West-Asia war: 'ಬೇಜವಾಬ್ದಾರಿಯುತ ಬೆದರಿಕೆ'ಗಳಿಗೆ ತಲೆಬಾಗಲ್ಲ: ಟ್ರಂಪ್'ಗೆ ಇರಾನ್ ತಿರುಗೇಟು!
ಟ್ರಂಪ್ ಅವರ ಈ ಬೆದರಿಕೆ ಅಮೆರಿಕ ಮತ್ತು ಇಸ್ರೇಲ್ ಪಡೆಗಳ ವಿರುದ್ಧ ಇಸ್ಲಾಮಿಕ್ ಹೋರಾಟಗಾರರು ನಡೆಸುತ್ತಿರುವ ನಿರಂತರ ಆಕ್ರಮಣಕಾರಿ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರುವುದಿಲ್ಲ. ಅಲ್ಲದೆ, ಮಧ್ಯಪ್ರಾಚ್ಯದಲ್ಲಿ ಅಮೆರಿಕ ಅನುಭವಿಸಿರುವ ಅವಮಾನವನ್ನು ಇದರಿಂದ ಅಳಿಸಿಹಾಕಲು ಸಾಧ್ಯವಿಲ್ಲ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಕಠಿಣ ಎಚ್ಚರಿಕೆಗಳಿಗೆ ಇರಾನ್ ತೀವ್ರವಾಗಿ ತಿರುಗೇಟು ನೀಡಿದ್ದು, “ನಿಮ್ಮ ಬೇಜವಾಬ್ದಾರಿಯುತ ಬೆದರಿಕೆಗಳಿಗೆ ತಲೆಬಾಗಲ್ಲ” ಎಂದು ಸ್ಪಷ್ಟಪಡಿಸಿದೆ.
ಟ್ರಂಪ್ ಎಚ್ಚರಿಕೆ ಕುರಿತು ಇರಾನ್‌ನ ‘ಖಾತಮ್ ಅಲ್ ಅಂಬಿಯಾ’ ಜಂಟಿ ಮಿಲಿಟರಿ ಕಮಾಂಡ್ ಪ್ರತಿಕ್ರಿಯೆ ನೀಡಿದ್ದು, ಪದೇ ಪದೇ ಮಿಲಿಟರಿ ವೈಫಲ್ಯ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷರು ಬೇಜವಾಬ್ದಾರಿಯುತ ಬೆದರಿಕೆಗಳನ್ನು ಹಾಕುತ್ತಿದ್ದಾರೆಂದು ಹೇಳಿದ್ದಾರೆ.
ಟ್ರಂಪ್ ಅವರ ಈ ಬೆದರಿಕೆ ಅಮೆರಿಕ ಮತ್ತು ಇಸ್ರೇಲ್ ಪಡೆಗಳ ವಿರುದ್ಧ ಇಸ್ಲಾಮಿಕ್ ಹೋರಾಟಗಾರರು ನಡೆಸುತ್ತಿರುವ ನಿರಂತರ ಆಕ್ರಮಣಕಾರಿ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರುವುದಿಲ್ಲ. ಅಲ್ಲದೆ, ಮಧ್ಯಪ್ರಾಚ್ಯದಲ್ಲಿ ಅಮೆರಿಕ ಅನುಭವಿಸಿರುವ ಅವಮಾನವನ್ನು ಇದರಿಂದ ಅಳಿಸಿಹಾಕಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ ತಮ್ಮ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದೂ ಎಚ್ಚರಿಸಿದ್ದಾರೆ.
ವಿಶೇಷವಾಗಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ತನ್ನ ದಾಳಿಗಳನ್ನು ತೀವ್ರಗೊಳಿಸುವ ಸೂಚನೆ ನೀಡಿರುವುದು ಪರಿಸ್ಥಿತಿಯನ್ನು ಇನ್ನಷ್ಟು ಗಂಭೀರಗೊಳಿಸಿದೆ.
ಈ ಬೆಳವಣಿಗೆಗಳ ಹಿನ್ನೆಲೆ, ಗಲ್ಫ್ ಪ್ರದೇಶದಲ್ಲಿ ಹಲವು ಸ್ಥಳಗಳಲ್ಲಿ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆದಿರುವುದು ವರದಿಯಾಗುತ್ತಿವೆ. ಕೆಲವು ವರದಿಗಳ ಪ್ರಕಾರ, ಅಮೆರಿಕಾ ಮತ್ತು ಅದರ ಮಿತ್ರ ರಾಷ್ಟ್ರಗಳ ಸೈನಿಕ ನೆಲೆಗಳು ಹಾಗೂ ಪ್ರಮುಖ ಮೂಲಸೌಕರ್ಯಗಳು ಗುರಿಯಾಗಿವೆ ಎಂದು ಹೇಳಲಾಗುತ್ತಿದೆ. ಆದರೆ ಈ ಕುರಿತು ಸ್ಪಷ್ಟ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ.
