ವಿದೇಶ

ಬಾಗ್ದಾದ್ ನಲ್ಲಿ ಅಮೆರಿಕಾ ಪತ್ರಕರ್ತೆ ಶೆಲ್ಲಿ ಕಿಟೆಲ್ಸನ್ ಅಪಹರಣ!

ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಅಪಹರಣಕಾರರ ವಾಹನ ಮಗುಚಿ ಬಿದ್ದಿದೆ ಎಂದು ಎಪಿ ವರದಿ ಮಾಡಿದೆ. ಮಂಗಳವಾರ ಸಂಜೆ ಅಪಹರಣ ನಡೆದಿರುವುದನ್ನು ದೃಢಪಡಿಸಿದೆ.

ಬಾಗ್ದಾದ್ ನಲ್ಲಿ ಅಮೆರಿಕಾ ಪತ್ರಕರ್ತೆ ಶೆಲ್ಲಿ ಕಿಟೆಲ್ಸನ್ ಅಪಹರಣ!
ಶೆಲ್ಲಿ ಕಿಟೆಲ್ಸನ್
Published On :

ಬಾಗ್ದಾದ್: ಅಮೆರಿಕದ ಹವ್ಯಾಸಿ ಪತ್ರಕರ್ತೆ ಶೆಲ್ಲಿ ಕಿಟೆಲ್ಸನ್ ಅವರನ್ನು ಬಾಗ್ದಾದ್ ನಲ್ಲಿ ಅಪರಿಚಿತರು ಅಪಹರಣ ಮಾಡಿದ್ದಾರೆ ಎಂದು ಇರಾಕ್ ನ ರಕ್ಷಣಾ ಸಚಿವಾಲಯ ಪ್ರಕಟಿಸಿದೆ.

ಅಪಹರಣಕಾರರನ್ನು ಪತ್ತೆ ಮಾಡಲು ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನಿಖರವಾದ ಗುಪ್ತಚರ ಮಾಹಿತಿಗಳ ಆಧಾರದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಇರಾಕ್ ನ ರಕ್ಷಣಾ ಸಚಿವಾಲಯ ಸ್ಪಷ್ಟಪಡಿಸಿದೆ.

ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಅಪಹರಣಕಾರರ ವಾಹನ ಮಗುಚಿ ಬಿದ್ದಿದೆ ಎಂದು ಎಪಿ ವರದಿ ಮಾಡಿದೆ. ಮಂಗಳವಾರ ಸಂಜೆ ಅಪಹರಣ ನಡೆದಿರುವುದನ್ನು ದೃಢಪಡಿಸಿದೆ. ಯಾವ ಸ್ಥಳದಿಂದ ಅಪಹರಣವಾಗಿದೆ ಎಂದು ಸ್ಪಷ್ಟಪಡಿಸಿಲ್ಲ. ಆದಾಗ್ಯೂ ಬಾಗ್ದಾದ್ ನಿಂದ ಅಪಹರಣ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಒಬ್ಬ ಶಂಕಿತನನ್ನು ಬಂಧಿಸಲಾಗಿದ್ದು, ಅಪಹರಣಕ್ಕೆ ಬಳಸಲಾದ ವಾಹನಗಳಲ್ಲಿ ಒಂದನ್ನು ವಶಪಡಿಸಿಕೊಳ್ಳಲಾಗಿದೆ, ಆದರೆ ಇತರರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.

ಪತ್ರಕರ್ತೆ ಶೆಲ್ಲಿ ಕಿಟೆಲ್ಸನ್ ಎಂದು ಸ್ಥಳೀಯ ಮಾಧ್ಯಮಗಳು ಗುರುತಿಸಿವೆ. ಕಿಟಲ್ಸನ್ ಈ ಪ್ರದೇಶದಲ್ಲಿ ದೀರ್ಘಕಾಲದಿಂದ ಫ್ರೀಲ್ಯಾನ್ಸರ್ ಆಗಿದ್ದು, ಸಿರಿಯಾ ಮತ್ತು ಇರಾಕ್‌ನಿಂದ ವ್ಯಾಪಕವಾಗಿ ವರದಿ ಮಾಡುತ್ತಿದ್ದರು. ಇವರು ಅಮೆರಿಕದ ಪಾಸ್ ಪೋರ್ಟ್ ಹೊಂದಿದ್ದು, ಪ್ರಶಸ್ತಿ ಪುರಸ್ಕೃತ ಪತ್ರಕರ್ತೆಯನ್ನು ಬಿಡುಗಡೆಗೊಳಿಸಲು ಎಲ್ಲಾ ರೀತಿಯ ಪ್ರಯತ್ನಗಳು ನಡೆದಿವೆ ಎಂದು ಅಧಿಕೃತ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.