎಂದು ಕರೆದಿದೆ.

ಲಂಡನ್‌ನ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯ ಧ್ವಂಸ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇವೆ. ಇದು ಕೇವಲ ವಿಧ್ವಂಸಕ ಕೃತ್ಯವಲ್ಲ, ಅಂತಾರಾಷ್ಟ್ರೀಯ ಅಹಿಂಸಾ ದಿನಕ್ಕೆ ಮೂರು ದಿನಗಳ ಮೊದಲು ಅಹಿಂಸೆಯ ಕಲ್ಪನೆಯ ಮೇಲೆ ಮತ್ತು ಮಹಾತ್ಮರ ಪರಂಪರೆಯ ಮೇಲೆ ನಡೆದ ಹಿಂಸಾತ್ಮಕ ದಾಳಿಯಾಗಿದೆ ಎಂದು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ.

ಭಾರತದ ಹೈಕಮಿಷನ್ ಕಚೇರಿ ಸ್ಥಳೀಯ ಅಧಿಕಾರಿಗಳೊಂದಿಗೆ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ನಮ್ಮ ತಂಡವು ಈಗಾಗಲೇ ಸ್ಥಳಕ್ಕೆ ಧಾವಿಸಿದ್ದು ಪ್ರತಿಮೆಯನ್ನು ಅದರ ಮೂಲ ರಚನೆಯೊಂದಿಗೆ ಪುನಃಸ್ಥಾಪಿಸಲು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ ಎಂದು ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.