ಈ ಬೆಳವಣಿಗೆಗಳ ಹಿನ್ನೆಲೆ, ಗಲ್ಫ್ ಪ್ರದೇಶದಲ್ಲಿ ಹಲವು ಸ್ಥಳಗಳಲ್ಲಿ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆದಿರುವುದು ವರದಿಯಾಗುತ್ತಿವೆ. ಕೆಲವು ವರದಿಗಳ ಪ್ರಕಾರ, ಅಮೆರಿಕಾ ಮತ್ತು ಅದರ ಮಿತ್ರ ರಾಷ್ಟ್ರಗಳ ಸೈನಿಕ ನೆಲೆಗಳು ಹಾಗೂ ಪ್ರಮುಖ ಮೂಲಸೌಕರ್ಯಗಳು ಗುರಿಯಾಗಿವೆ ಎಂದು ಹೇಳಲಾಗುತ್ತಿದೆ. ಆದರೆ ಈ ಕುರಿತು ಸ್ಪಷ್ಟ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ.
ಟ್ರಂಪ್ ಎಚ್ಚರಿಕೆ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಇರಾನ್ ಸ್ಟ್ರೇಟ್ ಆಫ್ ಹೋರ್ಮುಜ್ ತೆರೆಯದಿದ್ದರೆ “ಒಂದು ರಾತ್ರಿಯನ್ನಲ್ಲೇ ಇಡೀ ದೇಶವನ್ನೇ ನಾಶಮಾಡಬಹುದು” ಎಂದು ಟ್ರಂಪ್ ಅವರು ಹೇಳಿದ್ದು, ವಿದ್ಯುತ್ ಘಟಕಗಳು ಮತ್ತು ಸೇತುವೆಗಳನ್ನು ಗುರಿಯಾಗಿಸುವುದಾಗಿ ಎಚ್ಚರಿಕೆ ನೀಡಿದ್ದರು.
ಈ ಹೇಳಿಕೆಗಳು ಜಾಗತಿಕ ಮಟ್ಟದಲ್ಲಿ ಭಾರೀ ಟೀಕೆಗೆ ಗುರಿಯಾಗಿವೆ. ಅಂತರಾಷ್ಟ್ರೀಯ ಕಾನೂನು ತಜ್ಞರು ಮತ್ತು ಮಾನವ ಹಕ್ಕು ಸಂಘಟನೆಗಳು ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸುವ ಬೆದರಿಕೆಗಳು ಯುದ್ಧ ಅಪರಾಧಗಳಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಹಾರ್ಮುಜ್ ಜಲಸಂಧಿ ತೆರೆಯುವ ವಿಚಾರದಲ್ಲಿ ಉಭಯ ದೇಶಗಳ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಜಾಗತಿಕ ತೈಲ ಸರಬರಾಜಿನ ಮೇಲೆ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ಈ ಮಾರ್ಗವು ವಿಶ್ವದ ತೈಲ ಸಾಗಣೆಯ ಪ್ರಮುಖ ದಾರಿ ಆಗಿದ್ದು, ಯಾವುದೇ ಅಡಚಣೆ ಉಂಟಾದರೆ ತೈಲ ಬೆಲೆಗಳು ಏರಿಕೆಯಾಗುವ ಸಾಧ್ಯತೆ ಇದೆ.
ಇರಾನ್ ಈಗಾಗಲೇ “ವ್ಯಾಪಕ ಮತ್ತು ಭೀಕರ ಪ್ರತಿದಾಳಿ” ಮಾಡುವ ಎಚ್ಚರಿಕೆಯನ್ನು ನೀಡಿದ್ದು, ಟ್ರಂಪ್ ಮತ್ತಷ್ಟು ದಾಳಿ ಮುಂದುವರಿಸಿದರೆ ಮಧ್ಯಪ್ರಾಚ್ಯ ಪ್ರದೇಶ ಸಂಪೂರ್ಣ ಅಶಾಂತಿಗೊಳಗಾಗಬಹುದು ಎಂದು ಸೂಚಿಸಿದೆ.
ಇದಲ್ಲದೆ, ಯುದ್ಧದ ನಿಯಮಗಳನ್ನು ಪಾಲಿಸಬೇಕು ಎಂದು ಅಂತರರಾಷ್ಟ್ರೀಯ ರೆಡ್‌ಕ್ರಾಸ್ ಸಮಿತಿ ಕೂಡ ಎಚ್ಚರಿಕೆ ನೀಡಿದ್ದು, ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ಅಥವಾ ಬೆದರಿಕೆ ನೀಡುವುದು ಮಾನವೀಯ ಕಾನೂನು ಉಲ್ಲಂಘನೆ ಆಗಬಹುದು ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



